Tumkur Politics: ಕಾಂಗ್ರೆಸ್​ಗೆ ರಾಜೀನಾಮೆ ನೀಡಲು ಮುದ್ದಹನುಮೇಗೌಡ ನಿರ್ಧಾರ, ಕುಣಿಗಲ್ ಕ್ಷೇತ್ರದಲ್ಲಿ ಹತ್ತಾರು ಲೆಕ್ಕಾಚಾರ

2019ರಲ್ಲಿ ನನಗೆ ಟಿಕೆಟ್ ತಪ್ಪಿಸುವಲ್ಲಿ ಕೆಲವರ ಪಾತ್ರ ಇದೆ. ವೇಣುಗೋಪಾಲ್ ಆ ಸಮಯದಲ್ಲಿ ನನಗೆ ಕೆಲ ಭರವಸೆ ಕೊಟ್ಟಿದ್ದರು. ಆದರೆ ನಂತರದ ದಿನಗಳಲ್ಲಿ ಅವರು ಆ ಭರವಸೆಗಳ ಬಗ್ಗೆ ಮಾತನಾಡಿಲ್ಲ ಎಂದು ಮುದ್ದಹನುಮೇಗೌಡ ಹೇಳಿದರು.

Tumkur Politics: ಕಾಂಗ್ರೆಸ್​ಗೆ ರಾಜೀನಾಮೆ ನೀಡಲು ಮುದ್ದಹನುಮೇಗೌಡ ನಿರ್ಧಾರ, ಕುಣಿಗಲ್ ಕ್ಷೇತ್ರದಲ್ಲಿ ಹತ್ತಾರು ಲೆಕ್ಕಾಚಾರ
ಕಾಂಗ್ರೆಸ್ ನಾಯಕ ಎಸ್​.ಪಿ.ಮುದ್ದಹನುಮೇಗೌಡ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Sep 01, 2022 | 12:55 PM

ಬೆಂಗಳೂರು: ಕಾಂಗ್ರೆಸ್​ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಮಾಜಿ ಸಂಸದ ಮುದ್ದಹನುಮೇಗೌಡ (Muddahanume Gowda) ಘೋಷಿಸಿದ್ದಾರೆ. ತುಮಕೂರು ನಗರ, ಗ್ರಾಮಾಂತರ, ಕುಣಿಗಲ್ ಮತ್ತು ಗುಬ್ಬಿ ಕ್ಷೇತ್ರದಲ್ಲಿ ಮುದ್ದಹನುಮೇಗೌಡ ಪ್ರಭಾವಿಯಾಗಿದ್ದಾರೆ. ಅವರು ಪಕ್ಷ ಬಿಡಬಹುದು ಎಂದು ಹಲವು ತಿಂಗಳುಗಳಿಂದ ಚರ್ಚೆಯಾಗುತ್ತಿತ್ತು. ಲೋಕಸಭಾ ಟಿಕೆಟ್ ತಪ್ಪಿಸಿದ ಬಳಿಕ ಪಕ್ಷದಲ್ಲಿ ಸರಿಯಾದ ಮಾನ್ಯತೆ ನೀಡಿಲ್ಲ, ಪಕ್ಷವು ತಮ್ಮನ್ನು ಸಾಮರ್ಥ್ಯಕ್ಕೆ ತಕ್ಕಂತೆ ನಡೆಸಿಕೊಂಡಿಲ್ಲ ಎಂದು ಅವರು ಹಲವು ವೇದಿಕೆಗಳಲ್ಲಿ ಬಹಿರಂಗವಾಗಿಯೇ ಬೇಸರ ವ್ಯಕ್ತಪಡಿಸಿದ್ದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್​ಗೆ ಮುದ್ದಹನುಮೇಗೌಡ ಆಕಾಂಕ್ಷಿಯಾಗಿದ್ದರು. ಆದರೆ ಅವರ ಬೇಡಿಕೆಗೆ ಹಿರಿಯ ನಾಯಕರು ಒಪ್ಪಿರಲಿಲ್ಲ. ಮುಂದಿನ ಚುನಾವಣೆಯಲ್ಲಿಯೂ ಕುಣಿಗಲ್​ನ ಹಾಲಿ ಶಾಸಕ ರಂಗನಾಥ್ ಅವರಿಗೇ ಟಿಕೆಟ್ ಕೊಡಲು ಕಾಂಗ್ರೆಸ್​ ನಾಯಕರು ಒಲವು ತೋರಿದ್ದರು. ಈ ಹಿನ್ನೆಲೆಯಲ್ಲಿ ವರಿಷ್ಠರ ನಡೆಯಿಂದ ಅಸಮಾಧಾನಗೊಂಡಿರುವ ಅವರು ಪಕ್ಷ ತೊರೆಯುವ ನಿರ್ಧಾರ ಮಾಡಿದ್ದಾರೆ.

ಮೊದಲಿನಿಂದಲೂ ಸಿದ್ದರಾಮಯ್ಯ ಅವರೊಂದಿಗೆ ಗುರುತಿಸಿಕೊಂಡಿದ್ದ ಮುದ್ದಹನುಮೇಗೌಡರು, ರಾಜೀನಾಮೆ ನಿರ್ಧಾರ ಘೋಷಿಸುವ ಮೊದಲು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಇಬ್ಬರನ್ನೂ ಭೇಟಿಯಾಗಿ ಅಸಮಾಧಾನ ತೋಡಿಕೊಂಡಿದ್ದರು. ಈ ವೇಳೆ ಇವರ ಮನವೊಲಿಸಲು ಮುಖಂಡರು ಯತ್ನಿಸಿದರಾದರೂ ಮುದ್ದಹನುಮೇಗೌಡರು ಬಗ್ಗಲಿಲ್ಲ. ಕಳೆದ ಒಂದು ವರ್ಷದಿಂದ ಮುದ್ದಹನುಮೇಗೌಡ ಕುಣಿಗಲ್ ಕ್ಷೇತ್ರದಲ್ಲಿಯೇ ಠಿಖಾಣಿ ಹೂಡಿ ಸಂಘಟನೆ ಮತ್ತು ಟಿಕೆಟ್​ಗಾಗಿ ಪ್ರಯತ್ನ ಮಾಡುತ್ತಿದ್ದರು. ಟಿಕೆಟ್ ಸಿಗುವುದಿಲ್ಲ ಎಂದು ಖಾತ್ರಿಯಾದ ನಂತರ ರಾಜೀನಾಮೆ ನೀಡಲು ನಿರ್ಧರಿಸಿದರು. ಇಂದು ಸಂಜೆಯೊಳಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.

2019ರ ಲೋಕಸಭಾ ಚುನಾವಣೆಯಲ್ಲೂ ನನಗೆ ಟಿಕೆಟ್ ತಪ್ಪಿಸಲಾಯಿತು. ನನ್ನಿಂದ ಏನಾದರೂ ತಪ್ಪಾಗಿದ್ದರೆ ಹೇಳಲಿ ಎಂದು ಕೇಳಿದ್ದೇನೆ. 1989ರಲ್ಲಿ ಕುಣಿಗಲ್ ಕ್ಷೇತ್ರದಲ್ಲಿ ಸ್ಪರ್ಧಿಸಲು ನನಗೆ ಪಕ್ಷವು ಬಿ-ಫಾರಂ ಕೊಟ್ಟಿತ್ತು. ಬಳಿಕ ಇನ್ನೊಬ್ಬರಿಗೆ ಸಿ-ಫಾರಂ ಕೊಡಲಾಯಿತು. ಅಂದಿನಿಂದಲೂ ಹಲವು ಬಾರಿ ನನಗೆ ಸಮಸ್ಯೆ ಆಗಿದೆ. ನಾಲ್ಕು ಬಾರಿ ನನಗೆ ಟಿಕೆಟ್ ತಪ್ಪಿಸಲಾಯಿತು. 2019ರಲ್ಲಿ ನನಗೆ ಟಿಕೆಟ್ ತಪ್ಪಿಸುವಲ್ಲಿ ಕೆಲವರ ಪಾತ್ರ ಇದೆ. ವೇಣುಗೋಪಾಲ್ ಆ ಸಮಯದಲ್ಲಿ ನನಗೆ ಕೆಲ ಭರವಸೆ ಕೊಟ್ಟಿದ್ದರು. ಆದರೆ ನಂತರದ ದಿನಗಳಲ್ಲಿ ಅವರು ಆ ಭರವಸೆಗಳ ಬಗ್ಗೆ ಮಾತನಾಡಿಲ್ಲ ಎಂದು ಮುದ್ದಹನುಮೇಗೌಡ ಹೇಳಿದರು.

ಪ್ರಚಲಿತ ರಾಜಕೀಯ ಬೆಳವಣಿಗೆಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಸಿದ್ದರಾಮಯ್ಯ ಇಬ್ಬರನ್ನೂ ಭೇಟಿ ಮಾಡಿ, ಪಕ್ಷದಿಂದ ನನ್ನನ್ನ ಬಿಡುಗಡೆ ಮಾಡಿ ಎಂದು ಕೇಳಿದ್ದೇನೆ. ನಾನು ತುಮಕೂರು ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷನಾಗಿ ಹತ್ತು ವರ್ಷಗಳ ಕಾಲ ಕೆಲಸ ಮಾಡಿದೆ. ಪಕ್ಷ ನನಗೆ ಹಲವು ಅವಕಾಶ ಕೊಟ್ಟಿದೆ. ಅದಕಿಂತಲೂ ಹೆಚ್ಚು ನಾನು ಪಕ್ಷಕ್ಕೆ ದುಡಿದಿದ್ದೇನೆ. ಇತ್ತಿಚೆಗೆ ನಡೆದ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್​ನ ಕರ್ನಾಟಕ ಉಸ್ತುವಾರಿ ಸುರ್ಜೇವಾಲ ದೂರವಾಣಿ ಮೂಲಕ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ಮಾತನಾಡಿದ್ದರು. ಆದರೆ ನಂತರದ ದಿನಗಳಲ್ಲಿ ಅವರೂ ನನ್ನ ಕಷ್ಟಸುಖ ವಿಚಾರಿಸಲಿಲ್ಲ. 2023ರ ಚುನಾವಣೆಗೆ ನಾನು ಕುಣಿಗಲ್​ನಿಂದ ನಾಮಪತ್ರ ಸಲ್ಲಿಸುವುದು ಖಚಿತ, ಹೀಗಾಗಿಯೇ ಕಾಂಗ್ರೆಸ್​ನಿಂದ ದೂರ ಸರಿದಿದ್ದೇನೆ. ಸಾಂಕೇತಿಕವಾಗಿ ನಾಯಕರನ್ನು ಭೇಟಿಯಾಗಿದ್ದೇನೆ ಅಷ್ಟೇ. ಆದರೆ ಎಂದೋ ಪಕ್ಷದಿಂದ ದೂರ ಸರಿದಿದ್ದೆ. ಇಂದು ಸಂಜೆಯ ಒಳಗೆ ಅಧಿಕೃತವಾಗಿ ರಾಜೀನಾಮೆ ಕೊಡುತ್ತೇನೆ ಎಂದರು.

ಕುಣಿಗಲ್​ ಕ್ಷೇತ್ರದಲ್ಲಿ ನಾನು ಎರಡು ಬಾರಿ ಸ್ಪರ್ಧಿಸಿದ್ದೆ. 2023ರಲ್ಲೂ ನಾನೇ ಸ್ಪರ್ಧೆ ಮಾಡಬೇಕು ಎಂದು ಅಲ್ಲಿ ಜನ ಇಚ್ಚೆ ಪಡುತ್ತಿದ್ದಾರೆ. ಅತೀ ಶೀಘ್ರದಲ್ಲೇ ಒಂದು ಒಳ್ಳೆಯ ನಿರ್ಧಾರ ಬರುತ್ತೇನೆ. ನನ್ನ ಮೇಲೆ ಬಿಜೆಪಿಯ ಬಿಜೆಪಿ ಆಪರೇಷನ್ ಕಮಲ ನಡೆದಿದೆ ಎಂದು ಕೆಲವರು ಹೇಳುತ್ತಾರೆ. ನಾನೇನು ಅಧಿಕಾರದಲ್ಲಿದ್ದೇನಾ ಆಪರೇಷನ್ ಮಾಡಲು ಎಂದು ಪ್ರಶ್ನಿಸಿದರು. ನಾನು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲು ಬಯಸುವುದಿಲ್ಲ. ಇವತ್ತೇ ರಾಜೀನಾಮೆ ಪತ್ರವನ್ನು ಕಳುಹಿಸುತ್ತೇನೆ. ಪಕ್ಷಕ್ಕೆ ಬ್ಲಾಕ್​ಮೇಲ್ ಮಾಡಲು ಈ ರೀತಿ ಮಾಡುತ್ತಿಲ್ಲ ಎಂದರು.

ರಾಜೀನಾಮೆ ನಿರ್ಧಾರ ಪ್ರಕಟಿಸುವ ಮೊದಲು ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. ಸಂಸದ ಸ್ಥಾನಕ್ಕೆ ಟಿಕೆಟ್ ತಪ್ಪಿದ್ದರಿಂದ ವಿಧಾನಸಭೆಗೆ ಟಿಕೇಟ್ ನೀಡುವಂತೆ ಒತ್ತಾಯಿಸಿದರು. ಕುಣಿಗಲ್​ನಲ್ಲಿ ಹಾಲಿ ಕಾಂಗ್ರೆಸ್ ಶಾಸಕರಾಗಿರುವ ಡಿ.ಕೆ.ಶಿವಕುಮಾರ್ ಸಂಬಂಧಿ ಡಾ ರಂಗನಾಥ್ ಅವರಿಗೇ ಮುಂದಿನ ಅವಧಿಗೂ ಟಿಕೆಟ್ ಕೊಡಲು ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ. ಇದು ಮುದ್ದಹನುಮೇಗೌಡ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು.

Published On - 12:55 pm, Thu, 1 September 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ