ಬೆಂಗಳೂರು ನಗರದಲ್ಲಿ ಮುಂದುವರಿದ ತುಂತುರು ಮಳೆ; ಜಿಟಿ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತ

| Updated By: sandhya thejappa

Updated on: Nov 14, 2021 | 9:17 AM

ಮನೆ ಶಿಥಿಲಗೊಂಡ ಕಾರಣ ಸುಬ್ಬಮ್ಮ ಮನೆಯಿಂದ ಹೊರಗೆ ಬಂದಿದ್ದರು. ಮನೆ ಕುಸಿತದಿಂದ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸದ್ಯ ಇರಲು ಮನೆಯಿಲ್ಲದೆ ಪರದಾಡುತ್ತಿರುವ ಅಜ್ಜಿ, ಪರ್ಯಾಯ ವ್ಯವಸ್ಥೆಗೆ ಮನವಿ ಮಾಡುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ ಮುಂದುವರಿದ ತುಂತುರು ಮಳೆ; ಜಿಟಿ ಜಿಟಿ ಮಳೆಗೆ ಜನಜೀವನ ಅಸ್ತವ್ಯಸ್ತ
ಜಿಟಿ ಜಿಟಿ ಮಳೆ
Follow us on

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ನಗರದಲ್ಲಿ ತುಂತುರು ಮಳೆ ಮುಂದುವರಿದಿದೆ. ನಗರದಲ್ಲಿ ನಿರಂತರವಾಗಿ 4ನೇ ದಿನವೂ ಜಿಟಿ ಜಿಟಿ ಮಳೆಯಾಗುತ್ತಿದೆ. ಜಿಟಿ ಜಿಟಿ ಮಳೆ ಮತ್ತು ಚಳಿಗೆ ಬೆಂಗಳೂರಿನ ಜನಜೀವನ ಅಸ್ತವ್ಯಸ್ತವಾಗಿದೆ. ಮೈಸೂರಿನಲ್ಲೂ ನಿರಂತರ ಮಳೆಯಾಗುತ್ತಿದ್ದು, ಮಳೆಗೆ ಮನೆ ಕುಸಿದು ಬಿದ್ದಿದೆ. ನಂಜನಗೂಡು ತಾಲೂಕಿನ ಸುತ್ತೂರು ಗ್ರಾಮದ ಸುಬ್ಬಮ್ಮ ಎಂಬುವವರ ಮನೆ ಕುಸಿದು ಬಿದ್ದಿದೆ. ಮನೆ ಕಳೆದುಕೊಂಡು ವೃದ್ಧೆ ಸುಬ್ಬಮ್ಮ ಪರದಾಡುತ್ತಿದ್ದಾರೆ.

ಮನೆ ಶಿಥಿಲಗೊಂಡ ಕಾರಣ ಸುಬ್ಬಮ್ಮ ಮನೆಯಿಂದ ಹೊರಗೆ ಬಂದಿದ್ದರು. ಮನೆ ಕುಸಿತದಿಂದ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸದ್ಯ ಇರಲು ಮನೆಯಿಲ್ಲದೆ ಪರದಾಡುತ್ತಿರುವ ಅಜ್ಜಿ, ಪರ್ಯಾಯ ವ್ಯವಸ್ಥೆಗೆ ಮನವಿ ಮಾಡುತ್ತಿದ್ದಾರೆ.

ಕಾಫಿ ಬೆಳೆಗಾರರಿಗೆ ಸಂಕಷ್ಟ
ನಿರಂತರ ಮಳೆಯಿಂದ ಕೊಡಗು ಜಿಲ್ಲೆಯ ಅಡಕೆ, ಕಾಫಿ, ಮೆಣಸು ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ಕಾಫಿ ಬೀಜ ಒಣಗಲು ಬಿಸಿಲೇ ಇಲ್ಲದೆ ಸಮಸ್ಯೆಗೆ ಸಿಲುಕಿದ್ದಾರೆ. ಕಾಫಿ ಬೆಳೆ ಕೊಳೆ ರೋಗಕ್ಕೆ ತುತ್ತಾಗುವ ಆತಂಕ ಶುರುವಾಗಿದೆ. ಭಾರಿ ನಷ್ಟವಾಗುವ ಭೀತಿಯಲ್ಲಿ ಕಾಫಿ ಬೆಳೆಗಾರರು ಇದ್ದಾರೆ.

ಇನ್ನು ರಾಮನಗರದಲ್ಲಿ ಮುಂದುವರಿದ ಜಿಟಿ ಜಿಟಿ ಮಳೆಯಿಂದ ಜಿಲ್ಲೆ ಮಲೆನಾಡಂತೆ ಪರಿವರ್ತನೆಯಾಗಿದೆ.
ನಿರಂತರ ಮಳೆಗೆ ರೈತ ಸಮುದಾಯದಲ್ಲಿ ಆತಂಕ ಮನೆಮಾಡಿದೆ. ಭಾರಿ ಮಳೆಯಿಂದ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಲಿಂಗಾಪುರ ಗ್ರಾಮಕ್ಕೆ ನೀರು ನುಗ್ಗಿದೆ.

ಮೂರು ದಿನ ಭಾರೀ ಮಳೆ ಸಾಧ್ಯತೆ
ಇಂದಿನಿಂದ ನ.16ರವರೆಗೂ ಮೈಸೂರು, ರಾಮನಗರ, ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ. ಮಲೆನಾಡು, ಕರಾವಳಿ ಮಾತ್ರವಲ್ಲದೆ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಇಂದು ಮತ್ತು ನ. 15ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ

Karnataka Rain: ಇಂದಿನಿಂದ 3 ದಿನ ಮಲೆನಾಡು, ಕರಾವಳಿ, ಬೆಂಗಳೂರಿನಲ್ಲಿ ಮಳೆ; ಚಳಿಗಾಳಿಯೂ ಹೆಚ್ಚಳ

ಗದಗ: ಕರುಳ ಬಳ್ಳಿ ಉಳಿಸಿಕೊಳ್ಳಲು ತಾಯಿಯ ಹೋರಾಟ ವ್ಯರ್ಥ; ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಕ ಸಾವು