ಬೆಂಗಳೂರು, (ನವೆಂಬರ್ 07): ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ(Government Hospitals) 16500 ವೈದ್ಯಕೀಯ ಸಿಬ್ಬಂದಿ ಕೊರತೆ ಇರುವುದು ಬೆಳಕಿಗೆ ಬಂದಿದೆ. ಇದಕ್ಕೆ ಕರ್ನಾಟಕ ಹೈಕೋರ್ಟ್ (Karnataka High court) ಕಳವಳ ವ್ಯಕ್ತಪಡಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತವಾಗಿ ಪಿಐಎಲ್( ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ) ದಾಖಿಸಿಕೊಂಡಿದೆ. ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕರ್ನಾಟಕದಲ್ಲಿ 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಗ್ರಾಮೀಣ ಪ್ರದೇಶದಲ್ಲಿ ವೈದ್ಯಕೀಯ ಮೂಲಸೌಕರ್ಯ ಸಮಸ್ಯೆಯಿದೆ. ರಾಜ್ಯದ ಆಸ್ಪತ್ರೆಗಳಲ್ಲಿ 1,60,000 ಬೆಡ್ಗಳ ಅವಶ್ಯಕತೆ ಇದ್ದು, ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಶೇ.39.1ರಷ್ಟು ನರ್ಸ್ಗಳ ಕೊರತೆ ಇದೆ. ಹೀಗೆ ರಾಜ್ಯದಲ್ಲಿ ವೈದ್ಯಕೀಯ ಸೌಕರ್ಯದ ಕೊರತೆಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಈ ವರದಿಗಳನ್ನು ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿಕೊಂಡಿದೆ.
ಇನ್ನು ಈ ಬಗ್ಗ ಕೋರ್ಟ್ಗೆ ನೆರವಾಗಲು ಅಮೈಕಸ್ ಕ್ಯೂರಿಯಾಗಿ ವಕೀಲ ಶ್ರೀಧರ್ ಪ್ರಭು ನೇಮಕ ಮಾಡಿ ಮುಖ್ಯನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ರಿದ್ದ ಪೀಠ ಆದೇಶ ಹೊರಡಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ