ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್​​ನ್ಯೂಸ್: ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್​

ರಾಜಧಾನಿ ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೊಸದಾಗಿ ವೋಲ್ವೋ ಬಸ್ ಸೇವೆ ಆರಂಭಿಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ತಿಳಿಸಿದೆ. ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ಈ ವೋಲ್ವೋ ಬಸ್ ಓಡಾಟ ನಡೆಸಲಿದೆ. ಹಾಗಾದ್ರೆ, ಈ ಬಸ್ ಸಂಚಾರ ಯಾವಾಗಿನಿಂದ? ಟೈಮಿಂಗ್​, ಟಿಕೆಟ್​ ದರ ವಿವರ ಇಲ್ಲಿದೆ.

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್​​ನ್ಯೂಸ್: ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್​
ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್​
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 12, 2024 | 7:02 PM

ಬೆಂಗಳೂರು, (ನವೆಂಬರ್ 12): ಬೆಂಗಳೂರಿನಿಂದ ಶಬರಿಮಲೆ ಯಾತ್ರೆ ಕೈಗೊಳ್ಳುವ ಅಯ್ಯಪ್ಪ ಭಕ್ತರಿಗೆ ಅನುಕೂಲಕ್ಕಾಗಿ ಕೆಎಸ್​ಆರ್​ಟಿಸಿ ಹೊಸದಾಗಿ ವೋಲ್ವೋ ಬಸ್ ಸೇವೆ ಆರಂಭಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಇದೇ ನವೆಂಬರ್ 29ರಿಂದ ಹೊಸ ವೋಲ್ವೋ ಬಸ್ ಸಂಚಾರ ಆರಂಭವಾಗಲಿದ್ದು, ಬೆಂಗಳೂರಿನಿಂದ-ನೀಲಕ್ಕಲ್ (ಪಂಪಾ-ಶಬರಿಮಲೈ) ವರೆಗೆ ಓಡಾಟ ನಡೆಸಲಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ನವೆಂಬರ್ 29 ರಿಂದ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸೇವೆ ಆರಂಭವಾಗಲಿದೆ. ಅಂದು ಶಾಂತಿನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ಬಸ್ ಹೊರಟು, ಮರುದಿನ ಬೆಳಗ್ಗೆ 6.45ಕ್ಕೆ ನೀಲಕ್ಕಲ್ ತಲುಪುತ್ತದೆ. ನೀಲಕ್ಕಲ್‌ನಿಂದ ಸಂಜೆ 6 ಗಂಟೆಗೆ ಹೊರಡುವ ಬಸ್ ಮರುದಿನ ಬೆಳಗ್ಗೆ 10 ಗಂಟೆಗೆ ಬೆಂಗಳೂರು ತಲುಪಲಿದೆ. ಇನ್ನು ಪ್ರಯಾಣ ದರ ವಯಸ್ಕರಿಗೆ 1,750 ರೂ. ನಿಗದಿಪಡಿಸಲಾಗಿದೆ.

ಇದನ್ನೂ ಓದಿ: Sabarimala: ಶಬರಿಮಲೆ ವರ್ಚುವಲ್ ಕ್ಯೂ ದರ್ಶನದ ಆನ್‌ಲೈನ್ ಟಿಕೆಟ್‌ ಬುಕ್ ಮಾಡುವುದು ಹೇಗೆ?

ಕರ್ನಾಟಕದಿಂದ 3 ತಿಂಗಳು ವಿಶೇಷ ರೈಲು

ಕರ್ನಾಟಕದಿಂದ ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿದೆ. ಮೂರು ತಿಂಗಳ ಕಾಲ ಈ ರೈಲು ಸಂಚರಿಸಲಿದೆ.

ಕೊಚುವೇಲಿ-ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು (ಸಂಖ್ಯೆ 06083) ಕೊಚುವೇಲಿ ನಿಲ್ದಾಣದಿಂದ ನ.12 ರಿಂದ ಜನವರಿ 28 ವರಗೆ ಪ್ರತಿ ಮಂಗಳವಾರ ಸಂಜೆ 6.05ಕ್ಕೆ ಹೊರಟು, ಮರುದಿನ ದಿನ 10.55 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಎಸ್ಎಂವಿಟಿ ಬೆಂಗಳೂರು-ಕೊಚುವೇಲಿ ಸಾಪ್ತಾಹಿಕ ಎಕ್ಸ್ ಪ್ರೆಸ್ ವಿಶೇಷ ರೈಲು (ಸಂಖ್ಯೆ 06084) ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ನ.13 ರಿಂದ ಜನವರಿ 29ವರಗೆ ಪ್ರತಿ ಬುಧವಾರ ಇರಲಿದೆ. ಈ ರೈಲು ಮಧ್ಯಾಹ್ನ 12.45ಕ್ಕೆ ಹೊರಟು, ಮರುದಿನ ದಿನ ಬೆಳಗ್ಗೆ 6.45ಕ್ಕೆ ಕೊಚುವೇಲಿ ತಲುಪಲಿದೆ.

ಈ ರೈಲು ಎರಡು ದಿಕ್ಕಿನ ಮಾರ್ಗದಲ್ಲಿ ಕೊಲ್ಲಂ, ಕಾಯಂಕುಳಂ, ಚೆಂಗನ್ನೂರ್, ಪಾಲಕ್ಕಾಡ್, ಪೊದನೂರ್, ಈರೋಡ್, ಸೇಲಂ, ಜೋಲಾರ್ ಪೆಟ್ಟಾಯ್ ಜಂಕ್ಷನ್‌ಗಳಲ್ಲಿ ನಿಲುಗಡೆ ಇರಲಿದೆ. ಶಬರಿಮಲೆಗೆ ತೆರಳುವ ಭಕ್ತರು ಚೆಂಗನ್ನೂರು ನಿಲ್ದಾಣದಲ್ಲಿ ಇಳಿದು, ಅಲ್ಲಿಂದ ಬಸ್‌ ಮೂಲಕ ಪಂಪಾಗೆ ತೆರಳಬಹುದು. ಪ್ರಯಾಣಿಕರು ಅಧಿಕೃತ ವೆಬ್ಸೈಟ್ (www.enquiry.indianrail.gov.in) ಗೆ ಭೇಟಿ ನೀಡಿ, NTES ಅಪ್ಲಿಕೇಶನ್ ಬಳಸಿ ಅಥವಾ 139ಗೆ ಕರೆ ಮಾಡಿ ಈ ರೈಲುಗಳ ಸಮಯ ಪರಿಶೀಲಿಸಬಹುದು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ