ಪತ್ರಕರ್ತರಿಗೆ ಉಚಿತ ಬಸ್​ ಘೋಷಣೆ ಹಿನ್ನೆಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನ

ರಾಜ್ಯ ಬಜೆಟ್​ನಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಗ್ರಾಮೀಣ ಬಸ್​ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ‌ ರಾಮಲಿಂಗಾರೆಡ್ಡಿ‌ ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು. ಈ ವೇಳೆ ಬೇಡಿಕೆ ಈಡೇರಿದ ಸಂದರ್ಭವನ್ನು ಮೆಲುಕು ಹಾಕಿದರು.

ಪತ್ರಕರ್ತರಿಗೆ ಉಚಿತ ಬಸ್​ ಘೋಷಣೆ ಹಿನ್ನೆಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನ
ಸಚಿವ‌ ರಾಮಲಿಂಗಾರೆಡ್ಡಿ‌ಗೆ ಗಣ್ಯರಿಂದ ಸನ್ಮಾನ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 22, 2024 | 9:06 PM

ಬೆಂಗಳೂರು, ಫೆಬ್ರವರಿ 22: ರಾಜ್ಯ ಬಜೆಟ್​ನಲ್ಲಿ ರಾಜ್ಯದ ಪತ್ರಕರ್ತರಿಗೆ ಉಚಿತ ಗ್ರಾಮೀಣ ಬಸ್​ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ‌ ರಾಮಲಿಂಗಾರೆಡ್ಡಿ‌ (RamalingaReddy) ಅವರನ್ನು ವಿಧಾನಸೌಧದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಬೆಂಗಳೂರು ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಜಿಲ್ಲಾ ಘಟಕದ ಉಪಾಧ್ಯಕ್ಷ ಕೆ.ಎಂ. ಜಿಕ್ರಿಯಾ ಉಪಸ್ಥಿತರಿದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರು ಕೆಯುಡಬ್ಲ್ಯೂಜೆ ಬೇಡಿಕೆಗೆ ಸ್ಪಂದಿಸಿ ಭರವಸೆ ನೀಡಿದ್ದರು.

ಇದನ್ನೂ ಓದಿ: ದಾವಣಗೆರೆಯಲ್ಲಿ ಫೆ 3 ಮತ್ತು 4ರಂದು ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ

ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್​ನಲ್ಲಿ ಅದಕ್ಕೆ ಶಿಫಾರಸು ಮಾಡುವುದಾಗಿ ಅಂದು ಸಾರಿಗೆ ಸಚಿವರು ಸಂಘದ ಪದಾಧಿಕಾರಿಗಳಿಗೆ ಭರವಸೆಯನ್ನು ನೀಡಿದ್ದನ್ನು ಸ್ಮರಿಸಬಹುದಾಗಿದೆ. ಸನ್ಮಾನ ಸಂದರ್ಭದಲ್ಲಿಯೂ ಸಚಿವರು ಅಂದಿನ ಘಟನೆ ಮತ್ತು ಬೇಡಿಕೆ ಈಡೇರಿದ ಸಂದರ್ಭವನ್ನು ಮೆಲುಕು ಹಾಕಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು ದಶಕಗಳ ಕನಸು ನನಸಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿದ್ದರು. ಹಾಗಾಗಿ ಇತ್ತೀಚೆಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಕೂಡ ಧನ್ಯವಾದ ತಿಳಿಸಿದ್ದರು.

ಇದನ್ನೂ ಓದಿ: KUWJ ಹೋರಾಟದ ಫಲ: ನನಸಾದ ಪತ್ರಕರ್ತರ ಬಸ್ ಪಾಸ್ ಯೋಜನೆ, ಸಿಎಂಗೆ ಧನ್ಯವಾದ ತಿಳಿಸಿದ ಶಿವಾನಂದ ತಗಡೂರು

ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಅಭಿನಂದನೆ ಸಲ್ಲಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ