AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ತೆರಳುವವರಿಗೆ ಕೆಎಸ್​ಆರ್​ಟಿಸಿ ವಿಶೇಷ ಬಸ್

KSRTC special bus to Shabarimala from Bengaluru: ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ ಬೆಂಗಳೂರಿನಿಂದ ಪಂಪಾಕ್ಕೆ ವಿಶೇಷ ಬಸ್​ ಸೌಕರ್ಯ ಕಲ್ಪಿಸಿದೆ. ಡಿಸೆಂಬರ್ 1ರಿಂದ ವಿಶೇಷ ಬಸ್ ಸೌಲಭ್ಯ ಪ್ರಯಾಣಿಕರಿಗೆ ಲಭ್ಯವಿರಲಿದ್ದು, ಯಾತ್ರಾರ್ಥಿಗಳು ಸದುಪಯೋಗಪಡೆದುಕೊಳ್ಳಬೇಕು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಬೆಂಗಳೂರಿನಿಂದ ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ತೆರಳುವವರಿಗೆ ಕೆಎಸ್​ಆರ್​ಟಿಸಿ ವಿಶೇಷ ಬಸ್
ಸಾಂದರ್ಭಿಕ ಚಿತ್ರ
Kiran HV
| Edited By: |

Updated on: Nov 27, 2023 | 2:57 PM

Share

ಬೆಂಗಳೂರು, ನವೆಂಬರ್ 27: ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆಗೆ (Shabarimala) ಅಯ್ಯಪ್ಪನ ದರ್ಶನಕ್ಕಾಗಿ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬೆಂಗಳೂರಿನಿಂದ ಬಸ್​​ ವ್ಯವಸ್ಥೆ ಮಾಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಕಾರ್ಯಚರಣೆ ನಡೆಸಲಿದೆ. ಬೆಂಗಳೂರಿಂದ ನೀಲಕ್ಕಲ್ (ಪಂಪಾ, ಶಬರಿಮಲೈ) ಮಾರ್ಗವಾಗಿ ವೋಲ್ವೋ ಬಸ್ ಸಂಚರಿಸಲಿದೆ.

ಡಿಸೆಂಬರ್ 1 ರಿಂದ ಶಬರಿಮಲೆಗೆ ವೋಲ್ವೋ ಬಸ್ ಸಂಚರಿಸಲಿದೆ. ವೋಲ್ವೊ ಬಸ್​​ನ ಟಿಕೆಟ್ ದರ, ಮಾರ್ಗ, ಸಂಚಾರದ ವೇಳಾಪಟ್ಟಿಯ ಕುರಿತು ಕೆಎಸ್​ಆರ್​ಟಿಸಿ ಮಾಹಿತಿ ನೀಡಿದೆ.

ವಯಸ್ಕರಿಗೆ ಬೆಂಗಳೂರಿಂದ ಶಬರಿಮಲೆಗೆ 1600 ರೂಪಾಯಿ ದರ ನಿಗದಿ ಮಾಡಲಾಗಿದೆ. ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50 ಕ್ಕೆ ಹೊರಡಲಿರುವ ವೋಲ್ವೋ ಬಸ್ ಮರುದಿನ ಬೆಳಿಗ್ಗೆ 6.45 ಕ್ಕೆ ಪಂಪಾ ತಲುಪಲಿದೆ. ಅಂದು ಸಂಜೆ ಮತ್ತೆ ಪಂಪಾದಿಂದ ಹೊರಟು ಮರುದಿನ ಬೆಳಿಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ.

ಮತ್ತೊಂದು ರಾಜಹಂಸ ಬಸ್ (ನಾನ್‌ಎಸಿ) ಕೂಡ ಶಬರಿಮಲೆಗೆ ಸಂಚರಿಸಲಿದೆ. ರಾಜಹಂಸ ಬಸ್ ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 8.15ಕ್ಕೆ ಪಂಪಾ ತಲುಪಲಿದೆ. ಆ ದಿನ ಸಂಜೆ 5 ಗಂಟೆಗೆ ಪಂಪಾದಿಂದ ಹೊರಟು ಮರುದಿನ ಮಧ್ಯಾಹ್ನ 12 ಗಂಟೆಗೆ ಬೆಂಗಳೂರು ತಲುಪಲಿದೆ. ರಾಜಹಂಸದಲ್ಲಿ ಬೆಂಗಳೂರಿನಿಂದ ಶಬರಿಮಲೆಗೆ ಪ್ರತಿ ಟಿಕೆಟ್ ಬೆಲೆ 940 ರೂ. ಆಗಿದೆ.

ಶಬರಿಮಲೆ ಬಸ್​ಗೆ ಟಿಕೆಟ್ ಬುಕಿಂಗ್ ಹೇಗೆ?

ಕೆಎಸ್​ಆರ್​ಟಿಸಿ ಅಧಿಕೃತ ವೆಬ್​ಸೈಟ್ (www.ksrtc.in) ಮೂಲಕ ಅಥವಾ ರಾಜ್ಯದಾದ್ಯಂತ ಪ್ರಮುಖ ಬಸ್ ಡಿಪೋಗಳಲ್ಲಿ ಕಾರ್ಯನಿರ್ವಹಿಸುವ ಕೆಎಸ್‌ಆರ್‌ಟಿಸಿ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಕಾಯ್ದಿರಿಸುವಂತೆ ಸಂಸ್ಥೆಯು ಪ್ರಯಾಣಿಕರಿಗೆ ಸಲಹೆ ನೀಡಿದೆ.

ಕೆಎಸ್​ಆರ್​ಟಿಸಿ ಪ್ಯಾಸೆಂಜರ್​ ಅಡ್ವೈಸರಿಯಲ್ಲಿರುವ ಮಾಹಿತಿ ಪ್ರಕಾರ, ಕರ್ನಾಟಕ ರಾಜ್ಯದಾದ್ಯಂತ ಮತ್ತು ನೆರೆಯ ರಾಜ್ಯಗಳ ಪ್ರಮುಖ ಕಡೆಗಳಲ್ಲಿ ಒಟ್ಟು 707 ಟಿಕೆಟ್ ಕೌಂಟರ್‌ಗಳು ಕಾರ್ಯನಿರ್ವಹಿಸುತ್ತಿವೆ.

ಇದನ್ನೂ ಓದಿ: ಅಂಬಾರಿ, ಪಲ್ಲಕ್ಕಿ ಉತ್ಸವಕ್ಕಾಗಿ ಕೆಎಸ್​ಆರ್​ಟಿಸಿಗೆ ಅತ್ಯುತ್ತಮ ಸಾರ್ವಜನಿಕ ಸಂಸ್ಥೆ ಪ್ರಶಸ್ತಿ

ಪ್ರತಿ ವರ್ಷ ಡಿಸೆಂಬರ್ ಹಾಗೂ ಜನವರಿಯಲ್ಲಿ ಭಕ್ತರು ಶಬರಿಮಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯಾತ್ರೆ ಕೈಗೊಳ್ಳುತ್ತಾರೆ. ಜನವರಿಯಲ್ಲಿ ಮಕರ ಸಂಕ್ರಮಣದ ದಿನ ದೇಗುಲದಲ್ಲಿ ವಾರ್ಷಿಕ ಉತ್ಸವ ನಡೆಯಲಿದ್ದು, ಮಕರ ಜ್ಯೋತಿಯ ದರ್ಶನವಾಗುತ್ತದೆ. ಉತ್ಸವದ ದಿನ ಲಕ್ಷಾಂತರ ಭಕ್ತರು ಶಬರಿಮಲೆಗೆ ತೆರಳುತ್ತಾರೆ. ಕರ್ನಾಟಕದಿಂದಲೂ ಹೆಚ್ಚಿನ ಸಂಖ್ಯೆಯ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಳ್ಳುತ್ತಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್