AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರಮಟ್ಟದಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕೆಎಸ್​ಆರ್​ಟಿಸಿ!

ಕೆಎಸ್​ಆರ್​ಟಿಸಿ ಇಲೆಟ್ಸ್ ಮೊಬಿಲಿಟಿ ಎಕ್ಸೆಲೆನ್ಸ್ ಪ್ರಶಸ್ತಿಗಳಲ್ಲಿ ಧ್ವನಿ ಸ್ಪಂದನ ಮತ್ತು AWATAR 4.0 ಯೋಜನೆಗಳಿಗಾಗಿ ಎರಡು ರಾಷ್ಟ್ರೀಯ ಪ್ರಶಸ್ತಿಗಳನ್ನು ಗಳಿಸಿದೆ. ಧ್ವನಿ ಸ್ಪಂದನವು ವಿಕಲಚೇತನರು ಮತ್ತು ಹಿರಿಯರಿಗೆ ಸುರಕ್ಷಿತ, ಸುಲಭ ಸಾರಿಗೆ ಒದಗಿಸಿದರೆ, AWATAR 4.0 ಡಿಜಿಟಲ್ ಟಿಕೆಟ್ ಕಾಯ್ದಿರಿಸುವಿಕೆ ಮತ್ತು UPI ಪಾವತಿಯನ್ನು ಸಕ್ರಿಯಗೊಳಿಸುತ್ತದೆ. ಈ ಪ್ರಶಸ್ತಿಗಳು KSRTCಯ ನವೀನತೆ ಮತ್ತು ಡಿಜಿಟಲೀಕರಣದ ಬದ್ಧತೆಯನ್ನು ಎತ್ತಿ ಹಿಡಿಯುತ್ತವೆ.

ರಾಷ್ಟ್ರಮಟ್ಟದಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕೆಎಸ್​ಆರ್​ಟಿಸಿ!
ರಾಷ್ಟ್ರಮಟ್ಟದಲ್ಲಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕೆಎಸ್​ಆರ್​ಟಿಸಿ! Image Credit source: Deccan herald
ಭಾವನಾ ಹೆಗಡೆ
|

Updated on:Mar 27, 2026 | 10:18 AM

Share

ಬೆಂಗಳೂರು, ಮಾರ್ಚ್​ 27: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ತನ್ನ ಸಾಧನೆಯನ್ನು ತೋರಿದೆ. ಇಲೆಟ್ಸ್ ಮೊಬಿಲಿಟಿ ಎಕ್ಸೆಲೆನ್ಸ್ ಅವಾರ್ಡ್​ಸ್​ನಲ್ಲಿ (Elets Mobility Excellence Awards 2026) ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ.

ಇನೋವೇಶನ್ ಇನ್ ಸಿಟಿಜೆನ್ ಎಂಗೇಜ್​ಮೆಂಟ್ ಆ್ಯಂಡ್ ಇನ್ಕ್ಲೂಸಿವ್ ಮೊಬಿಲಿಟಿ ಅಂದರೆ ತಂತ್ರಜ್ಞಾನ ಮತ್ತು ಸಮುದಾಯದ ಸಲಹೆಗಳನ್ನು ಬಳಸಿ, ಸಮಾಜದ ಪ್ರತಿಯೊಬ್ಬರಿಗೂ (ವಿಶೇಷವಾಗಿ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ) ಸುಲಭ ಹಾಗೂ ಸುರಕ್ಷಿತ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಧ್ವನಿ ಸ್ಪಂದನ ಯೋಜನೆ ಪ್ರಶಸ್ತಿ ಪಡೆದಿದೆ. ಅದರೊಂದಿಗೆ ಔಟ್​ಸ್ಟ್ಯಾಂಡಿಂಗ್ ಪಬ್ಲಿಕ್ ಟ್ರಾನ್ಸ್​ಪೋರ್ಟ್​ ಡಿಜಿಟೈಜೇಶನ್ ಇನಿಶಿಯೇಟಿವ್ ಅಂದರೆ ತಂತ್ರಜ್ಞಾನ ಆಧಾರಿತ ಯೋಜನೆಯು ಸಾರ್ವಜನಿಕ ಸಾರಿಗೆಯ ಡಿಜಿಟಲೀಕರಣದಲ್ಲಿ ಮಾಡಿದ ಅತ್ಯುತ್ತಮ ಸಾಧನೆಗಾಗಿ AWATAR 4.0 ಯೋಜನೆಗೂ ರಾಷ್ಟ್ರೀಯ ಮಟ್ಟದ ಪ್ರಶಸ್ತಿಯನ್ನು ಪಡೆದಿದೆ. ಈ ಯೋಜನೆ ಯುಪಿಐ ಪಾವತಿ ಸೌಲಭ್ಯವನ್ನು ಹೊಂದಿರುವುದರಿಂದ ಪ್ರಯಾಣಿಕರಿಗೆ ಹೆಚ್ಚು ಉಪಯೋಗಿಯಾಗಿದೆ.

ಧ್ವನಿ ಸ್ಪಂದನ ಯೋಜನೆ

ಮೈಸೂರು ನಗರ ಸಾರಿಗೆ ಬಸ್ಸುಗಳಲ್ಲಿನ ಸುಮಾರು 200 ಬಸ್ಸುಗಳಲ್ಲಿ ಜಾರಿಗೆ ತರಲಾದ ಧ್ವನಿ ಸ್ಪಂದನ ಯೋಜನೆ, ದೃಷ್ಟಿಹೀನ ಪ್ರಯಾಣಿಕರಿಗಾಗಿ ವಿಶೇಷವಾಗಿ ರೂಪಿಸಲಾದ ಆನ್‌ಬೋರ್ಡ್ ಗುರುತು ಮತ್ತು ನಾವಿಗೇಶನ್ ವ್ಯವಸ್ಥೆಯಾಗಿದೆ. ಜರ್ಮನಿಯ GIZ ಸಂಸ್ಥೆಯ ಸಹಯೋಗದಲ್ಲಿ ಅನುಷ್ಠಾನಗೊಂಡಿರುವ ಈ ಯೋಜನೆ, ದೃಷ್ಟಿಹೀನರ ಇತರರ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ, ಅವರ ಆತ್ಮವಿಶ್ವಾಸ, ಸುರಕ್ಷತೆ ಮತ್ತು ಸ್ವತಂತ್ರ ಪ್ರಯಾಣವನ್ನು ಉತ್ತೇಜಿಸಿದೆ ಎಂದು ನಿಗಮ ತಿಳಿಸಿದೆ.

ಇದನ್ನೂ ಓದಿ ಕೆಎಸ್ಆರ್​​ಟಿಸಿ ʻಧ್ವನಿ ಸ್ಪಂದನʼ ಉಪಕ್ರಮಕ್ಕೆ ರಾಷ್ಟ್ರೀಯ ಪ್ರಶಸ್ತಿ

ಏನಿದು AWATAR 4.0?

ಇನ್ನೊಂದೆಡೆ, AWATAR (Anywhere Anytime Advance Reservation) ಯೋಜನೆ KSRTCಯ ಡಿಜಿಟಲ್ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆಯಾಗಿದ್ದು, ಪ್ರಯಾಣಿಕರು ವೆಬ್ ಹಾಗೂ ಮೊಬೈಲ್ ವೇದಿಕೆಗಳ ಮೂಲಕ ಎಲ್ಲಿಂದ ಬೇಕಾದರೂ, ಯಾವಾಗ ಬೇಕಾದರೂ ಟಿಕೆಟ್ ಕಾಯ್ದಿರಿಸಿಕೊಳ್ಳಲು ಅನುಕೂಲ ಮಾಡಿಕೊಡುತ್ತಿದೆ. ಒಟ್ಟಾರೆ, ಈ ಎರಡು ಪ್ರಶಸ್ತಿಗಳು KSRTCಯ ನವೀನತೆ ಮತ್ತು ಡಿಜಿಟಲೀಕರಣದ ದಿಸೆಯಲ್ಲಿ ಕೈಗೊಂಡ ಪ್ರಯತ್ನಗಳಿಗೆ ಸಿಕ್ಕ ಮಹತ್ವದ ಮಾನ್ಯತೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:02 am, Fri, 27 March 26

Follow Us
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಬಂಕ್​ನತ್ತ ಸುಳಿಯದ ವಾಹನ ಸವಾರರು
ಪೆಟ್ರೋಲ್ ಡೀಸೆಲ್ ದರ ಏರಿಕೆ: ನಯಾರಾ ಬಂಕ್​ನತ್ತ ಸುಳಿಯದ ವಾಹನ ಸವಾರರು
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
ಯಾರಿಗೂ ನೋವಾಗದಂತೆ ಸಿನಿಮಾ ಮಾಡಲಿ; ಬಾಸ್ ಚಿತ್ರದ ಬಗ್ಗೆ ಪ್ರಥಮ್ ರಿಯಾಕ್ಷನ್
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಅಪಾರ್ಟ್​ಮೆಂಟ್ ನಿವಾಸಿಗಳ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಹಿಳೆ ಸಾವು
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಶ್ರೀರಾಮನವಮಿಯನ್ನು ಹೇಗೆ ಆಚರಿಸಬೇಕು? ಇಲ್ಲಿದೆ ಮಾಹಿತಿ
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್