ಪತ್ರಕರ್ತ ಎನ್ ಅರ್ಜುನ್ ದೇವ್ ಅವರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ(ಏ.24) ನಿಧನರಾದರು. ಈ ಹಿನ್ನಲೆ ಇಂದು(ಏ.25) ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಅವರಿಗೆ ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೆಂಗಳೂರು, ಏ.25: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಹಿರಿಯ ಪತ್ರಕರ್ತ ಎನ್.ಅರ್ಜುನ್ ದೇವ್(N. Arjun Dev) ಅವರಿಗೆ ಇಂದು(ಏ.25) ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ವೇಳೆ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ, ಹಿರಿಯ ಪತ್ರಕರ್ತರುಗಳಾದ ಕೆ.ಎಸ್.ಶೇಷಚಂದ್ರಿಕಾ, ಡಾ.ಈಶ್ವರ ದೈತೋಟ, ಎಸ್.ಆರ್.ಆರಾಧ್ಯ, ಬೋಪಯ್ಯ ಚಾವಂಡ, ನಾಗರಾಜ್ ಮೂರ್ತಿ, ಸೋಮಶೇಖರ ಗಾಂಧಿ ಮಾತನಾಡಿದರು. ಪತ್ರಕರ್ತರಾಗಿ ಸಲ್ಲಿಸಿದ ಸೇವೆ ಅನನ್ಯವಾದುದು. ಕೆಯುಡಬ್ಲ್ಯೂಜೆ ಸಂಘಟನೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ, ಎರಡು ಅವಧಿಗೆ ಅಧ್ಯಕ್ಷರಾಗಿ ಸಲ್ಲಿಸಿದ್ದ ಸೇವೆಯನ್ನು ಸಭೆಯಲ್ಲಿ ಸ್ಮರಿಸಲಾಯಿತು.
ಏ.24 ರಂದು ನಿಧನರಾಗಿದ್ದ ಹಿರಿಯ ಪತ್ರಕರ್ತ ಅರ್ಜುನ್ ದೇವ್
ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ) ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಹುಟ್ಟೂರಾದ ಕೋಲಾರ ಜಿಲ್ಲೆ ಚೌಡದೇವನಹಳ್ಳಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ತಾಯಿನಾಡು ಪತ್ರಿಕೆ, ಸಂಯುಕ್ತ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸಿದ್ದ ಅವರು ಸುರ್ಯೋದಯ ಪತ್ರಿಕೆ ಸಂಪಾದಕರಾಗಿಯೂ ಕೆಲಸ ಮಾಡಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:34 pm, Thu, 25 April 24