AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lalbagh Flower Show 2023: ಲಾಲ್​ಬಾಗ್​ನಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ, ಹಲವೆಡೆ ವಾಹನ ನಿಲುಗಡೆ ನಿರ್ಬಂಧ

ಸ್ವಾತಂತ್ರ್ಯ ದಿನದ ಅಂಗವಾಗಿ ಇಂದಿನಿಂದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಇಂದು ಸಂಜೆ 6 ಗಂಟೆಗೆ ಸಿಎಂ‌ ಸಿದ್ದರಾಮಯ್ಯನವರು ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ.

Lalbagh Flower Show 2023:  ಲಾಲ್​ಬಾಗ್​ನಲ್ಲಿ ಇಂದಿನಿಂದ ಫಲಪುಷ್ಪ ಪ್ರದರ್ಶನ, ಹಲವೆಡೆ ವಾಹನ ನಿಲುಗಡೆ ನಿರ್ಬಂಧ
ಲಾಲ್​ ಬಾಗ್​ನಲ್ಲಿ ಸಿದ್ದತೆ
Poornima Agali Nagaraj
| Updated By: ಆಯೇಷಾ ಬಾನು|

Updated on: Aug 04, 2023 | 7:16 AM

Share

ಬೆಂಗಳೂರು, ಆ.04: 76ನೇ ಸ್ವಾತಂತ್ರ್ಯ ದಿನಾಚರಣೆ(76th Independence Day) ಪ್ರಯುಕ್ತ ತೋಟಗಾರಿಕೆ ಇಲಾಖೆ ವತಿಯಿಂದ ಬೆಂಗಳೂರಿನ ಸಸ್ಯಕಾಶಿ ಲಾಲ್ ಬಾಗ್​ನಲ್ಲಿ 214ನೇ ಫ್ಲವರ್ ಶೋ ಆಯೋಜಿಸಲಾಗಿದೆ(Lalbagh Flower Show). ಇಂದು ಸಂಜೆ 6 ಗಂಟೆಗೆ ಸಿಎಂ‌ ಸಿದ್ದರಾಮಯ್ಯನವರು(Siddaramaiah) ಫ್ಲವರ್ ಶೋ ಉದ್ಘಾಟನೆ ಮಾಡಲಿದ್ದಾರೆ. ಇಂದಿನಿಂದ ಆಗಸ್ಟ್ 15ರವರೆಗೂ ಫ್ಲವರ್ ಶೋ ನಡೆಯಲಿದೆ.

ಸ್ವಾತಂತ್ರ್ಯ ದಿನದ ಅಂಗವಾಗಿ ಇಂದಿನಿಂದ ಸಸ್ಯಕಾಶಿ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆಯೋಜಿಸಲಾಗಿದೆ. ಈ ಬಾರಿಯ ಫ್ಲವರ್ ಶೋನಲ್ಲಿ ವಿಧಾನಸೌಧ ಹಾಗೂ ಅದರ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಥೀಮ್ ನಲ್ಲಿ ನಡೆಯುತ್ತಿದ್ದು, ರಾಜ್ಯದ ಹಿರಿಮೆ ಹಿಗ್ಗಿಸಿದ ಕೆಂಗಲ್ ಹನುಮಂತಯ್ಯ ಅವರ ಬದುಕು, ಸಾಧನೆ ಹಾಗೂ ಅವರ ಕನಸುಗಳ ಬಗೆಗಿನ ಸಂಪೂರ್ಣ ಮಾಹಿತಿ ಫಲಕಗಳ ಮೂಲಕ ಜನರಿಗೆ ಇಲ್ಲಿ ತಿಳಿಸಲಾಗುತ್ತಿದೆ. ಜೊತೆಗೆ ಲಾಲ್ ಬಾಗ್​ನ ಗಾಜಿನ ಮನೆಯಲ್ಲಿ ಹೂವಿನಲ್ಲಿ ವಿಧಾನಸೌಧ ತಲೆ ಎತ್ತಿ ನಿಂತಿದೆ.

ಇನ್ನು ಈ ಬಾರಿಯ ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ವಿಧಾನಸೌಧ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಗಿರಲಿದೆ. ಒಟ್ಟು 3.5 ಲಕ್ಷ ಬಗೆಬಗೆಯ ಹೂವುಗಳಿಂದ ಈ ವಿಧಾನಸೌಧ ನಿರ್ಮಿಸಲಾಗಿದೆ. ಇದರ ಜೊತೆಗೆ ಕೆಂಗಲ್ ಹನುಮಂತಯ್ಯವನವರ ಹೂವಿನ ಪ್ರತಿಮೆಯೂ ಇಲ್ಲಿ ಇರಲಿದೆ. ಆದರೆ ಈ ಬಾರಿ ಸ್ಕಾಟ್ಲೆಂಟ್, ಇಂಡೋನೇಷಿಯಾದ ಹೂವುಗಳಿಗೆ ಗೇಟ್ ಪಾಸ್ ನೀಡಲಾಗಿದ್ದು, ಕೊಲ್ಕತ್ತಾ, ಪುಣೆ, ಆಂಧ್ರ, ಊಟಿ ಸೇರಿದಂತೆ ದೇಶದ ಮೂಲೆ ಮೂಲೆಯಿಂದ ಹೂವುಗಳನ್ನು ತರಿಸಲಾಗಿದೆ. ಒಟ್ಟಾರೆ ಈ ಬಾರಿ 25 ಲಕ್ಷ ಹೂವುಗಳು ಫಲಪುಷ್ಪ ಪ್ರದರ್ಶನದಲ್ಲಿ ಮೈಬಳುಕಿಸಿ ಜನರ ಮನಸೆಳೆಯಲು ಸಿದ್ದವಾಗಿನಿಂತಿದೆ.

ಇದನ್ನೂ ಓದಿ: Lalbagh: ಬೆಂಗಳೂರಿನ ಲಾಲ್​ಬಾಗ್​ಗೆ ಭೇಟಿ ನೀಡಿದರೆ ಇವುಗಳನ್ನು ಮಿಸ್ ಮಾಡದೆ ನೋಡಿ, ಎಂಜಾಯ್ ಮಾಡಿ

200 ಸಿಸಿಟಿವಿ ಅಳವಡಿಕೆ, 400ಕ್ಕೂ ಅಧಿಕ ಭದ್ರತಾ ಸಿಬ್ಬಂದಿ ನಿಯೋಜನೆ

ಇನ್ನು ಫಲಪುಷ್ಪ ಪ್ರದರ್ಶನಕ್ಕೆ ಟಿಕೆಟ್ ನಿಗದಿ ಮಾಡಲಾಗಿದ್ದು, ವಯಸ್ಕರಿಗೆ ವಾರದ ದಿನಗಳಲ್ಲಿ 70 ರೂ. ಹಾಗೂ ವಾರದ ಕೊನೆಯಲ್ಲಿ 80 ರೂಪಾಯಿ ಹಾಗೂ ಮಕ್ಕಳಿಗೆ 30 ರೂಪಾಯಿ ಇದೆ. ಜೊತೆಗೆ ಶಾಲಾ ಮಕ್ಕಳು ಶಾಲೆಯ ಯೂನಿಫಾರ್ಮ್ ಹಾಗೂ ಐಡಿ ಕಾರ್ಡ್ ಜೊತೆಗೆ ಬಂದರೆ ಉಚಿತವಾಗಿ ಹೂವಿನ ಲೋಕವನ್ನು ಕಣ್ತುಂಬಿಕೊಳ್ಳಬಹುದಾಗಿದೆ. ಇನ್ನು ಭದ್ರತೆ ದೃಷ್ಟಿಯಿಂದ 200 ಸಿಸಿಟಿವಿ ಅಳವಡಿಕೆ ಮಾಡುವುದರ ಜೊತೆಗೆ 400ಕ್ಕೂ ಅಧಿಕ ಭದ್ರತಾ ಸಿಬ್ಬಂದಿಗಳನ್ನೂ ನಿಯೋಜಿಸಲಾಗಿದೆ. ಅಲ್ಲದೆ ಪ್ರದರ್ಶನಕ್ಕೆ ಆಗಮಿಸುವ ಸಾರ್ವಜನಿಕರು ಸಾರ್ವಜನಿಕ ಸಾರಿಗೆ ಬಳಸಿದರೆ ಸಂಚಾರ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆ ಬಗೆಹರಿಯಲಿದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮನವಿಮಾಡಿದ್ದಾರೆ‌. ಅಲ್ಲದೆ ಫ್ಲವರ್ ಶೋ ವೀಕ್ಷಣೆಗೆ ಲಕ್ಷಾಂತರ ಜನರ ಆಗಮನ ಹಿನ್ನೆಲೆ ಲಾಲ್​​ಬಾಗ್​ ಬಳಿ ಸಂಚಾರ ದಟ್ಟಣೆ ಆಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಪರ್ಯಾಯ ಮಾರ್ಗ ಜೊತೆಗೆ ನಿಗದಿತ ಸ್ಥಳದಲ್ಲಿ ವಾಹನ ಪಾರ್ಕ್ ಮಾಡಲು ಸೂಚಿಸಲಾಗಿದೆ.

ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  • ಡಾ.ಮರಿಗೌಡ ರಸ್ತೆ, ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ದ್ವಿಚಕ್ರ ವಾಹನ ನಿಲುಗಡೆ
  • ಕೆ.ಹೆಚ್.ರಸ್ತೆ, ಶಾಂತಿನಗರ ಬಿ.ಎಂ.ಟಿ.ಸಿ. ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ
  • ಡಾ.ಮರಿಗೌಡ ರಸ್ತೆ- ಹಾಪ್ ಕಾಮ್ಸ್ ನಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ
  • ಜೆ.ಸಿ. ರಸ್ತೆ ಕಾರ್ಪೊರೇಷನ್ ಪಾರ್ಕಿಂಗ್ ಸ್ಥಳದಲ್ಲಿ ದ್ವಿ ಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ನಿಲುಗಡೆ

ವಾಹನಗಳ ನಿಲುಗಡೆ ನಿಷೇಧಿಸಿರುವ ರಸ್ತೆಗಳು

  • ಡಾ. ಮರಿಗೌಡ ರಸ್ತೆ,ಲಾಲ್ ಬಾಗ್ ಮುಖ್ಯ ದ್ವಾರದಿಂದ ನಿಮ್ಹಾನ್ಸ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
  • ಕೆ.ಹೆಚ್.ರಸ್ತೆ, ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ
  • ಲಾಲ್‌ ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್‌ ಬಾಗ್ ಮುಖ್ಯದ್ವಾರದ ವರೆಗೆ
  • ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್ ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್ ವರೆಗೆ
  • ಬಿ.ಎಂ.ಟಿ.ಸಿ ರಸ್ತೆಯಲ್ಲಿ, ರಸ್ತೆಯ ಎರಡೂ ಬದಿಗಳಲ್ಲಿ
  • ಲಾಲ್ ಬಾಗ್ ವೆಸ್ಟಿಗೇಟ್‌ನಿಂದ ಆರ್.ವಿ. ಟೀಚರ್ ಕಾಲೇಜ್‌ವರೆಗೆ
  • ಆರ್ ವಿ ಟೀಚರ್ ಕಾಲೇಜ್‌ನಿಂದ ಆಶೋಕ ಪಿಲ್ಲರ್ ವರೆಗೆ
  • ಅಶೋಕ ಪಿಲ್ಲರ್‌ನಿಂದ ಸಿದ್ದಾಪುರ ಜಂಕ್ಷನ್‌ ವರೆಗೆ
  • ಡಾ.ಮರೀಗೌಡ ರಸ್ತೆ, ಲಾಲ್‌ ಬಾಗ್ ರಸ್ತೆ, ಕೆ.ಹೆಚ್. ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಸಾಧ್ಯತೆ ಹಿನ್ನೆಲೆ ಸಾರ್ವಜನಿಕರು ಸಾಧ್ಯವಾದಷ್ಟು ಸಮೂಹ ಸಾರಿಗೆ ವ್ಯವಸ್ಥೆ ಬಳಸಲು ಮನವಿ ಮಾಡಲಾಗಿದೆ. ಬಿಎಂಟಿಸಿ ಬಸ್‌, ಮೆಟ್ರೋ, ಕ್ಯಾಬ್‌ಗಳನ್ನು ಬಳಸಲು ಸೂಚಿಸಲಾಗಿದೆ.

    ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ