AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI, PNB ಬ್ಯಾಂಕ್‌ ಖಾತೆಗಳನ್ನ ಮುಚ್ಚಲು ರಾಜ್ಯ ಸರ್ಕಾರ ನಿರ್ಧಾರ ಅನುಮಾನಾಸ್ಪದವಾಗಿದೆ- ಲಹರ್ ಸಿಂಗ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್​​ನಲ್ಲಿರುವ ತನ್ನ ಖಾತೆಗಳನ್ನು ಮುಚ್ಚುವ ರಾಜ್ಯ ಕಾಂಗ್ರೆಸ್ ಸರ್ಕಾರದ ಸ್ವೇಚ್ಛಾನುಸಾರ ನಿರ್ಧಾರ ಅನುಮಾನಾಸ್ಪದವಾಗಿದೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

SBI, PNB ಬ್ಯಾಂಕ್‌ ಖಾತೆಗಳನ್ನ ಮುಚ್ಚಲು ರಾಜ್ಯ ಸರ್ಕಾರ ನಿರ್ಧಾರ ಅನುಮಾನಾಸ್ಪದವಾಗಿದೆ- ಲಹರ್ ಸಿಂಗ್
ಲಹರ್ ಸಿಂಗ್ ಸಿರೋಯಾ
ಕಿರಣ್​ ಹನಿಯಡ್ಕ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Aug 16, 2024 | 3:25 PM

Share

ಬೆಂಗಳೂರು, ಆ.16: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿನ ಖಾತೆಗಳನ್ನು ಮುಚ್ಚಲು ರಾಜ್ಯ ಕಾಂಗ್ರೆಸ್​(Congress) ಸರ್ಕಾರ ನಿರ್ಧಾರ ಮಾಡಿದೆ. ಈ ಹಿನ್ನೆಲೆ ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ (Lahar Singh Siroya) ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ನಿರ್ಧಾರ ನಿರಂಕುಶ ಮನಸ್ಥಿತಿ ಮತ್ತು ಅನುಮಾನಾಸ್ಪದವಾಗಿದೆ. ಈ ಕುರಿತು ಕೇಂದ್ರ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಗಮನ ಹರಿಸಬೇಕು ಎಂದಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ‘ಎಕ್ಸ್​’ ಖಾತೆಯಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು. ‘ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್​​ಗಳಲ್ಲಿ ಖಾತೆಗಳನ್ನು ಮುಚ್ಚುವ ಕರ್ನಾಟಕ ಸರ್ಕಾರದ ನಿರ್ಧಾರ ಅನುಮಾನಾಸ್ಪದವಾಗಿದೆ. ದೇಶದ ಆರ್ಥಿಕ ವ್ಯವಸ್ಥೆಯ ಬಗ್ಗೆ ಅನುಮಾನ ಹುಟ್ಟುವಂತೆ ಹೇಳಿಕೆ ನೀಡುತ್ತಿರುವ ರಾಹುಲ್ ಗಾಂಧಿಯವರ ಇತ್ತೀಚಿನ ಹೇಳಿಕೆಗೂ ಕರ್ನಾಟಕ ಸರ್ಕಾರದ ಈ ಕ್ರಮಕ್ಕೂ ಸಂಬಂಧ ಇದೆ ಎಂಬ ಅನುಮಾನ ಈಗ ಉಂಟಾಗಿದೆ. ಹೀಗಾಗಿ ಇತ್ತ ಗಮನಹರಿಸಿ ಎಂದು ನಾನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಭಿಕ್ಷೆಯಿಂದ ವಿಜಯೇಂದ್ರಗೆ ವಿಧಾನಸಭೆ ಮೆಟ್ಟಿಲು ಹತ್ತೋದು ಸಾಧ್ಯವಾಗಿದ್ದು: ಬಸನಗೌಡ ಯತ್ನಾಳ್

ಲಹರ್ ಸಿಂಗ್ ಸಿರೋಯಾ ಟ್ವೀಟ್​

ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳ ವಿರುದ್ಧ ರಾಜ್ಯ ಸರ್ಕಾರ ಹೀಗೆ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಬಹುದೇ, ಎಲ್ಲಾ ಬ್ಯಾಂಕುಗಳು ಆರ್​ಬಿಐ ನಿಯಮಗಳು ಮತ್ತು ನಿಬಂಧನೆಗಳಿಂದ ನಿಯಂತ್ರಿಸಲ್ಪಡುತ್ತದೆ. ರಾಜ್ಯ ಸರ್ಕಾರಕ್ಕೆ ಬ್ಯಾಂಕುಗಳೊಂದಿಗೆ ಸಮಸ್ಯೆಗಳಿದ್ದರೆ ಆರ್‌ಬಿಐ ಬಳಿ ಚರ್ಚಿಸಬಹುದಿತ್ತು. ಕೆಲವು ರಾಷ್ಟ್ರೀಕೃತ ಬ್ಯಾಂಕ್‌ಗಳೊಂದಿಗೆ ಮಾತ್ರ ವ್ಯವಹಾರ ಮಾಡಬಹುದು ಮತ್ತು ಕೆಲವು ಬ್ಯಾಂಕ್‌ಗಳ ಜೊತೆ ವ್ಯವಹಾರ ಮಾಡಬಾರದು ಎಂದಿದೆಯೇ?. ರಾಜ್ಯ ಸರ್ಕಾರ ಹೇಳುತ್ತಿರುವ ಹಣ ದುರ್ಬಳಕೆಯ ಸ್ವರೂಪವೇನು?, ಇದರ ತನಿಖೆಯಾಗಿದೆಯೇ. ಕರ್ನಾಟಕ ಸರ್ಕಾರದಲ್ಲಿ ನಿಜವಾಗಿಯೂ ಏನು ನಡೆಯುತ್ತಿದೆ. ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಬ್ಯಾಂಕಿಂಗ್ ವ್ಯವಸ್ಥೆಯ ಬಗ್ಗೆ ಅನುಮಾನ ಮೂಡಿಸಲು ಪ್ರಯತ್ನಿಸುತ್ತಿದೆಯೇ ಎಂದು ಅಚ್ಚರಿಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್‌ ಅವರು ಈ ಕುರಿತು ಗಮನ ಹರಿಸಲಿ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Fri, 16 August 24

Follow Us
ಕಿರಣ್​ ಹನಿಯಡ್ಕ
ಕಿರಣ್​ ಹನಿಯಡ್ಕ

TV9 ಕನ್ನಡದಲ್ಲಿ ಹಿರಿಯ ರಾಜಕೀಯ ವರದಿಗಾರ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ. 17 ವರ್ಷಗಳಿಂದ ಮಾಧ್ಯಮ ವೃತ್ತಿ. ಮುದ್ರಣ ಮಾಧ್ಯಮದಲ್ಲಿ ಸಬ್ ಎಡಿಟರ್, ವಿದ್ಯುನ್ಮಾನ ಮಾಧ್ಯಮದಲ್ಲಿ ನ್ಯೂಸ್ ಡೆಸ್ಕ್ ಮತ್ತು ರಾಜಕೀಯ ವರದಿಗಾರಿಕೆಯಲ್ಲಿ ಅನುಭವ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್