ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ: ಇನ್ನೂ ಅಧಿಕೃತವಾಗಿ ಪ್ರಕಟವಾಗದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ

TV9 Digital Desk

| Edited By: ಗಂಗಾಧರ​ ಬ. ಸಾಬೋಜಿ

Updated on: May 24, 2022 | 7:12 AM

ಬ್ರಾಹ್ಮಣ, ಪಂಚಮಸಾಲಿ ಲಿಂಗಾಯತ, ಹಿಂದುಳಿದ ವರ್ಗ ಮತ್ತು ಮಹಿಳಾ ಕೋಟಾದಡಿ ಅವಕಾಶ ನೀಡುವ ಸಾಧ್ಯತೆಯಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಒಂದು ಸ್ಥಾನ ದೊರೆಯಲಿದೆ.

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ: ಇನ್ನೂ ಅಧಿಕೃತವಾಗಿ ಪ್ರಕಟವಾಗದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಪ್ರಾತಿನಿಧಿಕ ಚಿತ್ರ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಈಗಾಗಲೇ ಕೆಲವು ಸಂಭಾವ್ಯ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ವರಿಷ್ಠರಿಂದ ಆಂತರಿಕ ಸೂಚನೆ ನೀಡಲಾಗಿತ್ತು. ವರಿಷ್ಠರ ಆಂತರಿಕ ಸೂಚನೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಸಂಭಾವ್ಯ ಅಭ್ಯರ್ಥಿಗಳು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಜಾತಿವಾರು ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಮುಂದಾಗಿದೆ. ಬ್ರಾಹ್ಮಣ, ಪಂಚಮಸಾಲಿ ಲಿಂಗಾಯತ, ಹಿಂದುಳಿದ ವರ್ಗ ಮತ್ತು ಮಹಿಳಾ ಕೋಟಾದಡಿ ಅವಕಾಶ ನೀಡುವ ಸಾಧ್ಯತೆಯಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಒಂದು ಸ್ಥಾನ ದೊರೆಯಲಿದೆ. ಬಿಜೆಪಿ ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ರಾಜ್ಯ ಖಜಾಂಚಿ ಸುಬ್ಬ ನರಸಿಂಹ, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್ ಮತ್ತು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್​ ಇಷ್ಟು ಜನರಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ ನೋಡಬೇಕಿದೆ. ಕೊನೆಯ ಕ್ಷಣದಲ್ಲಿ ಹೈಕಮಾಂಡ್​ನಿಂದ ಅಚ್ಚರಿಯ ಅಭ್ಯರ್ಥಿಗಳು ಪ್ರಕಟಗೊಳ್ಳುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಲಾರಿ, ಖಾಸಗಿ ಬಸ್ ಮುಖಾಮುಖಿ: 7 ಮಂದಿ ಸಾವು

ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ನಿನ್ನೆ ಮಧ್ಯಾಹ್ನ ಅಥವಾ ಸಂಜೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ನಿರೀಕ್ಷೆಯಿತ್ತು. ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿದ್ದು, ನಾಲ್ಕು ಸ್ಥಾನಗಳಿಗೆ ಹೈಕಮಾಂಡ್ ಅಭ್ಯರ್ಥಿಗಳ ಹೆಸರು ಪ್ರಕಟಿಸಬೇಕಿದೆ. ಬಿ.ವೈ. ವಿಜಯೇಂದ್ರ, ಎಂ. ರಾಜೇಂದ್ರ, ಲಕ್ಷ್ಮಣ ಸವದಿ, ನಿರ್ಮಲ್ ಕುಮಾರ್ ಸುರಾನಾ, ಗೀತಾ ವಿವೇಕಾನಂದ, ಕೇಶವಪ್ರಸಾದ್, ಛಲವಾದಿ ನಾರಾಯಣಸ್ವಾಮಿ, ಸಿದ್ಧರಾಜು, ಮಂಜಳಾ ಸೇರಿದಂತೆ ಹಲವು ಹೆಸರು ರೇಸ್​ನಲ್ಲಿದ್ದಾವೆ.

ಬಿಜೆಪಿ ಹೈಕಮಾಂಡ್​ಗೆ ತಲೆನೋವಾದ ಅದೊಂದು ಅಭ್ಯರ್ಥಿ ಆಯ್ಕೆ:

ಬಿಜೆಪಿ ಹೈಕಮಾಂಡ್​ಗೆ ಪರಿಷತ್​​ ಅಭ್ಯರ್ಥಿ ಆಯ್ಕೆ ತಲೆನೋವು ಉಂಟು ಮಾಡಿದ್ದು, ಅದೊಂದು ಅಭ್ಯರ್ಥಿ ಬಗ್ಗೆ ಬಿಜೆಪಿ ಹೈಕಮಾಂಡ್​​​​ನಲ್ಲಿ ಗೊಂದಲ ಉಂಟಾಗಿದೆ. ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಸ್ಥಾನ ನೀಡಬೇಕೆ? ಬೇಡವೇ ಎನ್ನುವ ಗೊಂದಲು ಉಂಟಾಗಿದ್ದು, ಬಿ.ವೈ.ವಿಜಯೇಂದ್ರಗೆ ಸ್ಥಾನ ನೀಡಿದರೆ ಹೋಗುವ ಸಂದೇಶ ಏನು? ಬಿ.ವೈ.ವಿಜಯೇಂದ್ರಗೆ ಸ್ಥಾನ ನೀಡದಿದ್ದರೆ ಪರಿಣಾಮ ಏನಾಗಬಹುದು? ವಿಜಯೇಂದ್ರಗೆ ಸ್ಥಾನ ನೀಡದಿದ್ರೆ ಬಿ.ಎಸ್​. ಯುಡಿಯೂರಪ್ಪ ಮುನಿಸಿಕೊಳ್ಳದೆ ಇರುವರೇ? ಬಿಜೆಪಿಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಿಸಿತುಪ್ಪವಾಗಿದ್ದಾರೆ. ಸದ್ಯ ರಾಜ್ಯ ಬಿಜೆಪಿ ನಾಯಕರು ಹೈಕಮಾಂಡ್ ಮೇಲೆ ಬಾರ ಹಾಕಿ ಕುಳಿತಿದ್ದಾರೆ. ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಕೂಡ ಹೇಳಿದ್ದಾರೆ.

ರಾಜ್ಯದ ಇನ್ನುಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada