AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಸ್ಥಗಿತ​!

Tirupati Laddu Controversy: ತಿರುಪತಿ ಲಡ್ಡು ಪ್ರಸಾದ ಕಲಬೆರಕೆಯಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರ ರಾಷ್ಟ್ರಾದ್ಯಂತ ಸದ್ದು ಮಾಡಿದೆ. ಇದರ ಬೆನ್ನಲ್ಲೇ ಇದೀಗ, ಬೆಂಗಳೂರಿನ ವೈಯಾಲಿಕಾವಲ್​ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ.

ಬೆಂಗಳೂರಿಗೆ ಪೂರೈಕೆಯಾಗುತ್ತಿದ್ದ ತಿರುಪತಿ ಲಡ್ಡು ಸ್ಥಗಿತ​!
ತಿರುಪತಿ ಲಡ್ಡ ಪ್ರಸಾದ
Follow us
Poornima Agali Nagaraj
| Updated By: ವಿವೇಕ ಬಿರಾದಾರ

Updated on:Oct 07, 2024 | 11:40 AM

ಬೆಂಗಳೂರು, ಅಕ್ಟೋಬರ್​ 07: ಬೆಂಗಳೂರಿನ (Bengaluru) ವೈಯಾಲಿಕಾವಲ್​​ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ (TTD) ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಏಕೆಂದರೆ, ಬೆಂಗಳೂರಿಗೆ ಬರುತ್ತಿದ್ದ ಲಡ್ಡು ಪ್ರಸಾದವನ್ನು ಟಿಟಿಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೌದು, ತಿರುಪತಿಯಲ್ಲಿ (Tirupati) ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದ, ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅಕ್ಟೋಬರ್​​​ 12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಟಿಟಿಡಿ ಆಡಳಿತ ಮಂಡಳಿ ಲಡ್ಡು ಸರಬರಾಜು ಮಾಡುವುದಿಲ್ಲ.

ತಿರುಪತಿ ಲಡ್ಡು ವಿವಾದ

ತಿರುಪತಿ ದೇವಸ್ಥಾನದಲ್ಲಿ ನೀಡಲಾಗುವ ಪ್ರಸಾದವಾದ ಲಡ್ಡು ತಯಾರಿಕೆಗೆ ಕಳಪೆ ಗುಣಮಟ್ಟದ ತುಪ್ಪ ಬಳಸಲಾಗಿದೆ. ಆ ತುಪ್ಪದಲ್ಲಿ ಪ್ರಾಣಿಯ ಕೊಬ್ಬು, ಮೀನಿನ ಎಣ್ಣೆ ಮತ್ತಿತರ ಎಣ್ಣೆಗಳ ಅಂಶ ಇದ್ದುದು ಲ್ಯಾಬ್ ವರದಿಯಲ್ಲಿ ಪತ್ತೆಯಾಗಿತ್ತು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಹಿಂದೂಗಳ ಭಾವನಗೆ ದಕ್ಕೆ ಉಂಟು ಮಾಡಿದೆ.

ಲಡ್ಡು ತಯಾರಿಕೆಗೆ ಕೆಎಂಎಫ್​​ ತುಪ್ಪ

ತಿರುಪತಿ ಲಡ್ಡು ಪಾವಿತ್ರ್ಯತೆಗೆ ಧಕ್ಕೆ ವಿವಾದದ ಬೆನ್ನಲ್ಲೇ ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿರುಪತಿ ಲಡ್ಡು ವಿವಾದ ಮಧ್ಯೆಯೇ ಮತ್ತಷ್ಟು ನಂದಿನಿ ತುಪ್ಪ ಪೂರೈಸುವಂತೆ ಕೆಎಂಎಫ್​​ಗೆ ಟಿಟಿಡಿ ಮನವಿ ಮಾಡಿತ್ತು. ಅದರಂತೆ ಕೆಎಂಎಫ್​ ಟಿಟಿಡಿಗೆ ಸೂಕ್ತ ಭದ್ರತೆಯೊಂದಿಗೆ ತುಪ್ಪ ಕಳುಹಿಸುತ್ತಿದೆ.

ಇದನ್ನೂ ಓದಿ: ಹೊಸ ತನಿಖೆಗೆ ಸುಪ್ರೀಂಕೋರ್ಟ್​ ಆದೇಶ, 5 ಸದಸ್ಯರ ಸ್ವತಂತ್ರ ಎಸ್​ಐಟಿ ರಚನೆ

ತಿರುಪತಿ ಲಡ್ಡು ಪ್ರಸಾದ ಬಳಸದಿರಲು ಅರ್ಚಕರು ನಿರ್ಧಾರ

ತಿರುಪತಿ ಲಡ್ಡು ಪ್ರಸಾದ ತಯಾರಿಕೆಗೆ ಬಳಸುವ ತುಪ್ಪ ಕಳಪೆ ಗುಣಮಟ್ಟದಿಂದ ಕೂಡಿದೆ. ಈ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕರ್ನಾಟಕದ ಅರ್ಚಕರು ತಿರುಪತಿ ಲಡ್ಡು ಪ್ರಸಾದವನ್ನು ಬಳಸದಂತೆ ನಿರ್ಧರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:17 am, Mon, 7 October 24