KUWJ ಹೋರಾಟದ ಫಲ: ನನಸಾದ ಪತ್ರಕರ್ತರ ಬಸ್ ಪಾಸ್ ಯೋಜನೆ, ಸಿಎಂಗೆ ಧನ್ಯವಾದ ತಿಳಿಸಿದ ಶಿವಾನಂದ ತಗಡೂರು
ಮುಂದಿನ ಬಜೆಟ್ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಇತ್ತೀಚೆಗೆ ದಾವಣಗೆರೆಯಲ್ಲಿ ಆಯೋಜಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ನೀಡಿದ್ದ ಭರವಸೆಯನ್ನು ಇಂದಿನ ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಮೂಲಕ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ನಲ್ಲಿ ಪ್ರಕಟಿಸಿಸುವ ಮೂಲಕ ದಶಕಗಳ ಕನಸು ನನಸಾಗಿದೆ.
ಬೆಂಗಳೂರು, ಫೆಬ್ರವರಿ 16: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು ದಶಕಗಳ ಕನಸು ನನಸಾಗಿದೆ. ಆ ಮೂಲಕ ದಾವಣಗೆರೆಯಲ್ಲಿ ಫೆ.3 ಮತ್ತು 4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ. ಹಾಗಾಗಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ಬೇಡಿಕೆಯಾದ ಪತ್ರಕರ್ತರ ಉಚಿತ ಬಸ್ ಪಾಸ್ ಸೌಲಭ್ಯವನ್ನು ಈಡೇರಿಸಿರುವ ಸಿಎಂ ಸಿದ್ದರಾಮಯ್ಯ ಅವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿದ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಸಮಸ್ತ ಪತ್ರಕರ್ತರ ಪರವಾಗಿ ಧನ್ಯವಾದ ಸಲ್ಲಿಸಿದರು. ಕೆಯುಡಬ್ಲ್ಯುಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿ ಸೋಮಶೇಖರ ಕೆರಗೋಡು, ಬೆಂಗಳೂರು ಘಟಕದ ಸೋಮಶೇಖರ ಗಾಂಧಿ, ಶಿವರಾಜ ಮತ್ತಿತರರು ಹಾಜರಿದ್ದರು.
ಮಂಡ್ಯ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿಯೂ ಉಚಿತ ಬಸ್ ಪಾಸ್ ಬಗ್ಗೆ ಕೆಯುಡಬ್ಲ್ಯುಜೆ ಮಂಡಿಸಿದ್ದ ಹಕ್ಕೊತ್ತಾಯ ಬಗ್ಗೆ ಮುಖ್ಯಮಂತ್ರಿಗಳು ಕೊಟ್ಟ ಮಾತಿನಂತೆ ನಡೆದುಕೊಂಡಿರುವುದನ್ನು ಕೆಯುಡಬ್ಲ್ಯುಜೆ ಸ್ಮರಿಸಿದ್ದು, ಅಭಿನಂದನೆ ಸಲ್ಲಿಸಿದೆ.
ಬಸ್ ಪಾಸ್ ಬೇಡಿಕೆ ಈಡೇರಿಸಲು ಸ್ಪಂದಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಎಲ್ಲಾ ಹಂತದಲ್ಲಿಯೂ ಸಹಕಾರ ನೀಡಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರಿಗೂ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ವಿಶೇಷವಾಗಿ ಅಭಿನಂದನೆ ಸಲ್ಲಿಸಿದೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ಫೆ 3 ಮತ್ತು 4ರಂದು ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ
ಬಜೆಟ್ನಲ್ಲಿ ಘೋಷಣೆ ಮಾಡಿರುವ ಬಸ್ ಪಾಸ್ ಯೋಜನೆಯನ್ನು ಕ್ರಮಬದ್ದವಾಗಿ ಕೂಡಲೇ ಜಾರಿಗೆ ತರಲು ವಾರ್ತಾ ಇಲಾಖೆ ಮುಂದಾಗಬೇಕು ಎಂದು ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ವಿನಂತಿ ಮಾಡಿದ್ದಾರೆ.
ಮುಂದಿನ ಬಜೆಟ್ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕಾಗಿದ್ದು ನಮ್ಮ ಪತ್ರಕರ್ತನ ಜವಾಬ್ದಾರಿ. ಮಾಧ್ಯಮಗಳು ಯಾವುದೇ ಕಾರಣಕ್ಕೂ ಮೌಢ್ಯಗಳನ್ನ ಬೆಂಬಲಿಸಬಾರದು ಎಂದು ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.