ಬೆಂಗಳೂರು: ಕೆಎಂಎಫ್(KMF) ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ? ಕೇಳಿ ಬಂದಿದೆ. ಟೆಂಡರ್ ಪ್ರಕ್ರಿಯೆ ವೇಳೆ ನಿಯಮ ಉಲ್ಲಂಘನೆ ಹಿನ್ನೆಲೆ ಕೆಎಂಎಫ್ ಅಧ್ಯಕ್ಷರು ಸೇರಿ ಮೂವರಿಗೆ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ. ಕೆಎಂಎಫ್ ಅಧ್ಯಕ್ಷರು, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಿಗೆ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ.
ಇನ್ನು ಟೆಂಡರ್ ಅಕ್ರಮದ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾಗೂ ದೂರು ಸಲ್ಲಿಸಲಾಗಿದೆ. ನಕಲಿ ತುಪ್ಪ ಮಾರಾಟ ತಡೆಗೆ ಕ್ರಮ ವಹಿಸಲು ತಂತ್ರಜ್ಞಾನ ಬಳಕೆಗೆ ಟೆಂಡರ್ ಕರೆಯಲಾಗಿತ್ತು. ಈ ಸಂಬಂಧ ನೈಲಾನ್ ಬ್ಯಾರಿಯರ್ ಫಿಲ್ಮ್ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ವೇಳೆ ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪ ಕೇಳಿ ಬಂದಿದೆ. ಒಂದೇ ಕಂಪನಿಯ 2 ಸಂಸ್ಥೆಗಳು ಟೆಂಡರ್ನಲ್ಲಿ ಭಾಗಿವಹಿಸಿ ಕಾಯ್ದೆ ಉಲ್ಲಂಘನೆ ಮಾಡಿದ್ದಾರೆ ಎನ್ನಲಾಗಿದೆ. ನಿಗದಿತ ಕಂಪನಿಗೆ ನೆರವಾಗುವಂತೆ ನಿಯಮ ಬದಲಾವಣೆ ಆರೋಪ ಕೇಳಿ ಬಂದಿದ್ದು ಶೇ.70ರಷ್ಟು ಹೆಚ್ಚು ವೆಚ್ಚ ಮಾಡಿ ತಂತ್ರಜ್ಞಾನ ಅಳವಡಿಕೆ ಮಾಡಿದ್ದಾರೆ. ಈ ಸಂಬಂಧ ಕೇಂದ್ರ ಸಹಕಾರ ಸಚಿವ ಅಮಿತ್ ಶಾಗೆ ದೂರು ಸಲ್ಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಮೇ 1ರಿಂದಲೇ ಹಾಲಿನ ದರ ಹೆಚ್ಚಳ ಸಾಧ್ಯತೆ: ಲೀಟರ್‌ಗೆ 3 ರೂಪಾಯಿ ಹೆಚ್ಚಿಸಲು ಕೆಎಂಎಫ್ ಮನವಿ
ಬೆಂಗಳೂರು: ಕರ್ನಾಟಕ ಹಾಲು ಮಾರಾಟ ಮಹಾಮಂಡಲವು (Karnataka Milk Federation – KMF) ಹಾಲಿನ ದರ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ. ಪ್ರತಿ ಲೀಟರ್ ಹಾಲಿಗೆ ₹ 3 ಹೆಚ್ಚಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಸಲ್ಲಿಸಿದ್ದಾರೆ. ಮೇ 1ರಿಂದಲೇ ಪರಿಷ್ಕೃತ ದರ ಜಾರಿ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಅಮೂಲ್ ಸೇರಿದಂತೆ ವಿವಿಧ ಖಾಸಗಿ ಸಂಸ್ಥೆಗಳು ಈಗಾಗಲೇ ಹಾಲಿನ ದರ ಹೆಚ್ಚಿಸಿವೆ. ನಂದಿನಿ ಹಾಲಿನ ದರಕ್ಕೆ ಹೋಲಿಸಿದರೆ ಇತರ ಸಂಸ್ಥೆಗಳ ಹಾಲಿನ ದರವು ಲೀಟರ್‌ಗೆ 8ರಿಂದ 10 ರೂಪಾಯಿ ಹೆಚ್ಚಿದೆ. ಹಾಗಾಗಿ ಹಾಲಿನ ದರವನ್ನು ಲೀಟರ್‌ಗೆ ಕನಿಷ್ಠ ₹ 3 ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ಕರ್ನಾಟಕದ 14 ಹಾಲು ಒಕ್ಕೂಟಗಳು ಪ್ರತಿ ಲೀಟರ್‌ಗೆ ₹ 5 ಹೆಚ್ಚಿಸಬೇಕೆಂದು ಮನವಿ ಮಾಡಿದ್ದವು. ಒಮ್ಮೆಲೆ ಇಷ್ಟೊಂದು ಹೆಚ್ಚಿಸಿದರೆ ಗ್ರಾಹಕರಿಗೆ ಹೊರೆಯಾಗಬಹುದು ಎನ್ನುವ ಕಾರಣಕ್ಕೆ ಮೂರು ರೂಪಾಯಿ ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದ್ದಾರೆ.