ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕೊರತೆ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

| Updated By: ಗಂಗಾಧರ​ ಬ. ಸಾಬೋಜಿ

Updated on: Oct 04, 2023 | 1:24 PM

ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕೊರತೆಗೆ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ನವೆಂಬರ್​ 2ರಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಸಾರ್ವಜನಿಕ ಶೌಚಾಲಯಗಳ ನಿರ್ವಹಣೆ ಕೊರತೆ: ರಾಜ್ಯ ಸರ್ಕಾರಕ್ಕೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್
ಹೈಕೋರ್ಟ್​
Follow us on

ಬೆಂಗಳೂರು, ಅಕ್ಟೋಬರ್​ 04: ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ (public toilets) ನಿರ್ವಹಣೆ ಕೊರತೆಗೆ ಕೈಗೊಂಡ ಕ್ರಮದ ಬಗ್ಗೆ ಹೈಕೋರ್ಟ್​ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಹೈಕೋರ್ಟ್ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಸಿಜೆ ಪ್ರಸನ್ನ ಬಿ.ವರಾಳೆ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ಆದೇಶಿಸಿದ್ದು, ನವೆಂಬರ್​ 2ರಂದು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಖುದ್ದು ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ಮಾಡಿರುವ ಹೈಕೋರ್ಟ್​ ಬೆಂಗಳೂರಿನ ನಿವಾಸಿಗಳ ಬಗ್ಗೆ ಸರ್ಕಾರ ಜವಾಬ್ದಾರಿಯುತವಾಗಿರಬೇಕು. ಶೌಚಾಲಯಗಳ ನಿರ್ಮಾಣ, ‌ನೈರ್ಮಲ್ಯದ ಬಗ್ಗೆ ವರದಿಗೆ ಸೂಚಿಸಿತ್ತು. ಆದರೆ ವರದಿ ಸಲ್ಲಿಸಿಲ್ಲವೆಂದು ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ಕಳ್ಳತನ ಮಾಡಿದ ಭಯದಲ್ಲಿ ಸಿಗ್ನಲ್​ ಜಂಪ್​ ಮಾಡಿ ಹೋದರು: ಟ್ರಾಫಿಕ್ ಫೈನ್​​ ಕೊಟ್ಟ ಸುಳಿವಿನ ಮೇಲೆ ಸಿಕ್ಕರು

ಸಾರ್ವಜನಿಕ ಶೌಚಾಲಯಗಳ ಮೇಲೆ ನಿಗಾ ವಹಿಸದ ಬಿಬಿಎಂಪಿಯನ್ನು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆಗ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ಕೆಲವು ದಿನಗಳ ನಂತರ, ಸಾರ್ವಜನಿಕ ಶೌಚಾಲಯಗಳ ನಿರ್ವಹಣೆಯನ್ನು ಹೊರಗುತ್ತಿಗೆ ನೀಡಲು ಯೋಜನೆ ರೂಪಿಸಿತ್ತು.

ನೈರ್ಮಲ್ಯದ ಕೊರತೆಯ ಹೊರತಾಗಿ, ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕ ಶೌಚಾಲಯಗಳು ಮತ್ತು ಮೂತ್ರಾಲಯಗಳನ್ನು ನಿರ್ಮಿಸುವಲ್ಲಿ ಬಿಬಿಎಂಪಿ ವಿಫಲವಾಗಿತ್ತು. ಕೇಂದ್ರ ಸರಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರ ನಗರದಲ್ಲಿ ಶೇ.90ಕ್ಕೂ ಹೆಚ್ಚು ಶೌಚಾಲಯ ಮತ್ತು ಮೂತ್ರಾಲಯಗಳ ಕೊರತೆ ಇರುವುದು ಕಂಡುಬಂದಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಡೆಂಗ್ಯೂ, ಚಿಕೂನ್​ಗುನ್ಯಾ ಉಲ್ಭಣ; ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಹೆಚ್ಚು

ಪ್ರಸ್ತುತ ಜನಸಂಖ್ಯೆಗೆ ಅನುಗುಣವಾಗಿ ಬೆಂಗಳೂರಿನಲ್ಲಿ ಕನಿಷ್ಠ 20,000 ಮೂತ್ರಾಲಯಗಳು ಮತ್ತು 15,000 ಸಾರ್ವಜನಿಕ ಶೌಚಾಲಯಗಳು ಇರಬೇಕು.  ಆದರೆ ನಗರದಲ್ಲಿ ಶೇ. 10ರಷ್ಟು ಮಾತ್ರ ಶೌಚಾಲಯ, ಮೂತ್ರಾಲಯಗಳಿವೆ.

ಕೆಲವು ಇ-ಶೌಚಾಲಯಗಳನ್ನು ಕಿತ್ತುಹಾಕಲಾಗಿದೆ. ಇನ್ನುಳಿದಂತೆ ನಿಷ್ಕ್ರಿಯ ಫ್ಲಶ್, ನೀರಿನ ಕೊರತೆ ಮತ್ತು ಬಾಗಿಲುಗಳು ಇಲ್ಲದಿರುವುದು ಇತ್ಯಾದಿ ಸಮಸ್ಯೆಗಳನ್ನು ಎದುರಿಸುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:59 pm, Wed, 4 October 23