ರೌಡಿಶೀಟರ್​ಗಳ ಬಳಿ ಇರುವ ಲೈಸನ್ಸ್ ಪಿಸ್ತೂಲ್ ವಾಪಸ್: ಬೆಂಗಳೂರು ನಗರ ಪೊಲೀಸ್ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ ಗನ್​ಗಳನ್ನು ವಾಪಸ್ ನೀಡುವಂತೆ ಸೂಚಿಸಿದಾಗ ರೌಡಿಶೀಟರ್​ಗಳ ಬಳಿಯೂ ಲೈಸನ್ಸ್ ಪಿಸ್ತೂಲ್ ಇರುವುದು ಕಂಡುಬಂದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್, ಕಾನೂನಾತ್ಮಕವಾಗಿ ಗನ್​ಗಳನ್ನು ವಾಪಸ್ ಪಡೆಯಲಾಗುವುದು ಎಂದಿದ್ದಾರೆ.

ರೌಡಿಶೀಟರ್​ಗಳ ಬಳಿ ಇರುವ ಲೈಸನ್ಸ್ ಪಿಸ್ತೂಲ್ ವಾಪಸ್: ಬೆಂಗಳೂರು ನಗರ ಪೊಲೀಸ್ ಆಯುಕ್ತ
ರೌಡಿಶೀಟರ್​ಗಳ ಬಳಿ ಇರುವ ಲೈಸನ್ಸ್ ಪಿಸ್ತೂಲ್ ವಾಪಸ್ ಪಡೆಯಲಾಗುವುದು ಎಂದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
Follow us
ರಾಚಪ್ಪಾಜಿ ನಾಯ್ಕ್
| Updated By: Rakesh Nayak Manchi

Updated on: Mar 23, 2024 | 2:49 PM

ಬೆಂಗಳೂರು, ಮಾ.23: ರೌಡಿಶೀಟರ್​ಗಳ ಬಳಿಯೂ ಲೈಸನ್ಸ್ ಹೊಂದಿರುವ ಗನ್ (Gun) ಇರುವುದು ಪತ್ತೆಯಾದ ಬಗ್ಗೆ ಪ್ರತಿಕ್ರಿಯೆ ನೀಡಿದ ನಗರ (Bengaluru) ಪೊಲೀಸ್ ಆಯುಕ್ತ ಬಿ ದಯಾನಂದ್ (B Dayanand), ರೌಡಿಶೀಟರ್ ಬಳಿ ಲೈಸನ್ಸ್ ಇರುವುದು ಕಂಡುಬಂದಿದೆ. ಆರರಿಂದ ಎಂಟು ಜನರ ಬಳಿ ಇದೆ ಅನ್ನೋದು ಗೊತ್ತಾಗಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಈ ಹಿಂದೆ ಲೈಸನ್ಸ್ ನೀಡಲಾಗಿದೆ. ಕಾನೂನಾತ್ಮಕವಾಗಿ ಅದನ್ನ ಪರಿಶೀಲನೆ‌ ಮಾಡಬೇಕು. ಯಾವ ಹಿನ್ನಲೆಯಲ್ಲಿ ಮತ್ತು ಯಾವ ಸನ್ನಿವೇಶದಲ್ಲಿ ನೀಡಲಾಗಿದೆ ಎಂಬುದನ್ನು ಗಮನಿಸಬೇಕು. ಲೈಸನ್ಸ್ ವಾಪಸ್ಸು ಪಡೆಯಲು ಅವಕಾಶ ಇದೆ. ಕಾನೂನಾತ್ಮಕವಾಗಿ ಅದನ್ನು ಮಾಡಬೇಕು ಎಂದರು.

ಇದನ್ನೂ ಓದಿ: ರೌಡಿಶೀಟರ್​ಗಳಿಗೆ ಗನ್​ ಲೈಸೆನ್ಸ್ ನೀಡಿದ ಪೊಲೀಸರು; ವಿಷಯ ತಿಳಿದು ಅಧಿಕಾರಿಗಳಿಗೆ ಪೊಲೀಸ್ ಆಯುಕ್ತ ಬಿ.ದಯಾನಂದ್ ಕ್ಲಾಸ್

ಗನ್ ಠಾಣೆಗೆ ಒಪ್ಪಿಸಲು ಸೂಚನೆ

ಲೋಕಸಭಾ ಚುನಾವಣೆ ಹಿನ್ನಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಗನ್​ಗಳನ್ನು ಹಿಂದಿರುಗಿಸಲು ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಇದೇ ವೇಳೆ ರೌಡಿಶೀಟರ್​ಗಳ ಬಳಿಯೂ ಗನ್​ಗಳು ಇರುವುದು ಬೆಳಕಿಗೆ ಬಂದಿದೆ. ಅಶೋಕ್ ಅಡಿಗ ಸೇರಿದಂತೆ ಒಟ್ಟು 6 ರೌಡಿಶೀಟರ್‌ಗಳ ಬಳಿ‌ ಗನ್​ಗಳಿರುವುದು ತಿಳಿದುಬಂದಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಕೋಪಗೊಂಡ ಪೊಲೀಸ್ ಆಯುಕ್ತ ಬಿ.ದಯಾನಂದ​, ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರಿಂದ ದಾಳಿ ವಿಚಾರವಾಗಿ ಮಾತನಾಡಿದ ಪೊಲೀಸ್ ಆಯುಕ್ತರು, ರೌಡಿ ಚಟುವಟಿಕೆ ನಿಗ್ರಹಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ಚಟುವಟಿಕೆ ಮೇಲೆ ಪರಿಣಾಮ‌ ಆಗಬಾರದು. ಹಾಗಾಗಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿದ್ದೇವೆ. ವಿಭಾಗ ಮಟ್ಟದಲ್ಲಿ ರೌಡಿ ಮನೆಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು