ಗೌರಿ ಗಣೇಶ ಹಬ್ಬಕ್ಕೆ ಕೆಎಸ್ಆರ್​ಟಿಸಿ ಕಡೆಯಿಂದ ಬಂಪರ್ ಆಫರ್: ಹೆಚ್ಚಿನ ಬಸ್ ವ್ಯವಸ್ಥೆ, ಟಿಕೆಟ್ ಬುಕಿಂಗ್​ಗೆ ರಿಯಾಯಿತಿ

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ 5% ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಬಂಪರ್ ಆಫರ್ ನೀಡಿದೆ.

ಗೌರಿ ಗಣೇಶ ಹಬ್ಬಕ್ಕೆ ಕೆಎಸ್ಆರ್​ಟಿಸಿ ಕಡೆಯಿಂದ ಬಂಪರ್ ಆಫರ್: ಹೆಚ್ಚಿನ ಬಸ್ ವ್ಯವಸ್ಥೆ, ಟಿಕೆಟ್ ಬುಕಿಂಗ್​ಗೆ ರಿಯಾಯಿತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Aug 25, 2022 | 6:46 PM

ಬೆಂಗಳೂರು: ಗೌರಿ ಗಣೇಶ ಹಬ್ಬದ(Gowri Ganesha Festival) ಹಿನ್ನಲೆ ಪ್ರಯಾಣಿಕರಿಗೆ ಕೆಎಸ್ಆರ್​ಟಿಸಿ (KSRTC) ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಆಗಸ್ಟ್ 30 ಹಾಗೂ 31ರಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡುವುದಾಗಿ ಕೆಎಸ್ಆರ್ಟಿಸಿ ತಿಳಿಸಿದೆ.

ಗೌರಿ ಗಣೇಶ ಹಬ್ಬಕ್ಕಾಗಿ ಕೆಎಸ್ಆರ್ಟಿಸಿಯಿಂದ 500 ಹೆಚ್ಚುವರಿ ಬಸ್ಸುಗಳು ಸೇವೆ ಸಲ್ಲಿಸಲಿವೆ. ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ತಿರುಪತಿ, ಹೈದರಾಬಾದ್ ಸೇರಿದಂತೆ ಹಲವೆಡೆಗೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.

ಟಿಕೆಟ್ ಬುಕಿಂಗ್​ಗೆ ಶೇಕಡಾ ಐದು -ಹತ್ತು ರಿಯಾಯಿತಿ:

ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ 5% ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಬಂಪರ್ ಆಫರ್ ನೀಡಿದೆ. ರಾಜ್ಯದ ಹಾಗೂ ಅಂತರಾಜ್ಯದ ವಿವಿಧ ಸ್ಥಳಗಳಿಂದ ದಿನಾಂಕ 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:32 pm, Thu, 25 August 22

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ