ಸರ್ಕಾರಿ ಆಸ್ಪತ್ರೆಗಳಲ್ಲಿ 16500 ವೈದ್ಯಕೀಯ ಸಿಬ್ಬಂದಿ ಕೊರತೆ: ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ 16500 ವೈದ್ಯಕೀಯ ಸಿಬ್ಬಂದಿ ಕೊರತೆ ಇರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ವೈದ್ಯಕೀಯ ಸೌಕರ್ಯದ‌ ಕೊರತೆ ಬಗ್ಗೆ ಹೈಕೋರ್ಟ್​ ಕಳವಳ ವ್ಯಕಪಡಿಸಿದ್ದು, ಈ ಬಗ್ಗೆ ಸ್ವಯಂ ಪ್ರೇರಿತವಾಗಿ ಪಿಐಎಲ್( ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ದಾಖಲಿಸಿಕೊಂಡಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ 16500 ವೈದ್ಯಕೀಯ ಸಿಬ್ಬಂದಿ ಕೊರತೆ:  ಸ್ವಯಂ ಪ್ರೇರಿತ ಪಿಐಎಲ್ ದಾಖಲಿಸಿಕೊಂಡ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Follow us
| Updated By: ರಮೇಶ್ ಬಿ. ಜವಳಗೇರಾ

Updated on: Nov 07, 2023 | 11:37 AM

ಬೆಂಗಳೂರು, (ನವೆಂಬರ್ 07): ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ(Government Hospitals) 16500 ವೈದ್ಯಕೀಯ ಸಿಬ್ಬಂದಿ ಕೊರತೆ ಇರುವುದು ಬೆಳಕಿಗೆ ಬಂದಿದೆ. ಇದಕ್ಕೆ ಕರ್ನಾಟಕ ಹೈಕೋರ್ಟ್ (Karnataka High court) ಕಳವಳ ವ್ಯಕ್ತಪಡಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತವಾಗಿ ಪಿಐಎಲ್( ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ದಾಖಿಸಿಕೊಂಡಿದೆ. ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್​ ಜಾರಿ ಮಾಡಿದೆ.

ಕರ್ನಾಟಕದಲ್ಲಿ 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಮೂಲಸೌಕರ್ಯ ಸಮಸ್ಯೆಯಿದೆ. ರಾಜ್ಯದ ಆಸ್ಪತ್ರೆಗಳಲ್ಲಿ 1,60,000 ಬೆಡ್​ಗಳ ಅವಶ್ಯಕತೆ ಇದ್ದು, ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಶೇ.39.1ರಷ್ಟು ನರ್ಸ್​ಗಳ ಕೊರತೆ ಇದೆ. ಹೀಗೆ ರಾಜ್ಯದಲ್ಲಿ ವೈದ್ಯಕೀಯ ಸೌಕರ್ಯದ‌ ಕೊರತೆಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ವರದಿಗಳನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ.

ಇನ್ನು ಈ ಬಗ್ಗ ಕೋರ್ಟ್​​ಗೆ ನೆರವಾಗಲು ಅಮೈಕಸ್ ಕ್ಯೂರಿಯಾಗಿ ವಕೀಲ ಶ್ರೀಧರ್ ಪ್ರಭು ನೇಮಕ ಮಾಡಿ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್​ರಿದ್ದ ಪೀಠ ಆದೇಶ ಹೊರಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ