AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ಬಿಟ್ಟು ಬೆಂಗಳೂರು ಅಭಿವೃದ್ಧಿ ಮಾಡೋಣ: ಶಾಸಕರ ಸಭೆಯಲ್ಲಿ ಡಿಕೆ ಶಿವಕುಮಾರ್ ಕಿವಿಮಾತು

ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಇಂದು ಬೆಂಗಳೂರು ಶಾಸಕರ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಡಿಕೆಶಿ, ಬೆಂಗಳೂರು ನಗರಾಭಿವೃದ್ಧಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ರಾಜಕೀಯ ಬಿಟ್ಟು ಬೆಂಗಳೂರು ಅಭಿವೃದ್ಧಿ ಮಾಡೋಣ: ಶಾಸಕರ ಸಭೆಯಲ್ಲಿ ಡಿಕೆ ಶಿವಕುಮಾರ್ ಕಿವಿಮಾತು
ಬೆಂಗಳೂರು ಶಾಸಕರು, ಸಂಸದರು ಹಾಗೂ ವಿಧಾನಪರಿಷತ್ ಸದಸ್ಯರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ
Rakesh Nayak Manchi
|

Updated on:Jun 05, 2023 | 3:55 PM

Share

ಬೆಂಗಳೂರು: ರಾಜಕೀಯವಾಗಿ ಸೈದ್ಧಾಂತಿಕ ಭಿನ್ನಾಭಿಪ್ರಾಯ, ವ್ಯತ್ಯಾಸ ಇರಬಹುದು. ಇದನ್ನೆಲ್ಲ ಬದಿಗಿಟ್ಟು ಬೆಂಗಳೂರು ನಗರದ ಅಭಿವೃದ್ಧಿಗೆ ಸಹಕರಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಶಾಸಕರಲ್ಲಿ ಮನವಿ ಮಾಡಿದರು. ವಿಧಾನಸೌಧದಲ್ಲಿ ಇಂದು ನಡೆದ ಬೆಂಗಳೂರು (Bangalore) ಶಾಸಕರು, ಸಂಸದರು, ಪರಿಷತ್ ಸದಸ್ಯರ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರು ಮನವಿ ಮಾಡಿದರು.

ಬೆಂಗಳೂರು ನಗರ ಅಭಿವೃದ್ಧಿಗೆ ನಿಮ್ಮ ಸಹಕಾರ, ಸಲಹೆ ಅಗತ್ಯವಿದೆ. ಚುನಾವಣಾ ರಾಜಕೀಯ ಮುಗೀತು, ಈಗ ರಾಜಕೀಯ ಬೇಡವೇ ಬೇಡ. ರಾಜಕೀಯವಾಗಿ ಸೈದ್ಧಾಂತಿಕ ಭಿನ್ನಾಭಿಪ್ರಾಯ, ವ್ಯತ್ಯಾಸ ಇರಬಹುದು. ಈ ಭಿನ್ನಾಭಿಪ್ರಾಯ ಪಕ್ಕಕ್ಕಿಟ್ಟು ಬೆಂಗಳೂರು ಅಭಿವೃದ್ಧಿಗೆ ಸಲಹೆ ಕೊಡಿ. ಮಾಜಿ ಪ್ರಧಾನಿ ವಾಜಪೇಯಿ ಬೆಂಗಳೂರು ಘನತೆ ಬಗ್ಗೆ ಹೇಳಿದ್ದರು. ವಿಶ್ವಮಟ್ಟದಲ್ಲಿ ಬೆಂಗಳೂರು ಘನತೆ, ಪ್ರಾಮುಖ್ಯತೆ ಬಗ್ಗೆ ಹೇಳಿದ್ದರು. ಈಗಿನ ಪ್ರಧಾನಿಯವರೂ ಬೆಂಗಳೂರಿನ ಮಹತ್ವ ಬಗ್ಗೆ ಹೇಳಿದ್ದಾರೆ. ನಾವು, ನೀವೆಲ್ಲಾ ಸೇರಿ ಬೆಂಗಳೂರಿನ ಘನತೆ, ಗೌರವ, ಹೆಚ್ಚಿಸೋಣ ಎಂದರು.

ರಾಜಕೀಯ ಬಿಟ್ಟು ಅಭಿವೃದ್ಧಿ ಮಾಡೋಣ ಎಂದು ಮನವಿ ಮಾಡಿದ ಡಿ.ಕೆ.ಶಿವಕುಮಾರ್, ರಾಜಕೀಯವನ್ನೇ ಮಾಡುತ್ತೇನೆ ಅಂದರೆ ನಾನು ಅದಕ್ಕೂ ರೆಡಿ. ಪ್ರೀತಿಗೂ ಸರಿ, ಸಂಘರ್ಷಕ್ಕೂ ರೆಡಿ. ಆದರೆ ನನಗೆ ದ್ವೇಷದ ರಾಜಕೀಯ ಬೇಕಿಲ್ಲ, ಅದರಲ್ಲಿ ನಂಬಿಕೆ ಇಲ್ಲ. ನೀವು ನನಗೆ ಸಲಹೆ ಕೊಡಿ, ನಿರ್ಮಲ ಮನಸ್ಸಿಂದ ತೆಗೆದುಕೊಳ್ಳುತ್ತೇನೆ. ಜಿಎಸ್​ಟಿ, ಸೆಸ್, ನಾನಾ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ಹಣ ಹೋಗುತ್ತದೆ. ರಾಜ್ಯಕ್ಕೆ ಬರಬೇಕಾದ ಪಾಲು ತಂದು ಅಭಿವೃದ್ಧಿ ಮಾಡೋಣ ಎಂದರು.

ಬೆಂಗಳೂರು ಅಭಿವೃದ್ಧಿಯಲ್ಲಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯ. ನಾವು ಪ್ರತಿಯೊಂದನ್ನೂ ಪರಾಮರ್ಶಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ಅಧಿಕಾರಿಗಳು ದಿಕ್ಕು ತಪ್ಪಿಸಿದರೆ ಸಹಿಸಲ್ಲ. ಅಂತಹ ಅಧಿಕಾರಿಗಳು ಜಾಗ ಖಾಲಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ ಡಿಕೆ ಶಿವಕುಮಾರ್, ಬೆಂಗಳೂರು ಅಭಿವೃದ್ಧಿಗೆ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತನ್ನಿ. ಆ ಮೂಲಕ ಬೆಂಗಳೂರು ಪರಿವರ್ತನೆ ಮಾಡುವ ಎಂದು ಮನವಿ ಮಾಡಿದರು.

ಇದನ್ನೂ ಓದಿ: DK Shivakumar: ವಿರೋಧ ಪಕ್ಷದ ಶಾಸಕರನ್ನು ಸಭೆಗೆ ಕರೆದ ಡಿಕೆ ಶಿವಕುಮಾರ್ ಖುದ್ದು ನಾಪತ್ತೆ, ಬೇಸರಿಸಿಕೊಂಡು ಹೊರಬಿದ್ದ ಬಿಜೆಪಿ ಶಾಸಕರು!

ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​​ ಅವರಿಗೆ ಡಿಸಿಎಂ ಸೂಚನೆ ನೀಡಿದರು. ಇದೇ ವೇಳೆ ಬೆಂಗಳೂರು ಬಗ್ಗೆ ದೂರದೃಷ್ಟಿ ಯೋಜನೆ ರೂಪಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಡಿಸಿಎಂ, ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್ಸ್ ಇವೆ, ಅನುಮತಿ ಕೊಟ್ಟಿದ್ಯಾರು? ಒಂದೊಂದು ಪ್ರದೇಶಕ್ಕೆ ಒಂದೊಂದು ನೀತಿ ಹೇಗೆ? ಎಲ್ಲೆಡೆ ಅನ್ವಯ ಆಗುವಂತೆ ಸಾಮಾನ್ಯ ನೀತಿ ರೂಪಿಸುವಂತೆ ಸೂಚನೆ ನೀಡಿದರು.

ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು?

ಅಪಾರ್ಟ್​​ಮೆಂಟ್​ ಮಾಲೀಕರಿಗೆ ಅನುಕೂಲವಾಗಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಆರೋಪ ಸಂಬಂದ ಆಕ್ರೋಶ ಹೊರಹಾಕಿದ ಡಿಕೆ ಶಿವಕುಮಾರ್, ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಇಂದು ಸಂಜೆಯೊಳಗಡೆ ಅಮಾನತು ಮಾಡುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ಗೆ ಸೂಚಿಸಿದರು. ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕೆ ಯೋಜನೆ ಮಾಡಿದ್ದೀರಿ, ಯಾರ ಅನುಕೂಲಕ್ಕೆ ಮಾಡಿದ್ದೀರಿ? ಯಾರು ಭಾಗಿಯಾಗಿದ್ದೀರಿ ಎಂದು ಸಭೆಯಲ್ಲಿ ಡಿಸಿಎಂ ಪ್ರಶ್ನಿಸಿದಾಗ ಅಧಿಕಾರಿಗಳು ಉತ್ತರಿಸಲು ತಡಬಡಾಯಿಸಿದರು. ಮಾಜಿ ಸಚಿವ ಮುನಿರತ್ನ ಕ್ಷೇತ್ರದಲ್ಲಿ ನಡೆದಿರುವ ರಸ್ತೆ ನಿರ್ಮಾಣ ಕೆಲಸ ಇದಾಗಿದೆ.

ಬೆಂಗಳೂರು ಅಭಿವೃದ್ಧಿಗೆ ಸಲಹೆ ನೀಡಿದ್ದೇವೆ: ರಿಜ್ವಾನ್ ಅರ್ಷದ್

ಕಳೆದ ಹಲವು ವರ್ಷದಿಂದ ಉಸ್ತುವಾರಿಗಳಿಂದ ಅಭಿವೃದ್ಧಿ ಇರಲಿಲ್ಲ. ಬೆಂಗಳೂರು ಅಂತರಾಷ್ಟ್ರೀಯ ನಗರ ಅಂತ ಹೇಳಿ ಬದುಕು ನಡೆಸಲಾಗುತ್ತಿತ್ತು. ನಮ್ಮೆಲ್ಲರ ಬದ್ಧತೆ ಬೆಂಗಳೂರು ಅಭಿವೃದ್ಧಿಯೇ ಆಗಿದೆ ಎಂದು ಶಾಸಕ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ನಮ್ಮೆಲ್ಲರ ಅನುಭವದಂತೆ ಜನರ ಧ್ವನಿಯಾಗಿ ಸರ್ಕಾರದ ನಿರ್ಧಾರ ಆಗಬೇಕು. ಬೆಂಗಳೂರು ಅಭಿವೃದ್ಧಿಗೆ ಏನೆಲ್ಲಾ ಮಾಡಬೇಕು ಅಂತ ಸಲಹೆ ನೀಡಿದ್ದೇವೆ. ಬಿಬಿಎಂಪಿ ವತಿಯಿಂದ ಬೆಂಗಳೂರು ನಗರಕ್ಕೆ ಯಾವುದೂ ಒಳ್ಳೆಯದಾಗಲ್ಲ. ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಒಳ್ಳೆಯದಾಗಲಿದೆ ಅನ್ನೋದು ನನ್ನ ಭಾವನೆ ಎಂದರು.

ಅನುದಾನ ವಿಚಾರವಾಗಿ ಮಾತನಾಡಿದ ರಿಜ್ವಾನ್ ಅರ್ಷದ್, ಬಿಜೆಪಿ ಅವಧಿಯಲ್ಲಿ ಅನುದಾನ ಕೇವಲ ಬಿಜೆಪಿ ಶಾಸಕರಿರುವ ಕ್ಷೇತ್ರಕ್ಕೆ ಮಾತ್ರ ನೀಡಲಾಗಿತ್ತು. ಬಿಬಿಎಂಪಿ ಚುನಾವಣೆ ಆಗಬೇಕು. ಮತದಾರರು ಹೆಚ್ಚಾಗಿರುವ ವಾರ್ಡ್ ನಮ್ಮ ಕ್ಷೇತ್ರದಲ್ಲಿ ಇದೆ. ಅದನ್ನ ಸರಿಪಡಿಸುವ ಕೆಲಸ ಆಗಬೇಕು ಎಂದರು.

ಬಿಜೆಪಿ ಶಾಸಕರು ಎದ್ದು ಹೋದ ವಿಚಾರವಾಗಿ ಮಾತನಾಡಿದ ರಿಜ್ವಾನ್ ಅರ್ಷದ್, ಅವರು ನಾಲ್ಕು ವರ್ಷ ಇದ್ದರೂ ಏನೂ ಮಾಡಲಿಲ್ಲ. ಅರ್ಧ ಗಂಟೆ ಕಾದರೆ ಏನೂ ಆಗಲ್ಲವಲ್ಲ ಎಂದರು. ಕಾಂಗ್ರೆಸ್ ಶಾಸಕರ ಮುನಿಸು ಹಾಗೂ ಗೈರು ವಿಚಾರವಾಗಿ ಮಾತನಾಡಿದ ಅವರು, ಬೇರೆ ಕೆಲಸಕ್ಕೆ ಹೋಗಿದ್ದಾರೆ ಅಂತ ಸಬೂಬು ನೀಡಿದರು.

ಡಿಸಿಎಂಗೆ ಪತ್ರ ಬರೆದ ಸುರೇಶ್ ಕುಮಾರ್

ಬೆಂಗಳೂರಿನ ಶಾಸಕರ ಸಭೆ ವಿಚಾರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದ ಮಾಜಿ ಸಚಿವ ಸುರೇಶ್ ಕುಮಾರ್, ಸಭೆಗೆ ಗೈರಾಗುವ ಬಗ್ಗೆ ತಿಳಿಸಿದರು. ಅಲ್ಲದೆ, ಮಳೆ ನೀರು ನಿರ್ವಹಣೆ ಸೇರಿದಂತೆ ವಿವಿಧ ಕ್ರಮಗಳ ಅನುಷ್ಠಾನ ಕುರಿತಂತೆ ಸಲಹೆಗಳನ್ನು ನೀಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:59 pm, Mon, 5 June 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್