AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಕೊಯಿಕ್ಕೋಡ್​​ ನಡುವೆ ಆ.15ರಿಂದ KSRTC ಫ್ಲೈ ಬಸ್ ಸಂಚಾರ: ಸಮಯ, ಟಿಕೆಟ್​​ ದರದ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೇರಳದ ಪ್ರಮುಖ ನಗರವಾದ ಕೊಯಿಕ್ಕೋಡ್‌ಗೆ'ಫ್ಲೈ ಬಸ್' ಸೇವೆಯನ್ನು ಆಗಸ್ಟ್ 15ರಿಂದ ಆರಂಭಿಸುತ್ತಿದೆ. ಬಸ್​​ ಮಾರ್ಗ, ಟಿಕೆಟ್​​ ದರದ ಸಂಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರು-ಕೊಯಿಕ್ಕೋಡ್​​ ನಡುವೆ ಆ.15ರಿಂದ KSRTC ಫ್ಲೈ ಬಸ್ ಸಂಚಾರ: ಸಮಯ, ಟಿಕೆಟ್​​ ದರದ ಮಾಹಿತಿ ಇಲ್ಲಿದೆ
ಬೆಂಗಳೂರು-ಕೊಯಿಕ್ಕೋಡ್​​ ನಡುವೆ ಆ.15ರಿಂದ ಫ್ಲೈ ಬಸ್ ಸಂಚಾರ
ಕಿರಣ್​ ಸೂರ್ಯ
| Edited By: |

Updated on:Aug 07, 2026 | 6:22 PM

Share

ಬೆಂಗಳೂರು, ಆಗಸ್ಟ್​​ 07: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(KSRTC)ದ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಬೆಂಗಳೂರು- ಕೇರಳದ ಕೊಯಿಕ್ಕೋಡ್​​ ನಡುವೆ ಸಂಪರ್ಕ ಕಲ್ಪಿಸುವ ಫ್ಲೈ ಬಸ್ ಸೇವೆ ಆರಂಭವಾಗುತ್ತಿದೆ. ಆಗಸ್ಟ್ 15ರಿಂದ ಈ ನೂತನ ಮಾರ್ಗದಲ್ಲಿ ಬಸ್ ಸಂಚಾರ ಶುರುವಾಗಲಿದ್ದು, ಬಸ್ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಯಲಹಂಕ, ಹೆಬ್ಬಾಳ ಹಾಗೂ ನಾಯಂಡಹಳ್ಳಿ ಮೆಟ್ರೋ ಸ್ಟೇಷನ್ ಮೂಲಕ ಮೈಸೂರು, ಹುಣಸೂರು, ಗೋಣಿಕೊಪ್ಪ, ಪೊನ್ನಂಪೇಟೆ, ಕುಟ್ಟಾ, ಮಾನಂತವಾಡಿ, ಕಲ್ಪಟ್ಟಾ ಮಾರ್ಗದಲ್ಲಿ ಕೋಯಿಕ್ಕೋಡ್ ತಲುಪಲಿದೆ.

ಬಸ್​​ ಮಾರ್ಗ ಮತ್ತು ಸಮಯದ ಮಾಹಿತಿ

ಬೆಂಗಳೂರು- ಕೊಯಿಕ್ಕೋಡ್ ಕೊಯಿಕ್ಕೋಡ್- ಬೆಂಗಳೂರು
ಸ್ಥಳ ಸಮಯ ಸ್ಥಳ ಸಮಯ
ಬೆಂಗಳೂರು ಏರ್​ಪೋರ್ಟ್​​ 22:45:00 ಕೊಯಿಕ್ಕೋಡ್- ಬೆಂಗಳೂರು 19:30:00
ನಾಯಂಡಳ್ಳಿ ಮೆಟ್ರೋ ನಿಲ್ದಾಣ 23:55:00 ಕಲ್ಪಟ್ಟಾ 20:40:00
ಮೈಸೂರು 02:45:00 ಮಾನಂತವಾಡಿ 21:15:00
ಗೋಣೊಕೊಪ್ಪ 04:15:00 ಗೋಣೊಕೊಪ್ಪ 22:50:00
ಮಾನಂತವಾಡಿ 05:20:00 ಮೈಸೂರು 00:30:00
ಕಲ್ಪಟ್ಟಾ 06:00:00 ನಾಯಂಡಳ್ಳಿ ಮೆಟ್ರೋ ನಿಲ್ದಾಣ 03:15:00
ಕೊಯಿಕ್ಕೋಡ್ 07:15:00 ಬೆಂಗಳೂರು ಏರ್​ಪೋರ್ಟ್​​ 04:15:00

ಇದನ್ನೂ ಓದಿ: ಜೋಗ ಜಲಪಾತ ವೀಕ್ಷಣೆಗೆ KSRTCಯಿಂದ ವೀಕೆಂಡ್ ಪ್ಯಾಕೇಜ್

ಟಿಕೆಟ್​​ ದರ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ 960 ರೂ., ಗೋಣಿಕೊಪ್ಪಕ್ಕೆ 1,200 ರೂ., ಮಾನಂತವಾಡಿಗೆ 1,350ರೂ, ಕಲ್ಪೆಟ್ಟಾಗೆ 1,400 ರೂ. ಮತ್ತು ಕೊಯಿಕ್ಕೋಡ್​​ಗೆ 1,500 ರೂಪಾಯಿ ದರವನ್ನು ನಿಗದಿಪಡಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:21 pm, Fri, 7 August 26

Follow Us
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ