AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೂ ಸಿಗುತ್ತೆ ಮೊಬೈಲ್: ಲಷ್ಕರ್ ಉಗ್ರನ ಬಿಂದಾಸ್ ಲೈಫ್ ಹೀಗಿದೆ ನೋಡಿ!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಲಷ್ಕರ್ ಉಗ್ರರ ಕೈಯಲ್ಲಿ ಆಂಡ್ರಾಯ್ಡ್ ಮೊಬೈಲ್​ಗಳು ಇರುವುದು ಹಾಗೂ ನಟೋರಿಯಸ್ ಕ್ರಿಮಿನಲ್ ಉಮೇಶ್ ರೆಡ್ಡಿಯಂತಹ ಕೈದಿಗಳ ಬಳಿಯೂ ಮೊಬೈಲ್ ಇರುವ ವಿಡಿಯೋ ಇದೀಗ ಬಹಿರಂಗವಾಗಿದೆ. ಇದು ಜೈಲಿನಿಂದಲೇ ಭಯೋತ್ಪಾದಕ ಚಟುವಟಿಕೆಗಳು ನಡೆಯುವ, ವಿಡಿಯೋ ಕಾಲ್ ಮತ್ತು ಫೋನ್ ಕರೆಗಳು ಮಾಡುವ ಸಾಧ್ಯತೆಗಳು ಹೆಚ್ಚಾಗಿರುವುದನ್ನು ತೋರಿಸಿವೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೂ ಸಿಗುತ್ತೆ ಮೊಬೈಲ್: ಲಷ್ಕರ್ ಉಗ್ರನ ಬಿಂದಾಸ್ ಲೈಫ್ ಹೀಗಿದೆ ನೋಡಿ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರಿಗೂ ಸಿಗುತ್ತೆ ಮೊಬೈಲ್
Shivaprasad B
| Updated By: Ganapathi Sharma|

Updated on:Nov 08, 2025 | 1:40 PM

Share

ಬೆಂಗಳೂರು, ನವೆಂಬರ್ 8: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ (Parappana Agrahara Jail) ಕೈದಿಗಳಿಗೆ ದೊರೆಯುತ್ತಿರುವ ವಿಐಪಿ ಸೌಲಭ್ಯಗಳು ಮತ್ತು ಮೊಬೈಲ್ ಫೋನ್​ಗಳು ದೇಶದ ಭದ್ರತೆಗೆ ಗಂಭೀರ ಸವಾಲೊಡ್ಡಿದೆ ಎಂದು ನಿವೃತ್ತ ಪೊಲೀಸ್ ಅಧಿಕಾರಿ ಎಸ್.ಕೆ. ಉಮೇಶ್ ಆತಂಕ ವ್ಯಕ್ತಪಡಿಸಿದ್ದಾರೆ. ನಟೋರಿಯಸ್ ಕ್ರಿಮಿನಲ್ ಉಮೇಶ್ ರೆಡ್ಡಿ ಮೊಬೈಲ್ ಬಳಸುತ್ತಾ, ಟಿವಿ ನೋಡುತ್ತಾ ಇರುವ ವಿಡಿಯೋ, ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವ ವಿಡಿಯೋ ಬೆಳಕಿಗೆ ಬಂದ ಸಂದರ್ಭದಲ್ಲಿ ಎಸ್.ಕೆ. ಉಮೇಶ್ ಅವರು ‘ಟಿವಿ9’ಗೆ ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ, ಸುಮಾರು 35 ವರ್ಷಗಳ ಕಾಲ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್.ಕೆ. ಉಮೇಶ್ ಅಭಿಪ್ರಾಯ ಹಂಚಿಕೊಂಡಿದ್ದು, ಕಳವಳ ವ್ಯಕ್ತಪಡಿಸಿದ್ದಾರೆ. ಹಿಂದೆ ಕೂಡ ಜೈಲುಗಳಲ್ಲಿ ಇಂತಹ ಅಕ್ರಮಗಳು ನಡೆಯುತ್ತಿದ್ದವು. ಆದರೆ, ಜೈಲಿನೊಳಗೆ ಮೊಬೈಲ್ ಬಳಕೆ ಮತ್ತು ಇತರ ವಿಐಪಿ ಸೌಲಭ್ಯಗಳು ದೇಶದ ದೃಷ್ಟಿಯಿಂದ ಅಭದ್ರತೆಯನ್ನು ಸೃಷ್ಟಿಸುತ್ತವೆ ಎಂದು ಅವರು ಒತ್ತಿ ಹೇಳಿದ್ದಾರೆ. ಈ ಸಮಸ್ಯೆ ಪರಿಹಾರಕ್ಕೆ ಯಾವುದೇ ಕೆಲಸ ಆಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಉಮೇಶ್ ರೆಡ್ಡಿ, ಲಷ್ಕರ್ ಉಗ್ರನ ಕೈಯಲ್ಲಿ ಮೊಬೈಲ್: ವಿಡಿಯೋ ಇಲ್ಲಿ ನೋಡಿ

ಜೈಲಿನ ಆಡಳಿತವನ್ನು ಸುಧಾರಿಸಲು, ಜೈಲು ಅಧೀಕ್ಷಕರ ಹುದ್ದೆಗೆ ಐಪಿಎಸ್ ಅಧಿಕಾರಿಯೊಬ್ಬರನ್ನು ನೇಮಿಸಬೇಕು ಎಂದು ಉಮೇಶ್ ಸಲಹೆ ನೀಡಿದ್ದಾರೆ. ಪ್ರಸ್ತುತ ಜೈಲರ್‌ ಆಗಿ ಅಡಿಷನಲ್ ಡಿಸಿ ಕಾರ್ಯನಿರ್ವಹಿಸುತ್ತಿದ್ದು, ಐಪಿಎಸ್ ಅಧಿಕಾರಿಯ ನೇಮಕದಿಂದ ವ್ಯವಸ್ಥೆಯಲ್ಲಿ ಸುಧಾರಣೆ ತರಬಹುದು ಎಂಬುದು ಅವರ ಅನಿಸಿಕೆ. ಇತ್ತೀಚೆಗೆ ದರ್ಶನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಕಠಿಣ ನಿಲುವು ತೆಗೆದುಕೊಂಡಿದ್ದರೂ, ಹಲವು ಜೈಲುಗಳಲ್ಲಿ ಇಂತಹ ವಿಐಪಿ ಸೌಲಭ್ಯಗಳು ಮುಂದುವರಿದಿರುವುದು ಆಶ್ಚರ್ಯಕರ ಸಂಗತಿ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್ ಕ್ರಿಮಿನಲ್ ಉಮೇಶ್ ರೆಡ್ಡಿ ಬಿಂದಾಸ್ ಲೈಫ್: ಸುಪ್ರೀಂ ಆದೇಶಕ್ಕೇ ಇಲ್ಲ ಕಿಮ್ಮತ್ತು

ಕೈದಿಗಳಿಗೆ ಊಟ ಅಥವಾ ಇತರ ಸಣ್ಣಪುಟ್ಟ ಸೌಲಭ್ಯಗಳನ್ನು ಒದಗಿಸುವುದು ತಪ್ಪಲ್ಲ. ಆದರೆ, ಹೊರಗಿನಿಂದ ತಾಜ್ ಹೋಟೆಲ್​ನಿಂದ ಕೇಕ್ ತರಿಸಿ ಹುಟ್ಟುಹಬ್ಬ ಆಚರಿಸುವಂತಹ ಘಟನೆಗಳು ಜೈಲಿನ ನಿಯಮಾವಳಿಗಳನ್ನು ಉಲ್ಲಂಘಿಸಿವೆ ಎಂದು ಉಮೇಶ್ ಖಂಡಿಸಿದ್ದಾರೆ. ಇಂತಹ ಸೌಲಭ್ಯಗಳು ಜೈಲಿನ ಮೂಲ ಉದ್ದೇಶವನ್ನೇ ಹಾಳುಮಾಡುತ್ತವೆ. ಜೈಲು ಎಂದರೆ ನಿಯಮಗಳಿಗೆ ಬದ್ಧವಾಗಿರಬೇಕು. ಜೈಲಿನ ಆಡಳಿತಾಧಿಕಾರಿಗಳು ಈ ಅಕ್ರಮಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮೋಸ್ಟ್ ವಾಂಟೆಡ್ ಉಗ್ರನಿಗೇ ರಾಜಾತಿಥ್ಯ

ಅಂದಹಾಗೆ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಸಿಸ್​ನ ಮೋಸ್ಟ್ ವಾಂಟೆಡ್ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಎಂಬಾತನಿಗೂ ರಾಜಾತಿಥ್ಯ ದೊರೆಯುತ್ತಿರುವುದು ಬಯಲಾಗಿದೆ. ಈತ ಯುವಕರಮನ್ನು ಐಸಿಸ್ ಉಗ್ರ ಸಂಘಟನೆಗೆ ನೇಮಕ ಮಾಡುತ್ತಿದ್ದ. ಪರಪ್ಪನ ಅಗ್ರಹಾರ ಜೈಲಲ್ಲಿ ಈತನಿಗೆ ಸ್ಮಾರ್ಟ್ ಫೋನ್ ಭಾಗ್ಯ ಕರುಣಿಸಲಾಗಿದೆ. ಈತ ಜೈಲಿನಲ್ಲಿ ರಾಜಾರೋಷವಾಗಿ ಫೋನ್ ಬಳಕೆ ಮಾಡುತ್ತಿರುವುದು ಕಂಡುಬಂದಿದೆ. ಇದರೊಂದಿಗೆ, ಪರಪ್ಪನ ಅಗ್ರಹಾರ ಜೈಲು ಭಯೋತ್ಪಾದಕರ ಸ್ವರ್ಗವಾಗಿ ಪರಿಣಮಿಸಿದೆಯೇ ಎಂಬ ಅನುಮಾನವೂ ಹುಟ್ಟಿಕೊಂಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:32 am, Sat, 8 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ