ಬೆಂಗಳೂರು: ಗೌರಿ ಗಣೇಶ ಹಬ್ಬದ(Gowri Ganesha Festival) ಹಿನ್ನಲೆ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ (KSRTC) ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಆಗಸ್ಟ್ 30 ಹಾಗೂ 31ರಂದು ಗೌರಿ ಗಣೇಶ ಹಬ್ಬದ ಹಿನ್ನಲೆ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಶೇಷ ಸಾರಿಗೆ ವ್ಯವಸ್ಥೆ ಮಾಡುವುದಾಗಿ ಕೆಎಸ್ಆರ್ಟಿಸಿ ತಿಳಿಸಿದೆ.
ಗೌರಿ ಗಣೇಶ ಹಬ್ಬಕ್ಕಾಗಿ ಕೆಎಸ್ಆರ್ಟಿಸಿಯಿಂದ 500 ಹೆಚ್ಚುವರಿ ಬಸ್ಸುಗಳು ಸೇವೆ ಸಲ್ಲಿಸಲಿವೆ. ಮೆಜೆಸ್ಟಿಕ್ ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕುಂದಾಪುರ, ತಿರುಪತಿ, ಹೈದರಾಬಾದ್ ಸೇರಿದಂತೆ ಹಲವೆಡೆಗೆ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ವಿರಾಜಪೇಟೆ, ಕುಶಾಲನಗರ ಹಾಗೂ ಶಾಂತಿನಗರ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳ ಕಡೆಗೆ ಬಸ್ ವ್ಯವಸ್ಥೆ ಮಾಡಲಾಗಿದೆ.
ಟಿಕೆಟ್ ಬುಕಿಂಗ್ಗೆ ಶೇಕಡಾ ಐದು -ಹತ್ತು ರಿಯಾಯಿತಿ:
ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡ ಆನ್ ಲೈನ್ ಮೂಲಕ ಟಿಕೆಟ್ ಬುಕಿಂಗ್ ಮಾಡಲು ಅವಕಾಶ ಮಾಡಿಕೊಡಲಾಗಿದೆ. 5ಕ್ಕೂ ಹೆಚ್ವು ಪ್ರಯಾಣಿಕರು ಮುಂಗಡ ಟಿಕೆಟ್ ಬುಕಿಂಗ್ ಮಾಡಿದಲ್ಲಿ 5% ರಿಯಾಯಿತಿ ಹಾಗೂ ಹೋಗುವ ಹಾಗೂ ಬರುವ ಟಿಕೆಟ್ ಒಟ್ಟಿಗೆ ಖರೀದಿಸಿದಲ್ಲಿ 10% ರಿಯಾಯಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಬಂಪರ್ ಆಫರ್ ನೀಡಿದೆ. ರಾಜ್ಯದ ಹಾಗೂ ಅಂತರಾಜ್ಯದ ವಿವಿಧ ಸ್ಥಳಗಳಿಂದ ದಿನಾಂಕ 31ರಂದು ಆಗಮಿಸುವ ಪ್ರಯಾಣಿಕರಿಗೂ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:32 pm, Thu, 25 August 22