ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಗೊಂಗಡಿಪುರ ಗ್ರಾಮಕ್ಕೆ ನುಗ್ಗಿ ನಾಯಿ ಕೊಂದು ತಿಂದ ಚಿರತೆ, ಗ್ರಾಮಸ್ಥರಲ್ಲಿ ಆತಂಕ

ರಾಜಧಾನಿಯಲ್ಲಿ ಚಿರತೆ ಕಾಟ ಮತ್ತೆ ಮುಂದುವರೆದಂತ್ತಾಗಿದೆ. ನಗರದ ನೈಸ್ ರಸ್ತೆಯ ಕೊಡಿಗೆಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗೊಂಗಡಿಪುರ ಗ್ರಾಮದ ಬಳಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.

ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಗೊಂಗಡಿಪುರ ಗ್ರಾಮಕ್ಕೆ ನುಗ್ಗಿ ನಾಯಿ ಕೊಂದು ತಿಂದ ಚಿರತೆ, ಗ್ರಾಮಸ್ಥರಲ್ಲಿ ಆತಂಕ
ಪ್ರತ್ಯಕ್ಷವಾದ ಚಿರತೆ ಹೆಜ್ಜೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 02, 2023 | 2:58 PM

ಬೆಂಗಳೂರು: ರಾಜಧಾನಿಯಲ್ಲಿ ಚಿರತೆ (Leopard) ಕಾಟ ಮತ್ತೆ ಮುಂದುವರೆದಂತ್ತಾಗಿದೆ. ನಗರದ ನೈಸ್ ರಸ್ತೆಯ ಕೊಡಿಗೆಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗೊಂಗಡಿಪುರ ಗ್ರಾಮದ ಬಳಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. 2 ತಿಂಗಳಿಂದ 2 ಮರಿ ಜತೆ ಪದೇಪದೆ ಚಿರತೆ ಕಾಣಿಸಿಕೊಳ್ಳುತ್ತಿದ್ದು, ನಿನ್ನೆ ರಾತ್ರಿ ಊರಿಗೆ ನುಗ್ಗಿ ನಾಯಿಯನ್ನು ಕೊಂದು ತಿಂದಿದೆ. ಸುಮಾರು 15 ದಿನಗಳ ಹಿಂದೆ ಗೊಂಗಡಿಪುರ ಗ್ರಾಮದಲ್ಲಿ ಚಿರತೆ ಓಡಾಡಿತ್ತು. ಚಿರತೆ ದಾಳಿ ಭೀತಿಯಿಂದ ಕಂಗಾಲಾಗಿರುವ ಗೊಂಗಡಿಪುರ ನಿವಾಸಿಗಳು ರಾತ್ರಿ 8ರ ನಂತರ ಮನೆಯಿಂದ ಹೊರಬರಲು ಹೆದರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮಂಡ್ಯದಲ್ಲಿ ಮುಂದುವರೆದ ಚಿರತೆ ದಾಳಿ

ಮಂಡ್ಯ: ಜಿಲ್ಲೆಯಲ್ಲಿ ಕೂಡ ಚಿರತೆ ದಾಳಿ ಪ್ರಕರಣ ಮತ್ತೆ ಮುಂದುವರಿದಿದೆ. ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿದ ಘಟನೆ ಮಳವಳ್ಳಿ ತಾಲೂಕಿನ ಬ್ಲಫ್ ಬಳಿ ನಡೆದಿದ್ದು, ಪ್ರೀತಿಯಿಂದ ಸಾಕಿದ ಹಸುವನ್ನು ಕಳೆದುಕೊಂಡ ಮಾಲೀಕ ಕಣ್ಣೀರು ಸುರಿಸುತ್ತಿದ್ದಾರೆ. ತಾಲೂಕಿನಲ್ಲಿ ಚಿರತೆ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದು, ಸಹಜವಾಗಿ ಜನರಲ್ಲಿನ ಆತಂಕವನ್ನು ಹೆಚ್ಚಿಸಿದೆ. ಮಳವಳ್ಳಿ ತಾಲೂಕಿನ ಬ್ಲಫ್ ಬಳಿಯ ನಂಜಪ್ಪ ಎಂಬುವವರು ಸಾಕಿದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಟಿ.ನರಸೀಪುರದಲ್ಲಿ ಚಿರತೆ ಸೆರೆಗೆ ಟಾಸ್ಕ್ ಫೋರ್ಸ್ ರಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಬೋನ್​ಗೆ ಬಿದ್ದ 2 ವರ್ಷದ ಗಂಡು ಚಿರತೆ

ಮೈಸೂರು: ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆ ಇದೀಗ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ರಾಮತುಂಗಾ ಗ್ರಾಮದಲ್ಲಿ ಇಟ್ಟಿದ್ದ ಬೋನಿಗೆ ಬಿದ್ದಿದೆ. ರೈತ ನಾಗೇಶ್​ಗೆ ಸೇರಿದ 2 ಮೇಕೆಗಳನ್ನು ಈ ಚಿರತೆ ಕೊಂದು ತಿಂದಿತ್ತು. ಈ ಕಾರಣಕ್ಕೆ ಚಿರತೆ ದಾಳಿ ಮಾಡಿದ್ದ ಸ್ಥಳದಲ್ಲಿ ಅರಣ್ಯ ಸಿಬ್ಬಂದಿಯು ಬೋನ್ ಇರಿಸಿದ್ದು, ಇದೀಗ 2 ವರ್ಷದ ಗಂಡು ಚಿರತೆ ಬೋನ್​ಗೆ ಬಿದ್ದಿದೆ. ಸೆರೆ ಸಿಕ್ಕ ಗಂಡು ಚಿರತೆಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಚಿಪ್ ಅಳವಡಿಕೆ ಮಾಡಲಾಗಿದೆ. ನಂತರ ದೇವಮಾಚಿ ಅರಣ್ಯಕ್ಕೆ ಚಿರತೆಯನ್ನ ಬಿಡಲಾಗಿದೆ.

ಇದನ್ನೂ ಓದಿ: Mandya News: ಮಂಡ್ಯದಲ್ಲಿ ಮುಂದುವರೆದ ಚಿರತೆ ದಾಳಿ, ಚಿರತೆ ಬಾಯಿಗೆ ತುತ್ತಾದ ಹಸು, ಮಾಲೀಕನ ಗೋಳಾಟ

ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹುಲಿ ದಾಳಿ

ಮೈಸೂರು: ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಹುಲಿ ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಹೆಚ್​.ಡಿ.ಕೋಟೆ ತಾಲೂಕಿನ ಮೇಟಿಕುಪ್ಪೆ ಬಳಿ ನಡೆದಿದೆ. ಮುನೇಶ್ವರ(27) ಗಾಯಗೊಂಡ ಕಾರ್ಮಿಕ. ಜಮೀನಿನಲ್ಲಿ ಕೂಲಿ ಕೆಲಸಕ್ಕೆ ಮೂವರು ಕಾರ್ಮಿಕರು ಬಂದಿದ್ದು, ಬಾಳೆಗೊನೆ ಕತ್ತರಿಸುವಾಗ ಪೊದೆಯಲ್ಲಿದ್ದ ಹುಲಿ ಸಡನ್​ ಆಗಿ ದಾಳಿ ಮಾಡಿದೆ. ಗಾಬರಿಯಿಂದ ಕೂಲಿ ಕಾರ್ಮಿಕರು ಕೂಗಾಡುತ್ತಿದ್ದಂತೆ ಹುಲಿ ಓಡಿ ಹೋಗಿದೆ. ಈ ವೇಳೆ ಮುನೇಶ್ವರ ಬಲಗೈ ಬೆರಳಿಗೆ ಗಾಯವಾಗಿದ್ದು, ಹೆಚ್​​.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್. ಡಿ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ