ಶೇ.60 ರಷ್ಟು ಕನ್ನಡ ಬೋರ್ಡ್ ಹಾಕದ ಅಂಗಡಿಗಳ ಲೈಸೆನ್ಸ್ ರದ್ದು: ಬಿಬಿಎಂಪಿ ಎಚ್ಚರಿಕೆ
ಮಳಿಗೆಯಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ನೀಡಿದ್ದ ಗಡುವು ನಿನ್ನೆಗೆ ಅಂತ್ಯಗೊಂಡಿದ್ದು, ಅದಾಗ್ಯೂ ಕೆಲವು ಅಂಗಡಿಗಳಲ್ಲಿ ಶೇ.60 ರಷ್ಟು ಕನ್ನಡ ಪದಗಳುಳ್ಳ ಬೋರ್ಡ್ಗಳನ್ನು ಅಳವಡಿಕೆ ಮಾಡಲಾಗಿದೆ. ಹೀಗಾಗಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಎಚ್ಚೆತ್ತ ಬಿಬಿಎಂಪಿ, ಕನ್ನಡ ನಾಮಫಲಕ ಹಾಕದವರಿಗೆ ಬಿಸಿಮುಟ್ಟಿಸಲು ಸಜ್ಜಾಗಿದ್ದು, ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿದೆ.
ಬೆಂಗಳೂರು, ಫೆ.29: ಮಳಿಗೆಯಲ್ಲಿ ಕನ್ನಡ ನಾಮಫಲಕ (Kannada Board) ಅಳವಡಿಕೆಗೆ ನೀಡಿದ್ದ ಗಡುವು ನಿನ್ನೆಗೆ ಅಂತ್ಯಗೊಂಡಿದ್ದು, ಅದಾಗ್ಯೂ ಕೆಲವು ಅಂಗಡಿಗಳಲ್ಲಿ ಶೇ.60 ರಷ್ಟು ಕನ್ನಡ ಪದಗಳುಳ್ಳ ಬೋರ್ಡ್ಗಳನ್ನು ಅಳವಡಿಕೆ ಮಾಡಲಾಗಿದೆ. ಹೀಗಾಗಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಎಚ್ಚೆತ್ತ ಬಿಬಿಎಂಪಿ (BBMP), ಕನ್ನಡ ನಾಮಫಲಕ ಹಾಕದವರಿಗೆ ಬಿಸಿಮುಟ್ಟಿಸಲು ಸಜ್ಜಾಗಿದ್ದು, ಲೈಸೆನ್ಸ್ ರದ್ದು ಮಾಡುವ ಎಚ್ಚರಿಕೆ ನೀಡಿದೆ.
ಡೆಡ್ಲೈನ್ ಮುಕ್ತಾಯ ಹಿನ್ನೆಲೆ ಇಂದು ನಾಮಫಲಕ ಪರಿಶೀಲನೆ ನಡೆಸಲು ಮುಂದಾದ ಪಾಲಿಕೆ ಅಧಿಕಾರಿಗಳು, ಶೇಕಡಾ 60ರಷ್ಟು ಕನ್ನಡ ನಾಮಫಲಕ ಅಳವಡಿಸದಿದ್ದರೆ ಪರವಾನಗಿ ರದ್ದು ಮಾಡಿ ಬೀಗ ಜಡಿಯುವುದಾಗಿ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ವಿಕಾಸ್ ಕಿಶೋರ್ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಕನ್ನಡ ನಾಮಫಲಕ ಕಡೆಗಣಿಸಿದವರಿಗೆ ಪಾಲಿಕೆ ಅಧಿಕಾರಿಗಳು ಬಿಸಿಮುಟ್ಟಿಸಲು ಮುಂದಾಗಿದ್ದಾರೆ.
ಇದನ್ನೂ ಓದಿ: BBMP Budget: ಇಂದು ಬಿಬಿಎಂಪಿ ಬಜೆಟ್, ಬ್ರ್ಯಾಂಡ್ ಬೆಂಗಳೂರಿಗೆ ಏನೆಲ್ಲಾ ನಿರೀಕ್ಷೆ? ಇಲ್ಲಿದೆ ವಿವರ
ಕನ್ನಡ ನಾಮಫಲಕ ಹಾಕದಿದ್ದರೆ ಅಂಗಡಿಗಳನ್ನು ಬಂದ್ ಮಾಡುತ್ತೇವೆ. ಈಗಾಗಲೇ ಶೇಕಡಾ 90ರಷ್ಟು ಕನ್ನಡ ನಾಮಫಲಕ ಹಾಕಲಾಗಿದೆ. ಇನ್ನು ಉಳಿದಿರುವುದು 3 ಸಾವಿರ ನಾಮಫಲಕ ಮಾತ್ರ. ಮತ್ತಷ್ಟು ಸಮಯ ನೀಡುವಂತೆ ಅಂತಾರಾಷ್ಟ್ರೀಯ ಕಂಪನಿಗಳು, SBI, ಕೆನರಾ ಬ್ಯಾಂಕ್ ಮನವಿ ನೀಡಿವೆ. ಈ ಬಗ್ಗೆ ಇಂದು ಸಂಜೆ ತೀರ್ಮಾನ ಮಾಡುತ್ತೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕನ್ನಡ ರಥ ಸಂಚಾರ
ರಾಜ್ಯದಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಗಡುವು ಮುಗಿದ ಹಿನ್ನೆಲೆ ಬೆಂಗಳೂರಿನಲ್ಲಿ ಇಂದು ಕನ್ನಡ ಉಳಿಸಿ, ಕನ್ನಡ ಬೆಳೆಸಿ, ಕನ್ನಡ ರಥ ಸಂಚಾರ ನಡೆಯಲಿದೆ. ಮೈಸೂರು ಬ್ಯಾಂಕ್ ವೃತ್ತದಿಂದ ಕನ್ನಡ ರಥ ಸಂಚಾರ ಆರಂಭಗೊಳ್ಳಲಿದೆ.
ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಎಂಎನ್ಸಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಬೇಕು. ನಮ್ಮ ಜನರ ಭೂಮಿ ಪಡೆದು ಕೈಗಾರಿಕೆ ಆರಂಭಿಸಿ ಉದ್ಯೋಗ ಕೊಟ್ಟಿಲ್ಲ. ರಾಜ್ಯದಲ್ಲಿ ಯಾರಿಗೆ ಉದ್ಯೋಗ ನೀಡಲಾಗಿದೆ ಎಂದು ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯುವಂತೆ ಆಗ್ರಹಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:05 am, Thu, 29 February 24