ಮಹಿಳಾ ಪ್ರಯಾಣಿಕರ ಹೆಚ್ಚಳಕ್ಕೆ ಕೆಎಸ್​ಆರ್​ಟಿಸಿ ಫೆಡರೇಷನ್ ಕಳವಳ: ಸಿದ್ದರಾಮಯ್ಯ ಮುಂದೆ 7 ಬೇಡಿಕೆ

ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯಗೆ(Siddaramaiah) KSRTC ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಪತ್ರ ಬರೆದಿದ್ದಾರೆ.

ಮಹಿಳಾ ಪ್ರಯಾಣಿಕರ ಹೆಚ್ಚಳಕ್ಕೆ ಕೆಎಸ್​ಆರ್​ಟಿಸಿ ಫೆಡರೇಷನ್ ಕಳವಳ: ಸಿದ್ದರಾಮಯ್ಯ ಮುಂದೆ 7 ಬೇಡಿಕೆ
ಶಕ್ತಿ ಯೋಜನೆ
Follow us
|

Updated on:Jun 15, 2023 | 12:17 PM

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ‘ಶಕ್ತಿ’ ಯೋಜನೆಯನ್ನು(Shakti Scheme) ಘೋಷಿಸಿತ್ತು. ಈ ಯೋಜನೆಯ ಮೂಲಕ ಆಯ್ದ ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಮಾಡಬಹುದು. ಇನ್ನು ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯಗೆ(Siddaramaiah) KSRTC ಸ್ಟಾಫ್ ಅಂಡ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಪತ್ರ ಬರೆದಿದ್ದಾರೆ. ಚಾಲಕರ ಕಷ್ಟಗಳನ್ನ ಸರ್ಕಾರಕ್ಕೆ ತಿಳಿಸಲು ಸುದೀರ್ಘ ಪತ್ರ ಬರೆದಿದ್ದಾರೆ.

ಅನಂತ ಸುಬ್ಬರಾವ್ ಸಿಎಂಗೆ ಬರೆದಿರುವ ಪತ್ರದಲ್ಲೇನಿದೆ?

  • ಉಚಿತ ಯೋಜನೆಯಿಂದ ಪ್ರಯಾಣಿಸುತ್ತಿರುವ ಮಹಿಳೆಯರ ಸಂಖ್ಯೆ ಜಾಸ್ತಿಯಾಗಿದೆ. ಈ ಹಿನ್ನಲೆ ನಿಗಮಗಳ ವಾಹನಗಳ ಸಂಖ್ಯೆಯನ್ನು ಅವಶ್ಯಕತೆಗೆ ಅನುಗುಣವಾಗಿ ಹೆಚ್ಚಿಸಬೇಕು.
  • ಕೆಲವು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳು ಸಾಕಷ್ಟು ಸಂಖ್ಯೆಯಲ್ಲಿರುವುದರಿಂದ ಮಹಿಳೆಯರು ಈ ವಾಹನಗಳನ್ನು ಬಿಟ್ಟು ನಮ್ಮ ಸಂಸ್ಥೆಯ ವಾಹನಗಳಲ್ಲಿ ಸಂಚರಿಸುತ್ತಿದ್ದಾರೆ. ಆದ ಕಾರಣ ಖಾಸಗಿ ಬಸ್‌ಗಳಲ್ಲಿ ಸಂಚರಿಸುತ್ತಿರುವ ಮಹಿಳೆಯರ ಸಂಖ್ಯೆ ಕಡಿಮೆ ಇದೆ.  ಅಲ್ಲಿ ಕೆಲಸ ಮಾಡುವ ಬಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಮತ್ತಿತರ ಸಿಬ್ಬಂದಿಗಳು ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಖಾಸಗಿ ವಾಹನಗಳಿಗೆ ಬಂಡವಾಳ ಹೂಡಿರುವ ಮಾಲೀಕರೂ ಕೂಡ ಸಂಕಷ್ಟದಲ್ಲಿದ್ದಾರೆ.
  • ಶಕ್ತಿ ಯೋಜನೆಯಿಂದ ಉಂಟಾಗಿರುವ ಬಸ್‌ಗಳು ಹೆಚ್ಚಿನ ಬೇಡಿಕೆಯನ್ನು ಪೂರೈಸಲು ಸಾರಿಗೆ ನಿಗಮಗಳು ತುರ್ತು ಕ್ರಮಗಳನ್ನು ತೆಗೆದುಕೊಳ್ಳಬೇಕು. ವಾಹನಗಳ ಕೊರತೆ ಇರುವುದರಿಂದ ಬೇರುಮಟ್ಟದಲ್ಲಿ ಕೆಲಸ ಮಾಡುತ್ತಿರುವ ನಮ್ಮ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಿಸಲು ಇಕಟ್ಟಿನ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ.
  • ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿರುವ ಸನ್ಮಾನ್ಯ ಶ್ರೀ ಶ್ರೀನಿವಾಸಮೂರ್ತಿ ಏಕಸದಸ್ಯ ಸಮಿತಿಯು ತನ್ನ ವರದಿ ಮತ್ತು ಶಿಫಾರಸುಗಳಲ್ಲಿ ಕೆಎಸ್‌ಆರ್ ಟಿಸಿಯ ಒಂದೇ ಒಂದು ಬಸ್ ಹೋಗದಿರುವಂತಹ 2500ಕ್ಕೂ ಹೆಚ್ಚು ಹಳ್ಳಿಗಳನ್ನು ಗುರುತಿಸಿದ್ದಾರೆ.
  • ಈ ಹಳ್ಳಿಗಳಿಗೂ ನಮ್ಮ ನಿಗಮಗಳು ಬಸ್‌ ವ್ಯವಸ್ಥೆ ಮಾಡಬೇಕೆಂದು ಶಿಫಾರಸು ಮಾಡಿದ್ದಾರೆ. ನೀವು ಕಳೆದ ಬಾರಿ ಸಿಎಂ ಆಗಿದ್ದಾಗ ರಾಜ್ಯದ ಜನತೆಗೆ ಹೆಚ್ಚಿನ ಹಾಗೂ ಸಮರ್ಪಕ ಸಾರಿಗೆ ಸೇವಕರನ್ನು ಸಾರಿಗೆ ನಿಗಮಗಳ ಮೂಲಕ ಒದಗಿಸಲು Comprehensive Area Scheme ತಂದಿದ್ದರೆ.  ಇದರ ಪ್ರಕಾರ ಯಾವುದೇ ವಿಧವಾದ ಸಾರಿಗೆ ಸೇವೆಗಳನ್ನು ಒದಗಿಸುವ ಹಕ್ಕು ರಾಜ್ಯ ರಸ್ತೆ ಸಾರಿಗೆ ನಿಗಮಗಳಿಗೆ ಮಾತ್ರ ಮೀಸಲಾಗಿರುತ್ತದೆ.
  • ನಂತರ ಬಂದ ಸರ್ಕಾರ ಈ ಅಧಿಸೂಚನೆಗೆ ಹಲವು ಮಾರ್ಚ್ 29 ರಂದು ಹೊರಡಿಸಿದ ಅಧಿಸೂಚನೆ ಹೊರಡಿಸಿದೆ. ತಾವು ತಂದಿದ್ದ ಅಧಿಸೂಚನೆಯ ಅಂಶ ಮತ್ತು ಉದ್ದೇಶವನ್ನು ಗಾಳಿಗೆ ತೂರಿ ನಿಗಮಗಳಿಗೆ ಆದಾಯ ಬರುತ್ತಿದ್ದ 41 ಮಾರ್ಗಗಳನ್ನು ಖಾಸಗಿಯವರಿಗೆ ಒಪ್ಪಿಸುವ ವ್ಯವಸ್ಥೆ ಮಾಡಿತು. ನಂತ್ರ ನಗರ ಪ್ರದೇಶಗಳಲ್ಲೂ 20 ಕಿಲೋಮೀಟರ್ ವರೆಗೆ ಖಾಸಗಿ ವಾಹನಗಳಿಗೆ ಅನುಮತಿ ನೀಡಿತು.
  • ಈಗ ತಾವು ಹೊರಡಿಸಿದ್ದ ಅಧಿಸೂಚನೆಯನ್ನು ಜಾರಿ ಮಾಡುವ ಕ್ರಮವನ್ನು ಸರ್ಕಾರ ತೆಗೆದುಕೊಳ್ಳಬೇಕು.
  • ಖಾಸಗಿ ಸಾರಿಗೆ ಬಸ್‌ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿರುವ ನೌಕರರನ್ನು ಕಾಪಾಡುವ ದೃಷ್ಟಿಯಿಂದ ಈ ಕ್ರಮ ತೀಘ್ರವಾಗಿ ಆಗಬೇಕು.
  • 1975ರಲ್ಲಿ ದೇವರಾಜ ಅರಸ್ ರವರು ಕಾಂಟ್ರಾಕ್ಟ್ ಕ್ಯಾರೇಜಸ್ ಆಬಾಲಿಷನ್ ಆಕ್ಟ್ 1976 ತಂದಿದ್ರು
  • ಇದು ಕೆಎಸ್‌ಆರ್‌ಟಿಸಿ ದೊಡ್ಡದಾಗಿ ಬೆಳೆದು ರಾಜ್ಯದ ಜನರಿಗೆ ಬಹಳ ಉತ್ತಮವಾದ ಸೇವೆ ಕೊಡಲು ಸಾಧ್ಯವಾಯಿತು.
  • ಸಾರಿಗೆ ನಿಗಮಗಳಲ್ಲಿ ಈಗ 16,969 ಹುದ್ದೆಗಳು (ಜನವರಿ 2022ರಂತೆ) ಖಾಲಿ ಇದೆ. ಈ ಹಿನ್ನಲೆ ಹುದ್ದೆಗಳನ್ನ ಭರ್ತಿ ಮಾಡಲು ಕೂಡಲೇ ತುರ್ತು ಕ್ರಮ ಕೈಗೊಳ್ಳಬೇಕು.

    ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:05 pm, Thu, 15 June 23

ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ