AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಅಲರ್ಟ್

ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವಂತಹ ಘಟನೆ ನಡೆದಿದೆ. ಕೆಂಗೇರಿ ಸುತ್ತಮುತ್ತಲಿನ ಜನರು ಚಿರತೆ ದಾಳಿ ಭೀತಿಯಲ್ಲಿದ್ದಾರೆ.

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಅಲರ್ಟ್
ಚಿರತೆ
TV9 Web
| Edited By: |

Updated on:Dec 01, 2022 | 4:25 PM

Share

ಬೆಂಗಳೂರು: ನಗರದ ಜನರಿಗೆ ಇಷ್ಟು ದಿನ ರಸ್ತೆ ಗುಂಡಿಗಳ ಚಿಂತೆಯಾಗಿತ್ತು. ಆದರೆ ಈಗ ಸಿಲಿಕಾನ್​ ಸಿಟಿ ಜನರಿಗೆ ಚಿರತೆ (Leopard) ಕಾಟ ಶುರುವಾದಂತ್ತಾಗಿದೆ. ಕೆಂಗೇರಿ, ಕುಂಬಳಗೋಡು ಸುತ್ತಮುತ್ತ ಚಿರತೆ ಪ್ರತ್ಯಕ್ಷವಾಗಿರುವಂತಹ ಘಟನೆ ನಡೆದಿದೆ. ಕೆಂಗೇರಿ ಸುತ್ತಮುತ್ತಲಿನ ಜನರು ಚಿರತೆ ದಾಳಿ ಭೀತಿಯಲ್ಲಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಿಂದ ಚಿರತೆಗಳು ಬಂದಿರುವ ಶಂಕೆ ವ್ಯಕ್ತವಾಗಿದೆ. ಮುಖ್ಯರಸ್ತೆಗೆ ನುಗ್ಗಿ ಜಿಂಕೆ ಕೊಂದು ಚಿರತೆ ತಿಂದುಹೋಗಿರುವುದರಿಂದ ಆ ಭಾಗದಲ್ಲಿ ಜನರಲ್ಲಿ ಆತಂಕ ಶುರುವಾಗಿದೆ. 4 ಚಿರತೆಗಳು ಬಂದಿವೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಿದ್ದಾರೆ. ಸುತ್ತ 5 ಶಾಲೆಗಳಿದ್ದು, ಶಾಲಾ ಮಕ್ಕಳು ರಸ್ತೆಯಲ್ಲಿ ಓಡಾಡುತ್ತಾರೆ ಎಂದರು. ಬಿಡಿಎ ಕಾಂಪ್ಲೆಕ್ಸ್​ ಕಡೆ ಚಿರತೆ ಬಂದಿದೆ ಎಂದು ಜನರಲ್ಲಿ ಜಾಗೃತಿ ಮೂಡಿಸಲಾಗಿದೆ.

ಇದನ್ನೂ ಓದಿ: ಬಂಡೀಪುರ ಹುಲಿ ಸಂರಕ್ಷಿತಾರಣ್ಯ ರಾಜ್ಯಕ್ಕೆ ನಂ.1, ದೇಶದಲ್ಲಿ ಈ ಸ್ಥಾನದ ನಿರೀಕ್ಷೆ

ಬೆಂಗಳೂರಿನ ಕೆಂಗೇರಿ ಹೊರವಲಯದ ತುರಹಳ್ಳಿ ಬಳಿ ಪ್ರತ್ಯಕ್ಷವಾದ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಬೋನ್​ ಇಟ್ಟಿದ್ದಾರೆ. ಬೋನ್​ನಲ್ಲಿ ನಾಯಿಮರಿ ಕಟ್ಟಿಹಾಕಿ ಚಿರತೆ ಸೆರೆಗೆ ಪ್ರಯತ್ನಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಖಾಸಗಿ ಕಾರ್ಖಾನೆ ಬಳಿ ಕೂಡ ಚಿರತೆ ಪ್ರತ್ಯಕ್ಷವಾಗಿದೆ. 2 ದಿನದಿಂದ ಫ್ಯಾಕ್ಟರಿ ಸುತ್ತಮುತ್ತಲ ಪ್ರದೇಶದಲ್ಲಿ ಚಿರತೆ ಓಡಾಟ ನಡೆಸಿದೆ. ದಟ್ಟವಾದ ಕಾಡು ಇರುವುದರಿಂದ ಚಿರತೆ ಬಂದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಐವರು ಅರಣ್ಯ ಸಿಬ್ಬಂದಿಯಿಂದ ಚಿರತೆಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳು ಬೋನ್ ಇಟ್ಟಿದ್ದಾರೆ.

ಆನೆಗಳೇ ಹೆಚ್ಚಿರುವ ಚಾಮರಾಜನಗರಕ್ಕಿಲ್ಲ ಟಾಸ್ಕ್​ಪೋರ್ಸ್

ಚಾಮರಾಜನಗರ: ಜಿಲ್ಲೆಯ ಶೇ 50 ರಷ್ಟು ಅರಣ್ಯದಿಂದಲೇ ಕೂಡಿರುವ ಜಿಲ್ಲೆಯಾಗಿದೆ. ಅದರಲ್ಲೂ ಸುಮಾರು 2ಸಾವಿರಕ್ಕೂ ಹೆಚ್ಚು ಆನೆಗಳು ವಾಸಿಸುವ ಅರಣ್ಯ ಪ್ರದೇಶವನ್ನು ಹೊಂದಿದೆ. ಇದರಿಂದಲ್ಲೆ ಜಿಲ್ಲೆಯಲ್ಲಿ‌ ನಿರಂತರವಾಗಿ ವನ್ಯಜೀವಿ ಮಾನವ ಸಂಘರ್ಷ ಉಂಟಾಗುತ್ತಿದೆ. ಅದರಲ್ಲೂ ಆನೆಗಳ ಹಾವಳಿ ಯಿಂದ ಜನರ ಜೀವಗಳೂ ಹೋಗಿವೆ. ಇದೇ ರೀತಿಯ ಸಮಸ್ಯೆ ಬೇರೆ ಜಿಲ್ಲೆಗಳಲ್ಲು ಇದೆ. ಇದನ್ನ ಮನಗಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆನೆಗಳ ಹಾವಳಿ ಪರಿಹಾರಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆಯನ್ನ ರಚಿಸಿದ್ದಾರೆ. ಇದರಲ್ಲಿ ಮೈಸೂರು, ಕೊಡುಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ ಒಳಗೊಂಡಿದೆ. ಆದರೆ ಸರ್ಕಾರ ಈ ಟಾಸ್ಕ್ ಪೋರ್ಸ್ (Task Force)​​ನಲ್ಲಿ ಚಾಮರಾಜನಗರ ಜಿಲ್ಲೆಯನ್ನೇ ಕೈಬಿಟ್ಟಿರುವುದು ಆಶ್ವರ್ಯವಾಗಿದೆ. ಇದೇ ಕಾರಣಕ್ಕೆ ಜಿಲ್ಲೆಯ ಶಾಸಕರು ಈ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.

ಪ್ರಮುಖವಾಗಿ ಚಾಮರಾಜನಗರ ಜಿಲ್ಲೆಯ ಹನೂರು ಮಹದೇಶ್ವರ ಬೆಟ್ಟದ ಭಾಗದಲ್ಲಿ ಸಾಕಷ್ಟು ಆನೆ ಹಾವಳಿ ಇದೆ. ಆನೆ ಹಾವಳಿಯಿಂದ ಜೀವ ಹಾನಿ, ಜಮೀನಿನಲ್ಲಿ ಬೆಳೆ ಹಾನಿಯಂತ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದೆ.‌ ಹಾನಿ ಹಾವಳಿ ಇರುವ ಕಾರಣ ಆನೆಗಳಿಗೆ ರೇಡಿಯೋ ಕಾಲರ್​ಗಳನ್ನು ಮಹದೇಶ್ವರ ಬೆಟ್ಟಭಾಗದಲ್ಲಿ ಹಾಕಲಾಗಿದೆ.‌ ಹೀಗಿದ್ದರೂ ಸರ್ಕಾರ ಜಿಲ್ಲೆಯನ್ನ ಟಾಸ್ಕ್ ಪೋರ್ಸ್​​ನಿಂದ ಕೈಬಿಟ್ಟಿರುವುದಕ್ಕೆ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:10 pm, Thu, 1 December 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು