ತುಂತುರು ಮಳೆಗೆ ವಾರಾಂತ್ಯದಲ್ಲಿ ಬೆಂಗಳೂರು ಕೂಲ್ ಕೂಲ್; ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಜಿಟಿ ಜಿಟಿ ಮಳೆ ಕಾಟ!

ಬೆಂಗಳೂರಿನಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ ನಾಳಿದ್ದು ಸೋಮವಾರದ ವರೆಗೂ ಬರುವ ಸಾಧ್ಯತೆಯಿದೆ. ದಕ್ಷಿಣ ಭಾರತದ ಕಡೆ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತುಂತುರು ಮಳೆಗೆ ವಾರಾಂತ್ಯದಲ್ಲಿ ಬೆಂಗಳೂರು ಕೂಲ್ ಕೂಲ್; ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಜಿಟಿ ಜಿಟಿ ಮಳೆ ಕಾಟ!
ತುಂತುರು ಮಳೆಗೆ ವಾರಾಂತ್ಯದಲ್ಲಿ ಬೆಂಗಳೂರು ಕೂಲ್ ಕೂಲ್; ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಜಿಟಿ ಜಿಟಿ ಮಳೆ ಕಾಟ!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 09, 2021 | 11:16 AM

ಬೆಂಗಳೂರು: ರಾಜಧಾನಿ ಮಂದಿ ಕೊರೊನಾಘಾತದಿಂದ ತುಸು ಚೇತರಿಸಿಕೊಂಡಿದ್ದು, ಈಗೀಗ ನಗರದಲ್ಲಿ ಜೋರಾಗಿಯೇ ಓಡಾಡತೊಡಗಿದ್ದಾರೆ. ವಾರಂತ್ಯದಲ್ಲಿ ಬಿಂದಾಸ್ ಆಗಿ ಓಡಾಡುತ್ತಿದ್ದಾರೆ. ಆದರೆ ಈ ವಾರಾಂತ್ಯ ವಾತಾವರಣ ತುಸು ಭಿನ್ನವಾಗಿದೆ. ಕೊರೊನಾ ಸೋಂಕು ಬಹುತೇಕ ಜೀರೋಗೆ ಕುಸಿದಿದೆ. ಖುಷ್​ ಖುಷಿಯಾಗಿ ಓಡಾಡೋಣ ಅಂದ್ರೆ ಬೆಂಗಳೂರು ನಗರದ ಹಲವೆಡೆ ಜಿಟಿ ಜಿಟಿ ಮಳೆ ಬೆಳಗ್ಗೆಯಿಂದ ಬೀಳುತ್ತಿದೆ.

ಜಯನಗರ, ಬಸವನಗುಡಿ, ಮಲ್ಲೇಶ್ವರಂ, ರಾಜಾಜಿನಗರ, RR ನಗರ, ಹೆಬ್ಬಾಳ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಬನಶಂಕರಿ, ಕೋರಮಂಗಲ, ಪದ್ಮನಾಭನಗರ, ಹನುಮಂತನಗರ, ಗಿರಿನಗರ, ಚಾಮರಾಜಪೇಟೆ ಸೇರಿದಂತೆ ಹಲವೆಡೆ ಮಳೆ ಸುರಿಯತೊಡಗಿದೆ. ಮೈಸೂರು ರಸ್ತೆ, ನಾಯಂಡಹಳ್ಳಿ, ಸದಾಶಿವನಗರ, ಮೇಖ್ರೀ ಸರ್ಕಲ್, ಮಲ್ಲೇಶ್ವರಂ, ಹೆಬ್ಬಾಳ ಭಾಗದಲ್ಲೂ ಮಳೆಯಾಗುತ್ತಿದೆ.

ಬೆಂಗಳೂರಿನಲ್ಲಿ ಬೆಂಬಿಡದೆ ಸುರಿಯುತ್ತಿರುವ ಮಳೆ ನಾಳಿದ್ದು ಸೋಮವಾರದ ವರೆಗೂ ಬರುವ ಸಾಧ್ಯತೆಯಿದೆ. ದಕ್ಷಿಣ ಭಾರತದ ಕಡೆ ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗ್ಗೆಯಿಂದ ಮೋಡ ಮುಸುಕಿದ ವಾತಾವರಣ ನಿರ್ಮಾಣಗೊಂಡಿದ್ದು, ಇದೀಗ ತುಂತುರು ಮಳೆಗೆ ವಾರಾಂತ್ಯದಲ್ಲಿ ಸಿಟಿ ಕೂಲ್ ಕೂಲ್ ಆಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ 4 ದಿನ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುಡುಗು, ಗಾಳಿ ಸಹಿತ ಭಾರಿ ಮಳೆ ಆಗುವ ಸಾಧ್ಯತೆಯಿದೆ. ಕಲಬುರಗಿ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಸಾರಲಾಗಿದೆ. ಕರಾವಳಿಯ 3 ಜಿಲ್ಲೆಗಳು, ದಕ್ಷಿಣ ಒಳನಾಡು, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಯೆಲ್ಲೋ ಅಲರ್ಟ್‌ ಇದೆ.

Rain Problem : ತುಂಬಿ ಹರಿಯುತ್ತಿರುವ ಹಳ್ಳ ದಾಟಲು ಜೀವ ಅಂಗೈಯಲ್ಲಿಡಿದು ಜನರ ಪರದಾಟ | Tv9kannada

Published On - 11:09 am, Sat, 9 October 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ