AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಬಿಟ್ಟು ಜವಾಬ್ದಾರಿಯುತ ಕಾರ್ಯ ನಿರ್ವಹಿಸಿ -ಬಿಜೆಪಿಗೆ ಸಿಎಂ ಸಲಹೆ

ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ. ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ.

ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಬಿಟ್ಟು ಜವಾಬ್ದಾರಿಯುತ ಕಾರ್ಯ ನಿರ್ವಹಿಸಿ -ಬಿಜೆಪಿಗೆ ಸಿಎಂ ಸಲಹೆ
ಸಿಎಂ ಸಿದ್ದರಾಮಯ್ಯ
ಅನಿಲ್​ ಕಲ್ಕೆರೆ
| Edited By: ಆಯೇಷಾ ಬಾನು|

Updated on: Jan 03, 2024 | 12:27 PM

Share

ಬೆಂಗಳೂರು, ಜ.03: ಹುಬ್ಬಳ್ಳಿಯಲ್ಲಿ ಗಲಭೆ ಆರೋಪಿ ಬಂಧನ ಖಂಡಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ (BJP Protest) ನಡೆಸ್ತಿದೆ. ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸ್ತಿದ್ದಾರೆ. ಇನ್ನು ಇದೇ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ (Siddaramaiah) ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ಆಕ್ರೋಶ ಹೊರ ಹಾಕಿದ್ದಾರೆ. ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ. ಇದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು. ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಬಿಟ್ಟು ಜವಾಬ್ದಾರಿಯುತ ಕಾರ್ಯ ನಿರ್ವಹಿಸಿ ಎಂದು ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ನಾಲ್ಕುವರೆ ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ. ಅಪರಾಧಿಗಳಿಗೆ ಜಾತಿ, ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಎಂದು ಸಿದ್ದರಾಮಯ್ಯ ಬುದ್ಧಿ ಹೇಳಿದ್ದಾರೆ.

ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು

ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇದ್ದಾಗಲೇ ಲೋಕಾಯುಕ್ತ ಪೊಲೀಸರು ಬಿ.ಎಸ್.ಯಡಿಯೂರಪ್ಪನವರನ್ನು ಬಂಧಿಸಿ ಜೈಲಿಗಟ್ಟಿದ್ದರು. ಯಡಿಯೂರಪ್ಪನವರಿಗಿಂತ ದೊಡ್ಡ ಹಿಂದೂ? ರಾಮ ಭಕ್ತ ಯಾರಿದ್ದಾರೆ? ಹಾಗಿದ್ದರೆ ಆಗಿನ ಸರ್ಕಾರ ಹಿಂದು ವಿರೋಧಿಯೇ? ಬಿಜೆಪಿ ಬಿಟ್ಟು ಬಿಡಿ, ಅದರ ಪರಿವಾರದ ನಾಯಕರು ಕೂಡಾ ಹಿಂದೂ ಯಡಿಯೂರಪ್ಪನವರನ್ನು ಬಂಧಿಸಿದ ಸರ್ಕಾರ ಹಿಂದು ವಿರೋಧಿ ಎಂದು ಕೂಗಾಡಲಿಲ್ಲವಲ್ಲ? ಈಗ ಯಾಕೆ ಈ ಕೂಗಾಟ? ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ. ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬಿಡಿಗಾಸಿನ ಕಿಮ್ಮತ್ತು ಕೊಟ್ಟಿಲ್ಲ. ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ದ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವಿರ್ಯವಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಶ್ರೀಕಾಂತ್ ಪೂಜಾರಿ ವಿರುದ್ಧ 16 ಪ್ರಕರಣಗಳಿವೆ, ಎಫ್ಐಅರ್ ನಲ್ಲಿ ಕರಸೇವಕ ಅಂತಿಲ್ಲ: ಜಿ ಪರಮೇಶ್ವರ, ಗೃಹ ಸಚಿವ

ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಜನಾನುರಾಗಿಯಾಗುತ್ತಿದೆ. ಈ ಹತಾಶೆಯಿಂದ ಹೊರಬರಲು ಒಬ್ಬ ಕ್ರಿಮಿನಲ್ ಆರೋಪಿಯನ್ನು ಮುಂದಿಟ್ಟು ಬಿಜೆಪಿ ನಾಯಕರು ಕೂಗಾಡುತ್ತಿದ್ದಾರೆ. ಒಬ್ಬ ಕ್ರಿಮಿನಲ್ ಆರೋಪಿಯನ್ನು ಸಮರ್ಥಿಸುವಂತಹ ದುಸ್ಥಿತಿ ಒಂದು ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಹುಬ್ಬಳ್ಳಿಯ ಆರೋಪಿಯನ್ನು ಸಮರ್ಥಿಸಿಕೊಂಡು ಹೋರಾಟಕ್ಕೆ ಇಳಿದಿರುವ ಬಿಜೆಪಿ ನಾಯಕರಲ್ಲಿ ಯಾರಾದರೂ ಸ್ವಲ್ಪ ಬುದ್ದಿಗಿದ್ದಿ ಹೊಂದಿದವರಿದ್ದರೆ ದಯವಿಟ್ಟು ಆ ವ್ಯಕ್ತಿಯ ಮೇಲಿನ ಆರೋಪಗಳ ಪಟ್ಟಿಯನ್ನು ತರಿಸಿ ಓದಿ, ಆ ಮೇಲೆ ಹೋರಾಟಕ್ಕೆ ಇಳಿಯಿರಿ. ಜನಸಂಖ್ಯೆಯಲ್ಲಿ ಹಿಂದೂಗಳೇ ಬಹುಸಂಖ್ಯೆಯಲ್ಲಿರುವುದರಿಂದ ಜೈಲುಗಳಲ್ಲಿರುವ ಕೈದಿಗಳಲ್ಲಿಯೂ ಹಿಂದೂ ಧರ್ಮಿಯರೇ ಬಹುಸಂಖ್ಯೆಯಲ್ಲಿದ್ದಾರೆ. ಅವರೆಲ್ಲ ಹಿಂದೂ ಧರ್ಮಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಬಿಜೆಪಿ ಅವರ ಪರವಾಗಿ ಹೋರಾಟ ನಡೆಸುತ್ತಾ? ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಅಪರಾಧ ಮತ್ತು ಅಪರಾಧಿಗಳಿಗೆ ಜಾತಿ-ಧರ್ಮದ ಬಣ್ಣಹಚ್ಚುವ ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ. ವ್ಯಕ್ತಿಯೊಬ್ಬ ಎಂತಹ ಘನಘೋರ ಅಪರಾಧಗಳನ್ನು ಬೇಕಾದರೂ ಎಸಗಲಿ. ಆತ ಕೇಸರಿ ಶಾಲನ್ನು ತಲೆಗೆ ಸುತ್ತಿಕೊಂಡು ನಾನೊಬ್ಬ ಹಿಂದೂ ಎಂದು ಕೂಗಿದರೆ ಬಿಜೆಪಿ ನಾಯಕರು ಆತನ ರಕ್ಷಣೆಗೆ ಧಾವಿಸುತ್ತಾರೆ. ಈ ಮೂಲಕ ಕೇಸರಿ ಶಾಲು ಮಾತ್ರವಲ್ಲ ಹಿಂದೂ ಧರ್ಮಕ್ಕೂ ಬಿಜೆಪಿ ನಾಯಕರು ಅವಮಾನ ಮಾಡುತ್ತಿದ್ದಾರೆ.

ದೇವರು-ಧರ್ಮದ ಹೆಸರಲ್ಲಿ ಕ್ಷುಲ್ಲಕ ರಾಜಕೀಯ ಬೇಡ

ಇದು ಧರ್ಮದ್ರೋಹದ ನಡೆ, ಕಾನೂನನ್ನು ಅದರ ಪಾಡಿಗೆ ಕೆಲಸ ಮಾಡಲು ಬಿಟ್ಟು ಬಿಡಿ. ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲ್ಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ರೀತಿಯಲ್ಲಿ ನಾವು ರಾಜ್ಯವನ್ನು ಬಿಜೆಪಿ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಹೇಳಿಕೆಗಳನ್ನು ನೀಡುವುದಿಲ್ಲ. ಆದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದ ಸ್ಥಾನದಲ್ಲಿ ಕೂರಿಸಬೇಕೆಂಬುದು ನನ್ನ ಗುರಿ. ರಾಜ್ಯ ಬಿಜೆಪಿ ನಾಯಕರ ಇತ್ತೀಚಿನ ಅವಾಂತರಗಳನ್ನೆಲ್ಲ ನೋಡಿದರೆ ಈ ಗುರಿ ಸಾಧನೆಗೆ ಅವರೇ ಸಹಕಾರ ನೀಡುತ್ತಿರುವಂತೆ ಕಾಣುತ್ತಿದೆ ಎಂದು ಸಿದ್ದರಾಮಯ್ಯನವರು ಮಾಧ್ಯಮ ಪ್ರಕಟಣೆ ಮೂಲಕ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್