Leopard: ಬೆಂಗಳೂರಿನಲ್ಲಿ ಮತ್ತೆ ಶುರುವಾದ ಚಿರತೆ ಕಾಟ: ಹಸುವಿನ ಮೇಲೆ ದಾಳಿ, ಆತಂಕದಲ್ಲಿ ಜನ

ಬೆಂಗಳೂರಿನಲ್ಲಿ ಮತ್ತೆ ಚಿರತೆ ಕಾಟ ಶುರುವಾಗಿದ್ದು, ಹಸು ಮೇಲೆ ದಾಳಿ ಮಾಡಿ ಕೊಂದು ಹಾಕಿರುವಂತಹ ಘಟನೆ ನಗರದಲ್ಲಿ ನಡೆದಿದೆ.

Leopard: ಬೆಂಗಳೂರಿನಲ್ಲಿ ಮತ್ತೆ ಶುರುವಾದ ಚಿರತೆ ಕಾಟ: ಹಸುವಿನ ಮೇಲೆ ದಾಳಿ, ಆತಂಕದಲ್ಲಿ ಜನ
ಪ್ರಾತಿನಿಧಿಕ ಚಿತ್ರImage Credit source: google.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 30, 2022 | 5:14 PM

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಚಿರತೆ (Leopard attack) ಕಾಟ ಶುರುವಾಗಿದೆ. ಈ ಹಿಂದೆ ನೈಸ್ ರಸ್ತೆಯ ತುರಹಳ್ಳಿ ಅರಣ್ಯ ಪ್ರದೇಶದ ಸುತ್ತಮುತ್ತ ಚಿರತೆ ಕಾಣಿಸಿಕೊಂಡಿತ್ತು. ಮೊದಲ ಬಾರಿಗೆ ಚಿರತೆ ಕಾಣಿಸಿಕೊಂಡಾಗ ಜಿಂಕೆ ಬೇಟೆಯಾಡಿದ್ದು, ಈಗ ಹಸುವನ್ನ ಬೇಟೆಯಾಡಿರುವಂತಹ ಘಟನೆ ಬಿ.ಎಂ.ಕಾವಲು ಅರಣ್ಯ ಪ್ರದೇಶದ ಬಳಿಯಿರುವ ಸಿದ್ದನಪಾಳ್ಯದಲ್ಲಿ ನಡೆದಿದೆ. ನಾಗಣ್ಣ ಎನ್ನುವವರಿಗೆ ಸೇರಿದ ಹಸುವನ್ನು ನಿನ್ನೆ ರಾತ್ರಿ ಮನೆ ಬಳಿ ಕಟ್ಟಿಹಾಕಿದ್ದಾಗ ಕೊಂದಿದೆ. ಈ ಹಿಂದೆ ಸಂಜೆ ವೇಳೆ ಹಸುವಿನ ಮೇಲೆ ದಾಳಿಗೆ ಚಿರತೆ ಯತ್ನಿಸಿತ್ತು. ಆದರೆ ಚಿರತೆ ದಾಳಿ ನಡೆಸಿದಾಗ ಮನೆಯವರು ಪಟಾಕಿ ಸಿಡಿಸಿ ಓಡಿಸಿದ್ದರು. ಕಳೆದ ರಾತ್ರಿ ಹಸು ಕೊಂದಿರುವ ಹಿನ್ನೆಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಶುರುವಾಗಿದೆ.

ಸಿಲಿಕಾನ್​ ಸಿಟಿ ಜನರಿಗೆ ಚಿರತೆ ಕಾಟ

ಬೆಂಗಳೂರು ನಗರದ ಜನರಿಗೆ ಇಷ್ಟು ದಿನ ರಸ್ತೆ ಗುಂಡಿಗಳ ಚಿಂತೆಯಾಗಿತ್ತು. ಆದರೆ ಈಗ ಸಿಲಿಕಾನ್​ ಸಿಟಿ ಜನರಿಗೆ ಚಿರತೆ ಕಾಟ ಶುರುವಾದಂತ್ತಾಗಿದೆ. ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವಂತಹ ಘಟನೆ ಈ ಮುಂಚೆ ನಡೆದಿತ್ತು. ಕೆಂಗೇರಿ ಸುತ್ತಮುತ್ತಲಿನ ಜನರು ಚಿರತೆ ದಾಳಿ ಭೀತಿಯಲ್ಲಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಿಂದ ಚಿರತೆಗಳು ಬಂದಿದ್ದವು. ಮುಖ್ಯರಸ್ತೆಗೆ ನುಗ್ಗಿ ಜಿಂಕೆ ಕೊಂದು ಚಿರತೆ ತಿಂದುಹೋಗಿರುವುದರಿಂದ ಆ ಭಾಗದಲ್ಲಿ ಜನರಲ್ಲಿ ಆತಂಕ ಉಂಟಾಗಿತ್ತು. 4 ಚಿರತೆಗಳು ಬಂದಿವೆ ಎಂದು ಸ್ಥಳೀಯರು ಹೇಳಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಅಲರ್ಟ್

ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

ಇನ್ನು ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ತಲಾ 15 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ನಗರದಲ್ಲಿ ಈ ಬಗ್ಗೆ ಘೋಷಣೆ ಮಾಡಿದ ಅವರು, ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಭೀತಿ ಹುಟ್ಟಿಸಿದ ಚಿರತೆ ಸೆರೆಗೆ ಸೂಚನೆ ನೀಡಿದ್ದರು. ಚಿರತೆಗಳನ್ನು ಸೆರೆಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಲಾಗಿದೆ. ಇದಕ್ಕಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಜನರ ನಿದ್ದೆಗೆಡಿಸಿದ ಚಿರತೆ ದಾಳಿ; ಶಾಲಾ ಕಾಲೇಜುಗಳಿಗಿಲ್ಲ ರಜೆ, ಇಂದು ಸಹ‌ ಮುಂದುವರೆಯಲಿರುವ ಚೀತಾ ಕೂಂಬಿಂಗ್

ಟಿ.ನರಸೀಪುರದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಣ್ತಪ್ಪಿಸಿ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿದ ಚಿರತೆ

ಮೈಸೂರು: ಟಿ.ನರಸೀಪುರ ತಾಲೂಕಿನ ಜನರ ನಿದ್ದೆಗೆಡಿಸಿರುವ ಚಿರತೆ ಅರಣ್ಯ ಇಲಾಖೆ ಸಿಬ್ಬಂದಿಗಳ ಕಣ್ಣಿಗೂ ಬೀಳದೆ ತಪ್ಪಿಸಿಕೊಳ್ಳುತ್ತಿದ್ದು, ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸುತ್ತಿರುವ ತಂಡ ಹರಸಾಹಸ ಪಡುತ್ತಿದೆ. ಈ ನಡುವೆ ಸಿಬ್ಬಂದಿ ಕಣ್ಣು ತಪ್ಪಿಸಿಕೊಂಡು ಬಂದ ಚಿರತೆ ಕುರಿ, ಮೇಕೆ ಮೇಲೆ ದಾಳಿ ನಡೆಸಿದ ಘಟನೆ ಟಿ.ನರಸೀಪುರ ತಾಲೂಕಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡುವೆಯೂ ಚಿರತೆ ದಾಳಿ ನಡೆದಿರುವುದರಿಂದ ಜನರಲ್ಲಿನ ಭೀತಿ ಮತ್ತಷ್ಟು ಹೆಚ್ಚಾಗಿದೆ. ಈ ತಾಲೂಕಿನಲ್ಲಿ ಓರ್ವ ಯುವಕನನ್ನು ಬಲಿ ಪಡೆದಿದ್ದ ಚಿರತೆ ದಾಳಿಗೆ ಮೇಘನಾ ಸಾವನ್ನಪ್ಪಿದ್ದಳು. ಒಂದೇ ತಿಂಗಳಲ್ಲಿ ಚಿರತೆಯು ಎರಡು ನರಬಲಿ ಪಡೆದ ಹಿನ್ನೆಲೆ ಜನರಲ್ಲಿ ಆತಂಕ ಮನೆಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:13 pm, Fri, 30 December 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ