AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಲೆಂಟೈನ್ಸ್ ಡೇ ದಿನದಂದು ಬೆಂಗಳೂರಿನಲ್ಲಿ ಮದ್ಯ ಬ್ಯಾನ್, ತೀವ್ರ ವಿರೋಧ

ಫೆಬ್ರವರಿ 14ರಂದು ವ್ಯಾಲೆಂಟೈನ್ಸ್ ಡೇ. ಅಂದೇ ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಕೂಡ ನಡೆಯಲಿದೆ. ಆದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಫೆ.14ರಂದು ಮದ್ಯ ನಿಷೇಧಿಸಲಾಗಿದೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ವ್ಯಾಲೆಂಟೈನ್ಸ್ ಡೇ ದಿನದಂದು ಬೆಂಗಳೂರಿನಲ್ಲಿ ಮದ್ಯ ಬ್ಯಾನ್, ತೀವ್ರ ವಿರೋಧ
ರಾಜ್ಯ ವೈನ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಉಪಾಧ್ಯಕ್ಷ ಕರುಣಾಕರ್‌ ಹೆಗ್ಡೆ
TV9 Web
| Updated By: ಆಯೇಷಾ ಬಾನು|

Updated on:Feb 10, 2024 | 11:01 AM

Share

ಬೆಂಗಳೂರು, ಫೆ.10: ಫೆಬ್ರವರಿ 14ರಂದು ಪ್ರೇಮಿಗಳ ದಿನಾಚರಣೆ (Valentine Day), ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ ಕೂಡ ನಡೆಯಲಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಫೆ. 14 ರ ಸಂಜೆಯಿಂದ 17ರ ಬೆಳಗ್ಗೆ ವರೆಗೆ ಮದ್ಯ (Alcohol) ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆದರೆ ಮತ್ತೊಂದೆಡೆ ಡ್ರೈ ಡೇ ಬೇಡ ಅಂತಾ ಬಾರ್ ಮಾಲೀಕರ ಸಂಘ ಮನವಿ ಮಾಡಿದೆ. ಡ್ರೈ ಡೇ ರನ್ ವಿರುದ್ಧ ಬಾರ್ ಮಾಲೀಕರ ಸಂಘ ಅಸಮಾಧಾನ ಹೊರ ಹಾಕಿದೆ.

ಫೆಬ್ರವರಿ 14ರ ಸಂಜೆ 5ರಿಂದ ಫೆಬ್ರವರಿ 17ರ ಬೆಳಿಗ್ಗೆ 6 ಗಂಟೆವರೆಗೆ ನಗರದ ಕೆಲವು ಭಾಗಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಭಾಗವಹಿಸೋದು ಕೇವಲ 16 ಸಾವಿರ ಮತದಾರರಷ್ಟೇ. ಶಿಕ್ಷಕರ ಕ್ಷೇತ್ರದಲ್ಲಿ ಎಲ್ಲಾ ವಿದ್ಯಾವಂತರೇ ಇರುವ ಕಾರಣ ಸಮಸ್ಯೆ ಆಗಲ್ಲ. ಸದ್ಯದ ಆದೇಶದಿಂದ ರಾಜಸ್ವ ಸಂಗ್ರಹಕ್ಕೆ ಸಮಸ್ಯೆಯಾಗಲಿದೆ. 4 ದಿನ ಮಾರಾಟ ಸ್ಥಗಿತ ಮಾಡುವುದರಿಂದ ಬೆಂಗಳೂರಲ್ಲೇ 300 ಕೋಟಿ ನಷ್ಟ ಆಗಲಿದೆ. ಸರ್ಕಾರ ಈ ಬಗ್ಗೆ ಚಿಂತನೆ ಮಾಡದಿದ್ದರೆ ನಷ್ಟ ಅನುಭವಿಸಬೇಕಾಗುತ್ತೆ ಎಂದು ರಾಜ್ಯ ವೈನ್‌ ಮರ್ಚೆಂಟ್ಸ್‌ ಅಸೋಸಿಯೇಷನ್‌ ಉಪಾಧ್ಯಕ್ಷ ಕರುಣಾಕರ್‌ ಹೆಗ್ಡೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ವ್ಯಾಲೆಂಟೈನ್ಸ್​ ಡೇ ಸನಿಹದಲ್ಲಿ ‘ನಗುವಿನ ಹೂಗಳ ಮೇಲೆ’ ಒಂದು ಡುಯೆಟ್​ ಸಾಂಗ್​

ವ್ಯಾಲೆಂಟೈನ್ಸ್ ಡೇ ಅನ್ನು ವಿಶೇಷವಾಗಿ ವಿಜೃಂಭಣೆಯಿಂದ ಆಚರಿಸಲು ಯುವ ಜನತೆ ಸಿದ್ದರಾಗಿದ್ದಾರೆ. ಬಾರ್, ರೆಸ್ಟೋರೆಂಟ್‌ಗಳು, ಪಬ್‌ಗಳಲ್ಲಿ ವಿಶೇಷ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ, ಪ್ರೇಮಿಗಳ ದಿನದಂದೇ ಮದ್ಯ ಮಾರಾಟ ನಿಷೇಧಿಸಿದ್ದು, ಮದ್ಯ ಪ್ರಿಯ ಪ್ರೇಮಿಗಳಿಗೆ ನಿರಾಸೆಯಾಗಿದೆ.

ಇನ್ನು ವರದಿಗಳ ಪ್ರಕಾರ, ಬೆಂಗಳೂರು ನಗರ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಶಿಕ್ಷಕರು (ಯಲಹಂಕ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹದೇವಪುರ, ಬೆಂಗಳೂರು ದಕ್ಷಿಣ ಮತ್ತು ಆನೇಕಲ್) ಶಿಕ್ಷಕರು ಮತದಾನ ಮಾಡಲಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಫೆ.23ರವರೆಗೆ ಮುಂದುವರಿಯಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:00 am, Sat, 10 February 24