AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರರ ಬಳಿಕ ಬಿಬಿಎಂಪಿ ಅಧಿಕಾರಿಗಳನ್ನು ವಿಚಾರಣೆ ನಡೆಸಲು ನಿರ್ಧರಿಸಿದ ಪೊಲೀಸರು

ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಈ ವಿಚಾರ ರಾಜಭವನದ ಅಂಗಳಕ್ಕೂ ಹೋಗಿತ್ತು. ನಂತರ ದಯಾಮರಣ ಕೋರಿ ಗುತ್ತಿಗೆದಾರರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಸಂಬಂಧ ಗುತ್ತಿಗೆದಾರರನ್ನು ವಿಚಾರಣೆ ನಡೆಸಿದ್ದ ಪೊಲೀಸರು, ಇದೀಗ ಬಿಬಿಎಂಪಿ ಅಧಿಕಾರಿಗಳನ್ನು ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ.

ಗುತ್ತಿಗೆದಾರರ ಬಳಿಕ ಬಿಬಿಎಂಪಿ ಅಧಿಕಾರಿಗಳನ್ನು ವಿಚಾರಣೆ ನಡೆಸಲು ನಿರ್ಧರಿಸಿದ ಪೊಲೀಸರು
ಬಿಬಿಎಂಪಿ
Shivaprasad B
| Updated By: Rakesh Nayak Manchi|

Updated on: Aug 22, 2023 | 11:06 AM

Share

ಬೆಂಗಳೂರು, ಆಗಸ್ಟ್ 22: ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿತ್ತು. ಈ ವಿಚಾರ ರಾಜಭವನದ ಅಂಗಳಕ್ಕೂ ಹೋಗಿತ್ತು. ನಂತರ ದಯಾಮರಣ ಕೋರಿ ಗುತ್ತಿಗೆದಾರರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು. ಈ ಸಂಬಂಧ ಗುತ್ತಿಗೆದಾರರನ್ನು ವಿಚಾರಣೆ ನಡೆಸಿದ ಪೊಲೀಸರು, ಇದೀಗ ಬಿಬಿಎಂಪಿ (BBMP) ಅಧಿಕಾರಿಗಳನ್ನೂ ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ.

ಗುತ್ತಿಗೆದಾರರ ಪತ್ರದ ಸಂಬಂಧ ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಗುತ್ತಿಗೆದಾರರ ವಿಚಾರಣೆ ವೇಳೆ ಕೆಲವರು ಅಧಿಕಾರಿಗಳ ಮೇಲೆ ಆರೋಪ ಮಾಡಿದ್ದರು ಎನ್ನಲಾಗಿದೆ.

ಕೆಲಸ ಮಾಡಿದ್ದೇವೆ, ಹಣ ಬಿಡುಗಡೆ ಮಾಡಬೇಕು. ಆದರೆ ಇನ್ನೂ ಬಿಡುಗಡೆ ಮಾಡದೆ ಕಾಲಹರಣ ಮಾಡುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಹಣ ಬಿಡುಗಡೆ ಮಾಡುವುದಿಲ್ಲ. ಕೆಲವರು ಸಹಿ ಹಾಕಲು ಹಿಂದೆ ಮುಂದು ನೋಡುತ್ತಾರೆ. ಕೆಲವು ಗುತ್ತಿಗೆದಾರರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಅಂತಹವರಿಗೂ ಹಣ ಬಿಡುಗಡೆ ಮಾಡಲು ಹಿಂದೇಟು ಹಾಕುತ್ತಾರೆ ಎಂದು ಕೆಲವು ಗುತ್ತಿಗೆದಾರರು ಆರೋಪಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್! ಕಾಮಗಾರಿ ಸ್ಥಗಿತಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಚಿಂತನೆ

ಗುತ್ತಿಗೆದಾರರ ಆರೋಪಗಳ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ನೋಟಿಸ್ ನೀಡಲು ಪೊಲೀಸರು ನಿರ್ಧರಿಸಿದ್ದಾರೆ. ವಿಚಾರಣೆ ನಡೆಸಿದ ನಂತರ ಗುತ್ತಿಗೆದಾರರು ಮತ್ತು ಅಧಿಕಾರಿಗಳ ಹೇಳಿಕೆ ಆಧರಿಸಿ ವರದಿ ಸಿದ್ಧಪಡಿಸಲಿದ್ದಾರೆ. ಈ ವರದಿಯನ್ನು ಪೊಲೀಸರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮೂಲಕ ರಾಜ್ಯಪಾಲರಿಗೆ ಸಲ್ಲಿಸಲಿದ್ದಾರೆ.

ಸದ್ಯ, ರಾಜ್ಯಪಾಲರಿಗೆ ಪತ್ರ ಬರೆದ ಸಂಬಂಧ ಪೊಲೀಸರು ಗುತ್ತಿಗೆದಾರರ ವಿಚಾರಣೆ ಪೂರ್ಣಗೊಳಿಸಿ ಕಾಮಗಾರಿಗಳ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ದಾಖಲೆ ಪರಿಶೀಲನೆ ಬಳಿಕ ವಿಚಾರಣೆಗೆ ಹಾರಜರಾಗುವಂತೆ ಸಂಬಂಧಪಟ್ಟ ಅಧಿಕಾರಿಳಿಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!