ಅರಿವಳಿಕೆ ನೀಡಲು ಹೋದ ವೈದ್ಯ, ಶಾರ್ಪ್​ ಶೂಟರ್​ ಮೇಲೆ ದಾಳಿ ಮಾಡಿ ಪರಾರಿಯಾದ ಚಿರತೆ

ನಿನ್ನೆ ತಡರಾತ್ರಿ ಬೆಂಗಳೂರಿನ ಬೊಮ್ಮನಹಳ್ಳಿ ಭಾಗದ ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಇಂದು ಕಾರ್ಯಚರಣೆ ನಡೆಸಿದ್ದು, ಈ ವೇಳೆ ಅರವಳಿಕೆ ಚುಚ್ಚುಮದ್ದು ನೀಡಲು ಹೋಗಿದ್ದ ವೈದ್ಯ ಸೇರಿದಂತೆ ಇತರೆ ಇಬ್ಬರು ಸಿಬ್ಬಂದಿ ಮೇಲೆ ದಾಳಿ ಮಾಡಿ ಎಸ್ಪೇಪ್ ಆಗಿದೆ.

ಅರಿವಳಿಕೆ ನೀಡಲು ಹೋದ ವೈದ್ಯ, ಶಾರ್ಪ್​ ಶೂಟರ್​ ಮೇಲೆ ದಾಳಿ ಮಾಡಿ ಪರಾರಿಯಾದ ಚಿರತೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Nov 01, 2023 | 11:27 AM

ಬೆಂಗಳೂರು, (ನವೆಂಬರ್ 01): ಮೊನ್ನೇ ಅಷ್ಟೇ ಬೊಮ್ಮನಹಳ್ಳಿ ಭಾಗದ ಕೂಡ್ಲು ಸಮೀಪ ಕಾಣಿಸಿಕೊಂಡಿದ್ದ ಚಿರತೆ ಮತ್ತೆ ಪ್ರತ್ಯಕ್ಷವಾಗಿದೆ. ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಚಿರತೆ ಪತ್ತೆಯಾಗಿದೆ. ಆದ್ರೆ, ಅರಣ್ಯಾಧಿಕಾರಿಗಳ ಕೈಗೆ ಸಿಗದೇ ಅತ್ತ ಬೋನಿಗೆ ಬೀಳದೇ ಆಟವಾಡಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಕೃಷ್ಣಾರೆಡ್ಡಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಚರಣೆಗಳಿದ ಅರಣ್ಯಾಧಿಕಾರಿಗಳು, ಅರವಳಿಕೆ ಮದ್ದನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ. ಆದ್ರೆ, ಅರವಳಿಕೆ ಚುಚ್ಚುಮದ್ದು ನಿಡುವ ವೇಳೆ ವೈದ್ಯ ಕಿರಣ್ ಮೇಲೆ ದಾಳಿ ಮಾಡಿ ಪರಾರಿಯಾಗಿದೆ.

ಅರವಳಿಕೆ ಚುಚ್ಚುಮದ್ದು ನೀಡಲು ಬಂದಿದ್ದ ವೈದ್ಯ ಕಿರಣ್ ಮೇಲೆ ಚಿರತೆ ದಾಳಿ ಕುತ್ತಿಗೆಗೆ ಪರಚಿದೆ. ಕೂಡಲೇ ಅಂಬ್ಯುಲೆನ್ಸ್​ ಮೂಲಕ ವೈದ್ಯ ಕಿರಣ್ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು  ಇದೇ ವೇಳೆ ಚಿರತೆ ಶಾರ್ಪ್​ ಶೂಟರ್ ಮೇಲೂ ದಾಳಿ ಮಾಡಿದೆ. ಲೆಪರ್ಡ್​ ಟಾಸ್ಕ್​ಫೋರ್ಸ್ ​ಶಾರ್ಪ್​ ಶೂಟರ್​ ಧನ್​ರಾಜ್ ಎನ್ನುವರಿಗೆ ಕಾಲು ಮತ್ತು ಭುಜಕ್ಕೆ ಗಾಯವಾಗಿದೆ. ಹಾಗೇ ಕಾರ್ಯಚರಣೆಯಲ್ಲಿರುವ ಬಿಬಿಎಂಪಿ ಸಿಬ್ಬಂದಿ ಮಹೇಶ್ ಮೇಲೂ ದಾಳಿ ಮಾಡಿದ್ದು, ಅವರ ಕಾಲಿಗೆ ಗಾಯವಾಗಿದೆ. ಈ ಹಿನ್ನೆಲೆಯಲ್ಲಿ ಮೂವರು ಚಿಕಿತ್ಸೆಗೆ ತೆರಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮತ್ತೆ ಕಾಣಿಸಿಕೊಂಡ ಚಿರತೆ, ದೊಣ್ಣೆ ಹಿಡಿದು ಓಡಾಡುತ್ತಿರುವ ಜನ

ಇನ್ನು ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಗಿದೆ ಎಂದು ತಿಳಿದುಬಂದಿದೆ. ಆದ್ರೆ, ಆ ಅರವಳಿಕೆ ನೀಡಿದ 15 ನಿಮಿಷ ಮಾತ್ರ ಪವರ್​ ಇರುತ್ತೆ. ಇಘ ಅರವಳಿಕೆ ಮದ್ದು ನೀಡಿ 20 ನಿಮಿಷ ಕಳೆದಿದೆ. ಹೀಗಾಗಿ ಚಿರತೆ ಮತ್ತೆ ಆ್ಯಕ್ಟಿವ್​ ಆಗಿರುವ ಸಾಧ್ಯತೆ ಇದೆ. ಇದರಿಂದ ಅರಣ್ಯ ಸಿಬ್ಬಂದಿ ಅಲರ್ಟ್​ ಆಗಿದ್ದು, ಚಿರತೆ ತುಂಬಾ ಆ್ಯಕ್ಟಿವ್ ಆಗಿರುವುದರಿಂದ ಇದೀಗ ಹೈ ಡೋಸ್​ ಅರಿವಳಿಕೆ ಮದ್ದು ನೀಡಿ ಸೆರೆಯಲು ಅರಣ್ಯ ಸಿಬ್ಬಂದಿ ಸಿದ್ದತೆ ನಡೆಸಿದೆ.

ನಿನ್ನೆ ತಡರಾತ್ರಿ ಕೃಷ್ಣಾರೆಡ್ಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ರಾತ್ರಿ 11 ಗಂಟೆ ವೇಳೆ ಕಾಂಪೌಂಡ್ ಜಿಗಿದು ಚಿರತೆ ಓಡಿದೆ. ಪಾಳು ಬಿದ್ದಿರುವ ಬಿಲ್ಡಿಂಗ್ ಒಳಗೆ ನುಗ್ಗಿರುವ ಶಂಕೆ ಮೇಲೆ ತಡರಾತ್ರಿವರೆಗೂ ಹುಡುಕಾಟಲಾಯ್ತು ಆದ್ರೆ ಅಲ್ಲಿಯೂ ಚಿರತೆ ಕಾಣಸಿಗಲಿಲ್ಲ. ಕೆಲ ಹೊತ್ತು ಕಾಂಪೌಂಡ್ ಮೇಲೆ ಕುಳಿತು ಮತ್ತೆ ಹಳೆ ಕಟ್ಟಡದೊಳಗೆ ನುಗ್ಗಿದೆ. ಥರ್ಮಲ್ ಡ್ರೋಣ್ ‌ನಲ್ಲಿ ಚಿರತೆಯ ಚಲನವಲನ ಸೆರೆಯಾಗಿತ್ತು. ಹುಣಸೂರು ವನ್ಯಜೀವಿ ವಿಭಾಗದಿಂದ ಆಗಮಿಸಿದ್ದ ತಂಡ ಕಾರ್ಯಾಚರಣೆ ನಡೆಸುತ್ತಿದ್ದು, ಬೆಳಗ್ಗೆ 6 ಗಂಟೆಯಿಂದ ಮತ್ತೆ ಕಾರ್ಯಾಚರಣೆ ಶುರು ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Wed, 1 November 23

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್