AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ: ಹೂವುಗಳಲ್ಲಿ ಅರಳಲಿದೆ ಗಂಗರ ಸಾಮ್ರಾಜ್ಯ!

ಈ ಬಾರಿ ಸಸ್ಯ ಕಾಶಿ ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಂಪೂರ್ಣವಾಗಿ ಸಜ್ಜಾಗಿದೆ. ನಾಳೆಯಿಂದ ಪ್ರಾರಂಭವಾಗಲಿರುವ ಈ ಹೂಗಳ ಹಬ್ಬದಲ್ಲಿ 1,000 ವರ್ಷಗಳ ಗಂಗ ಸಾಮ್ರಾಜ್ಯದ ಗತವೈಭವ ಹೂಗಳ ಮೂಲಕ ಅನಾವರಣಗೊಳ್ಳಲಿದೆ. ಹಾಗಾದ್ರೆ ಈ ಬಾರಿ ಎಷ್ಟು ತಳಿಯ ಹೂವುಗಳಲ್ಲಿ ಗಂಗರ ಸಾಮ್ರಾಜ್ಯ ಅರಳಿಲಿದೆ. ಎಷ್ಟು ದಿನ ಇರಲಿದೆ ಎನ್ನುವ ವಿವರ ಇಲ್ಲಿದೆ.

ನಾಳೆಯಿಂದ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಫ್ಲವರ್‌ ಶೋ: ಹೂವುಗಳಲ್ಲಿ ಅರಳಲಿದೆ ಗಂಗರ ಸಾಮ್ರಾಜ್ಯ!
Lalbagh Flower Show
ರಮೇಶ್ ಬಿ. ಜವಳಗೇರಾ
|

Updated on: Aug 05, 2026 | 8:59 PM

Share

ಬೆಂಗಳೂರು, (ಆಗಸ್ಟ್ 05): ಸ್ವಾತಂತ್ರ್ಯೋತ್ಸವದ (Independence Day) ಅಂಗವಾಗಿ ನಗರದ ಐತಿಹಾಸಿಕ ಲಾಲ್‌ಬಾಗ್‌ ಉದ್ಯಾನದಲ್ಲಿ ಆಗಸ್ಟ್‌ 6ರಿಂದ 17ರವರೆಗೆ 220ನೇ ಫಲಪುಷ್ಪ ಪ್ರದರ್ಶನ (Lalbagh Flower Show 2026) ಆಯೋಜಿಸಲಾಗಿದೆ. ಈ ಬಾರಿಯ ಪ್ರದರ್ಶನದ ವಿಶೇಷತೆ ಎಂದರೆ, ಗಂಗ ರಾಜವಂಶದ ವೈಭವ, ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೂಗಳ ಮೂಲಕ ಅನಾವರಣಗೊಳಿಸಲಾಗುತ್ತಿದೆ. ಈ ಹೂಗಳ ಹಬ್ಬದಲ್ಲಿ 1,000 ವರ್ಷಗಳ ಗಂಗ ಸಾಮ್ರಾಜ್ಯದ ಗತವೈಭವ ಹೂಗಳ ಮೂಲಕ ಅನಾವರಣಗೊಳ್ಳಲಿದೆ. ಶ್ರವಣಬೆಳಗೊಳದ ಬಾಹುಬಲಿಯಿಂದ ಹಿಡಿದು ತಲಕಾಡಿನ ಪುರಾತನ ದೇವಾಲಯಗಳವರೆಗೆ ಇತಿಹಾಸದ ಸುವರ್ಣ ಪುಟಗಳನ್ನು ಲಾಲ್‌ಬಾಗ್ ಅಂಗಳದಲ್ಲಿ ಮರುಸೃಷ್ಟಿಸಲಾಗಿದೆ.

12 ದಿನಗಳ ಕಾಲ ಫಲಪುಷ್ಪ ಪ್ರದರ್ಶನ

ಆಗಸ್ಟ್ 6ರಿಂದ ಅಂದರೆ ನಾಳೆಯಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ 220ನೇ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಈ ಬಾರಿಯ ಪ್ರದರ್ಶನವು ಗಂಗ ಸಾಮ್ರಾಜ್ಯದ ವೈಭವವನ್ನು ಕೇಂದ್ರ ವಿಷಯವಾಗಿ ಇಟ್ಟುಕೊಂಡು ರೂಪುಗೊಂಡಿದೆ. ಐತಿಹಾಸಿಕ ಗಾಜಿನ ಮನೆಯಲ್ಲಿ ಬಣ್ಣ ಬಣ್ಣದ ಹೂಗಳ ಅಲಂಕಾರದ ನಡುವೆ ಗಂಗರ ಸಾಹಸ ಹಾಗೂ ಸಂಸ್ಕೃತಿ ಜೀವಂತವಾಗಲಿದೆ. ನಾಳೆ (ಆಗಸ್ಟ್ 06) ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ಫಲಪುಷ್ಪ ಪ್ರದರ್ಶನವನ್ನು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: ‘ಫ್ರೀಡಂ ಹಬ್ಬ’ ಘೋಷಣೆ: ವಿಧಾನಸೌಧದಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕರ ಬೃಹತ್ ಸ್ವಾತಂತ್ರ್ಯೋತ್ಸವ ಸಂಭ್ರಮ

ಪ್ರದರ್ಶನದಲ್ಲಿ ಗಂಗ ದೊರೆಗಳ ಬಲಿಷ್ಠ ಗಜಸೇನೆ, ಯುದ್ಧದ ರೋಮಾಂಚನಕಾರಿ ದೃಶ್ಯಗಳು, ಶ್ರವಣಬೆಳಗೊಳದ ಭಗವಾನ್ ಬಾಹುಬಲಿ ಪ್ರತಿಮೆ ಹಾಗೂ ತಲಕಾಡಿನ ದೇವಾಲಯಗಳ ಪ್ರತಿಕೃತಿಗಳು ಹೂವಿನ ಕಲಾಕೃತಿಗಳಾಗಿ ಮೂಡಿಬಂದಿವೆ. ಜೊತೆಗೆ ಕನ್ನಡ ಸಾಹಿತ್ಯ, ಶಿಕ್ಷಣ, ನೀರಾವರಿ ಮತ್ತು ಶಿಲ್ಪಕಲೆಗೆ ಗಂಗರ ಕೊಡುಗೆಯನ್ನು ಬಿಂಬಿಸುವ ಪ್ರದರ್ಶನಗಳು ಪ್ರಮುಖ ಆಕರ್ಷಣೆಯಾಗಲಿವೆ.

130ಕ್ಕೂ ಹೆಚ್ಚು ಅಪರೂಪದ ಹೂವಿನ ಚಿತ್ತಾರ

ಈ ಬಾರಿಯ ಪುಷ್ಪ ಪ್ರದರ್ಶನಕ್ಕಾಗಿ ತೋಟಗಾರಿಕೆ ಇಲಾಖೆಯು ಸುಮಾರು 2.75 ಕೋಟಿ ರೂಪಾಯಿ ವೆಚ್ಚ ಮಾಡಿದೆ. ದೇಶದ ನಾಲ್ಕು ವಿಭಿನ್ನ ರಾಜ್ಯಗಳಿಂದ 130ಕ್ಕೂ ಹೆಚ್ಚು ಅಪರೂಪದ ಹೂವಿನ ತಳಿಗಳನ್ನು ತರಿಸಲಾಗಿದೆ. ಸಾರ್ವಜನಿಕರ ಮನಸೊರೆಗೊಳ್ಳಲು ಲಾಲ್‌ಬಾಗ್ ಕೆರೆ ಬಳಿ ಕೃತಕ ಜಲಪಾತ ಹಾಗೂ ಆಕರ್ಷಕ ಸೆಲ್ಫಿ ಪಾಯಿಂಟ್‌ಗಳನ್ನು ನಿರ್ಮಿಸಲಾಗಿದೆ. ಲಕ್ಷಾಂತರ ವೀಕ್ಷಕರು ಆಗಮಿಸುವ ನಿರೀಕ್ಷೆಯಿರುವುದರಿಂದ ಟ್ರಾಫಿಕ್ ಹಾಗೂ ಗೊಂದಲ ತಡೆಯಲು ಆನ್‌ಲೈನ್ ಟಿಕೆಟ್ ವ್ಯವಸ್ಥೆ, ಹೆಚ್ಚುವರಿ ಪಾರ್ಕಿಂಗ್, 136 ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಹಾಗೂ ತುರ್ತು ಸೇವೆಗಾಗಿ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಆಂಬುಲೆನ್ಸ್ ಮತ್ತು ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ