ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿಯ ಕೊರತೆ; ಕೇಂದ್ರಕ್ಕೆ ಮತ್ತೆ ಪತ್ರ ಬರೆಯಲು ಮುಂದಾದ ಆಹಾರ ಇಲಾಖೆ

ಸಿದ್ದರಾಮಯ್ಯನವರ ಕನಸಿನ ಯೋಜನೆ ಅನ್ನಭಾಗ್ಯಕ್ಕೆ ಕೇಂದ್ರದಿಂದ ಅಕ್ಕಿ ಸಿಕ್ಕಿದೆ.‌ ಆದ್ರೆ ಅನ್ನಭಾಗ್ಯ ಯೋಜನೆಗೆ ಅಕ್ಕಿ ಕೊರತೆ ಎದುರಾಗಿದೆ. ಹೀಗಾಗಿ ಕೇಂದ್ರಕ್ಕೆ ಮತ್ತೆ ಪತ್ರ ಬರೆಯಲು ಆಹಾರ ನಾಗಾರೀಕ ಸರಬರಾಜು ಇಲಾಖೆ ಮುಂದಾಗಿದೆ. ಅಕ್ಕಿಗಾಗಿ ಮತ್ತೆ ಆಹಾರ ನಾಗರೀಕ ಸರಬರಾಜು ಇಲಾಖೆಯ ಸಚಿವರು ಕೇಂದ್ರ ಸಚಿವರನ್ನ ಭೇಟಿ‌ ಮಾಡಲು ಮುಂದಾಗಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿಯ ಕೊರತೆ; ಕೇಂದ್ರಕ್ಕೆ ಮತ್ತೆ ಪತ್ರ ಬರೆಯಲು ಮುಂದಾದ ಆಹಾರ ಇಲಾಖೆ
ಸಾಂದರ್ಭಿಕ ಚಿತ್ರ
Follow us
Poornima Agali Nagaraj
| Updated By: ಆಯೇಷಾ ಬಾನು

Updated on: Aug 31, 2024 | 11:31 AM

ಬೆಂಗಳೂರು, ಆಗಸ್ಟ್​.31: ಸಿಎಂ ಸಿದ್ದರಾಮಯ್ಯನವರ (Siddaramaiah) ಕನಸಿನ ಯೋಜನೆ ಅನ್ನಭಾಗ್ಯ ಯೋಜನೆ (Anna Bhagya Scheme) ಜಾರಿಗೆ ಒಂದಿಲ್ಲೊಂದು ವಿಗ್ನ ಎದುರಾಗುತ್ತಿದ್ದು, ಕೇಂದ್ರದಿಂದ ಅಕ್ಕಿ ಸಿಗುತ್ತಿದೆ. ಇದೀಗ ಖುಷಿ‌ ಪಡುವ ಹೊತ್ತಿಗೆ ಮತ್ತೆ ಅಕ್ಕಿಯ ಕೊರತೆ ಎದುರಾಗಿದ್ದು, ಅಕ್ಕಿಗಾಗಿ ಮತ್ತೆ ಆಹಾರ ನಾಗರೀಕ ಸರಬರಾಜು ಇಲಾಖೆಯ ಸಚಿವರು ಕೇಂದ್ರ ಸಚಿವರನ್ನ ಭೇಟಿ‌ ಮಾಡಲು ಮುಂದಾಗಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಕೇಂದ್ರದಿಂದ 2.36 ಲಕ್ಷ ಟನ್ ಅಕ್ಕಿ ನೀಡಿದ್ರೂ ಅನ್ನಭಾಗ್ಯ ಯೋಜನೆಗೆ ಮತ್ತೆ ಅಕ್ಕಿ ಕೊರತೆ ಎದುರಾಗಿದೆ. ಈ ತಿಂಗಳು ಡಿಬಿಟಿ ಹಣದ ಬದಲು ಅಕ್ಕಿಯನ್ನೆ ಕೊಡಲು ನಿರ್ಧರಿದ್ದ ಆಹಾರ ನಾಗರೀಕ ಸರಬರಾಜು ಇಲಾಖೆಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಒಂದೂವರೆ ಕೋಟಿ ಬಿಪಿಎಲ್ ಫಲಾನುಭವಿಗಳ ಪೈಕಿ 13 ಲಕ್ಷದ 45 ಸಾವಿರ ಫಲಾನುಭವಿಗಳಿಗೆ ಅಕ್ಕಿಯ ಕೊರತೆ ಎದುರಾಗಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಕಣಕ್ಕೆ ರಾಷ್ಟ್ರಪತಿ ಎಂಟ್ರಿ!

ಸಧ್ಯ ಕೇಂದ್ರ ಸರ್ಕಾರ 2.36 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನ ಮುಂದಿನ ಮಾರ್ಚ್ ವರೆಗೂ ಕೊಡಲು ನಿರ್ಧರಿಸಿದೆ. ಆದ್ರೆ ಇಷ್ಟು ಅಕ್ಕಿ ಕೊಟ್ರು 13 ಲಕ್ಷದ 45 ಸಾವಿರ ಜನರಿಗೆ ಅಕ್ಕಿಯ ಕೊರತೆ ಎದುರಾಗಿದ್ದು, ಮತ್ತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಸಚಿವರನ್ನ ಭೇಟಿಯಾಗಲು ಆಹಾರ ನಾಗಾರೀಕ ಸರಬರಾಜು ಇಲಾಖೆ ಮುಂದಾಗಿದ್ದು, 2.36 ಲಕ್ಷ ಟನ್ ಅಕ್ಕಿಯ ಜೊತೆಗೆ ಮತ್ತೆ 20% ರಷ್ಟು ಹೆಚ್ಚು ಅಕ್ಕಿಯನ್ನ ಕೇಂದ್ರ ಸರ್ಕಾರ ಕೊಟ್ರೆ ಸೆಪ್ಟೆಂಬರ್ ತಿಂಗಳಿನಿಂದಲೇ ಅನ್ನಭಾಗ್ಯದ 5 ಕೆಜಿ ಅಕ್ಕಿಭಾಗ್ಯವು ಆರಂಭವಾಗಲಿದೆ.

ಇನ್ನು,‌ ಅಕ್ಕಿ ಕೊಡ್ತೀವಿ ಅಂತ ಹೇಳಿ ಹಣ ಆರಂಭಮಾಡಿದ್ರು. ಆದ್ರೆ ಎರಡು ತಿಂಗಳಿಂದ ಡಿಬಿಟಿ ಹಣವು ಬಂದಿಲ್ಲ. ಹೀಗಾಗಿ ಅನ್ನಭಾಗ್ಯದ ಹಣವನ್ನಾದ್ರು ಹಾಕಿ.‌ ಈ ಹಣ ಹಾಕಿದ್ರೆ ತುಂಬ ಅನುಕೂಲವಾಗುತ್ತೆ ಅಂತ ಬಿಪಿಎಲ್ ಫಲಾನುಭವಿಗಳು ಹೇಳ್ತಿದ್ದಾರೆ.

ಒಟ್ನಲ್ಲಿ, ಮುಂದಿನ ತಿಂಗಳಿನಿಂದ ಹಣದ ಬದಲು ಅಕ್ಕಿ ಸಿಗತ್ತೆ ಅಂತ ಖುಷಿಯಾಗಿದ್ದ ಫಲಾನುಭವಿಗಳಿಗೆ ಮತ್ತೆ ಹುಸಿಯಾಗಿದ್ದು, ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ ಅಕ್ಕಿಯನ್ನ ಕೊಡುತ್ತಾ ಇಲ್ವಾ ಎನ್ನುವುದನ್ನ ಕಾದುನೋಡ್ಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ