Accident In majestic: ಮೆಜೆಸ್ಟಿಕ್​ನಲ್ಲಿ ಕೆಎಸ್​ಆರ್​ಟಿಸಿ ವೋಲ್ವೋ ಬಸ್ ಅಪಘಾತ; ವ್ಯಕ್ತಿ ಸಾವು

| Updated By: ಆಯೇಷಾ ಬಾನು

Updated on: Jul 29, 2021 | 9:12 AM

ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವನ ಕಾಲುಗಳು ಕಟ್ ಆಗಿವೆ. ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Accident In majestic: ಮೆಜೆಸ್ಟಿಕ್​ನಲ್ಲಿ ಕೆಎಸ್​ಆರ್​ಟಿಸಿ ವೋಲ್ವೋ ಬಸ್ ಅಪಘಾತ; ವ್ಯಕ್ತಿ ಸಾವು
ಮೆಜೆಸ್ಟಿಕ್ನಲ್ಲಿ ಕೆಎಸ್ಅರ್ಟಿಸಿ ವೋಲ್ವೋ ಬಸ್ ಅಪಘಾತ
Follow us on

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದ ಮುಂಭಾಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ಆರ್ಟಿಸಿ ವೋಲ್ವೋ ಬಸ್ ವ್ಯಕ್ತಿಗೆ ಡಿಕ್ಕಿ ಹೊಡೆದು ಬಳಿಕ ಖಾಸಗಿ ಬಸ್ಗೆ ಡಿಕ್ಕಿ ಹೊಡೆದಿದೆ.

ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವನ ಕಾಲುಗಳು ಕಟ್ ಆಗಿವೆ. ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. KSRTC ಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ನಡೆದಿದೆ. ಖಾಸಗಿ ಬಸ್‌ವೊಂದರ ಹಿಂದೆ ನಿಂತಿದ್ದ ಜನರನ್ನು ನೋಡದೆ ನಿರ್ಲಕ್ಷ್ಯದಿಂದ ಚಾಲಕ ಬಸ್ ಚಾಲನೆ ಮಾಡಿದ್ದಾನೆ. ಈ ವೇಳೆ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ. ಖಾಸಗಿ, KSRTC ಬಸ್‌ಗೆ ಸಿಲುಕಿ ವ್ಯಕ್ತಿ ಮೃತಪಟ್ಟಿದ್ದಾನೆ.

ಸಾರಿಗೆ ಇಲಾಖೆಯ ನೌಕರರಿಗೆ ತುಟ್ಟಿ ಭತ್ಯೆ ಹೆಚ್ಚಳ
ಸಾರಿಗೆ ಇಲಾಖೆಯ ನೌಕರರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಾರಿಗೆ ಇಲಾಖೆಯ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಿಸಿದೆ. ಜುಲೈ 1ರಿಂದ ಅನ್ವಯವಾಗುವಂತೆ ಶೇಕಡಾ 11.25ರಿಂದ ಶೇ. 21.50ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಎಲ್ಲಾ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿ ಜುಲೈ 27ರಂದು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಅನ್ವಯ ನೌಕರರ ವೇತನಕ್ಕೆ ತುಟ್ಟಿ ಭತ್ಯೆ ಹೆಚ್ಚಳದ ಮೊತ್ತ ಸೇರ್ಪಡೆಯಾಗಲಿದೆ.

ಕರ್ನಾಟಕ ಸರ್ಕಾರವು ಉದ್ಯೋಗಿಗಳಿಗೆ ಶೇ 11ರಷ್ಟು ತುಟ್ಟಿಭತ್ಯೆ ನೀಡಲು ನಿರ್ಧರಿಸಿರುವ ವಿಷಯವನ್ನು ಜುಲೈ 21ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಹಿರಂಗಪಡಿಸಿತ್ತು.

ಇದನ್ನೂ ಓದಿ: Petrol Price Today: ಸತತ 12ನೇ ದಿನವೂ ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಬದಲಾವಣೆಗಳಿಲ್ಲ!

Published On - 8:25 am, Thu, 29 July 21