ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್ಐಆರ್​​

ಗುತ್ತಿದಾರ ಚಲುವರಾಜು ಅವರಿಗೆ ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಆರ್​.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್​ಐಆರ್​ ದಾಖಲಾಗಿವೆ. ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್ಐಆರ್​​
ಶಾಸಕ ಮುನಿರತ್ನ
Edited By:

Updated on: Sep 14, 2024 | 11:18 AM

ಬೆಂಗಳೂರು, ಸೆಪ್ಟೆಂಬರ್​ 14: ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್​.ಆರ್. ನಗರ ಬಿಜೆಪಿ (BJP) ಶಾಸಕ ಮುನಿರತ್ನ (Munirathna) ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್​ಐಆರ್​ ದಾಖಲಾಗಿವೆ. ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ.

ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿದ್ದು, ಎ1 ಶಾಸಕ ಮುನಿರತ್ನ ಆಗಿದ್ದಾರೆ. ಎ1 ಶಾಸಕ ಮುನಿರತ್ನ, ಎ2 ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆ.

ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಜೊತೆಗೆ ತನಗೆ ರಕ್ಷಣ ನೀಡುವಂತೆ ಮನವಿ ಮಾಡಿದ್ದರು.

ಇದನ್ನೂ ಓದಿ: ಕಾರ್ಪೋರೇಷನ್ ನಲ್ಲಿ ಆನ್ ಮಾಡಿದರೆ ಗಾಳಿ ಬಂದು ಮೀಟರ್ ಓಡುತ್ತದೆ, ಗಾಳಿಗೂ ಹಣ ಕೊಡಬೇಕಾ? ಮುನಿರತ್ನ

ಶಾಸಕ ಮುನಿರತ್ನ ಅವರು ಸೆಪ್ಟೆಂಬರ್​ 9 ರಂದು 20 ಲಕ್ಷ ಹಣ ಕೇಳಿದ್ದರು. ಹಣ ನೀಡಿದಿದ್ದರೆ ರೇಣುಕಾಸ್ವಾಮಿ ರೀತಿ ಕೊಲೆ ಮಾಡುವುದಾಗಿ ಮತ್ತು ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಆರೋಪಿಸಿದ್ದರು. ಈ ಪ್ರಕರಣ ಸಂಬಂಧ ಮುನಿರತ್ನ ಅವರಿಗೆ ನೋಟಿಸ್ ನೀಡಲು ವೈಯಾಲಿಕಾವಲ್ ಪೊಲೀಸರು ಸಿದ್ಧತೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:09 am, Sat, 14 September 24