AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ನಡೆ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅಸಮಾಧಾನ: ಆಡಿಯೋ ವೈರಲ್

ಸೊಸೈಟಿಗಳಲ್ಲಿ ಹಣ ವಸೂಲಿ ಬಗ್ಗೆ ಸಚಿವರಿಗೆ ಸಾಮಾಜಿಕ ಹೋರಾಟಗಾರ ಕರೆ ಮಾಡಿದ್ದು, ಈ ವೇಳೆ ಸರ್ಕಾರದ ನಡೆ ಬಗ್ಗೆ ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾಗುತ್ತಿದೆ.

ಸರ್ಕಾರದ ನಡೆ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಅಸಮಾಧಾನ: ಆಡಿಯೋ ವೈರಲ್
ಕಾನೂನು ಸಚಿವ ಮಾಧುಸ್ವಾಮಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 13, 2022 | 11:23 AM

Share

ಬೆಂಗಳೂರು: ಈ ಸರ್ಕಾರ ನಡೆಯುತ್ತಿಲ್ಲ ಕಣಪ್ಪ, ಏಳೆಂಟು ತಿಂಗಳು ಇದೆ ಅಂತ ಮ್ಯಾನೇಜ್​​ ಮಾಡುತ್ತಿದ್ದೇವೆ ಎಂದು ಸರ್ಕಾರದ ನಡೆ ಕುರಿತು ಕಾನೂನು ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾದ ಅವರ ಆಡಿಯೋ ವೈರಲ್ ಆಗಿದೆ. ಸೊಸೈಟಿಗಳಲ್ಲಿ ಹಣ ವಸೂಲಿ ಬಗ್ಗೆ ಸಚಿವರಿಗೆ ಸಾಮಾಜಿಕ ಹೋರಾಟಗಾರ ಕರೆ ಮಾಡಿದ್ದು, ಈ ವೇಳೆ ಸರ್ಕಾರದ ನಡೆ ಬಗ್ಗೆ ಸಚಿವ ಮಾಧುಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆನ್ನಲಾಗುತ್ತಿದೆ. ಈ ವೇಳೆ ರೈತರ ಸಮಸ್ಯೆ ಬಗೆಹರಿಸಲಾಗುವುದಿಲ್ಲ. ಸಹಕಾರ ಸಚಿವರ ಗಮನಕ್ಕೆ ತಂದರೂ ಅವರು ಏನು ಕ್ರಮ ಕೈಗೊಂಡಿಲ್ಲ ಏನು ಮಾಡೋಣ ಎಂದು ಮಾಧುಸ್ವಾಮಿ ಹೇಳಿದ್ದು, ಈ ಸರ್ಕಾರ ಏನೂ ನಡೆಯುತ್ತಿಲ್ಲ, ಏಳೆಂಟು ತಿಂಗಳಿದೆ ಎಂದು ಮ್ಯಾನೇಜ್ ಮಾಡುತ್ತಿದ್ದೇವೆ ಎಂದು ಸರ್ಕಾರದ ಬಗ್ಗೆ ಮಾಧುಸ್ವಾಮಿ ಮಾತಾಡಿದ್ದಾರೆನ್ನಲಾದ ಆಡಿಯೋ ವೈರಲ್ ಆಗುತ್ತಿದೆ.

ಸಾಮಾಜಿಕ ಹೋರಾಟಗಾರ ಭಾಸ್ಕರ್ ಜೊತೆಗೆ ದೂರವಾಣಿ ಮೂಲಕ ಮಾತನಾಡುವಾಗ ಸಚಿವರು ಹೇಳಿಕೆ ನೀಡಿದ್ದು, ಮೂರು ದಿನದ ಹಿಂದೆ ಈ ಸಂಭಾಷಣೆ ನಡೆದಿದೆ ಎನ್ನಲಾಗುತ್ತಿದೆ. ರೈತರಿಂದ ಬ್ಯಾಂಕ್​ನವರು ಹೆಚ್ಚುವರಿಯಾಗಿ ಹಣ ಪಡೆಯುತ್ತಿದ್ದಾರೆ. ರೈತರ ಹೆಸರಲ್ಲಿ ಬ್ಯಾಂಕ್‌ನವರೆ ಸಾಲ ಪಡೆಯುತ್ತಿದ್ದಾರೆ. ಈ ಬಗ್ಗೆ ಸಚಿವರಿಗೆ ದೂರು ನೀಡಿದಾಗ ದುಡ್ಡು ನಾನೇ ಕಟ್ಟಿದ್ದೀನಿ ಅಂತಾ ಅಸಹಾಯಕ ಹೇಳಿಕೆ ನೀಡಿದ್ದಾರೆ. ಸರ್ಕಾರ ನಡಿತ್ತಿಲ್ಲ ಅಂತಾ ಅವರೆ ಒಪ್ಪಿಕೊಂಡಿದ್ದು, ಸಹಕಾರಿ ಬ್ಯಾಂಕ್​ಗಳ ಎಂ.ಡಿ ಗೆ ದೂರು ನೀಡಿದ್ರೆ ಗಲಾಟೆ ಮಾಡಿ ಅಂತಿದ್ದಾರೆ ಎನ್ನಲಾಗುತ್ತಿದೆ.

Published On - 11:19 am, Sat, 13 August 22