AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liquor Seize: ನೀತಿ ಸಂಹಿತೆ ಜಾರಿ ನಂತರ ಬೆಂಗಳೂರಲ್ಲಿ ಕೋಟ್ಯಂತರ ಲೀಟರ್ ಮದ್ಯ ವಶ; ಇದರ ಮೌಲ್ಯ ಕೇಳಿದ್ರೆ ಶಾಕ್ ಆಗ್ತೀರಿ

ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ದಿನ ಬಾಕಿ ಇದ್ದು, ಅಕ್ರಮ ನಗದು, ಮದ್ಯ ಹಾಗೂ ಇತರ ವಸ್ತುಗಳ ಸಾಗಾಟಕ್ಕೆ ತಡೆಯೊಡ್ಡುವ, ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ.

Liquor Seize: ನೀತಿ ಸಂಹಿತೆ ಜಾರಿ ನಂತರ ಬೆಂಗಳೂರಲ್ಲಿ ಕೋಟ್ಯಂತರ ಲೀಟರ್ ಮದ್ಯ ವಶ; ಇದರ ಮೌಲ್ಯ ಕೇಳಿದ್ರೆ ಶಾಕ್ ಆಗ್ತೀರಿ
ಮದ್ಯ
Ganapathi Sharma
|

Updated on: May 03, 2023 | 7:44 PM

Share

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಕೆಲವೇ ದಿನ ಬಾಕಿ ಇದ್ದು, ಅಕ್ರಮ ನಗದು, ಮದ್ಯ ಹಾಗೂ ಇತರ ವಸ್ತುಗಳ ಸಾಗಾಟಕ್ಕೆ ತಡೆಯೊಡ್ಡುವ, ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಮಾರ್ಚ್ 29ರಂದು ಚುನಾವಣೆ ಘೋಷಣೆಯಾಗಿದ್ದು ನೀತಿಸಂಹಿತೆಯೂ ಜಾರಿಗೆ ಬಂದಿದೆ. ನೀತಿಸಂಹಿತೆ ಜಾರಿಗೆ ಬಂದ ನಂತರ ಈವರೆಗೆ ಬೆಂಗಳೂರಿನ 816 ಕಡೆ ದಾಳಿ ನಡೆಸಿ 3.77 ಕೋಟಿ ಲೀಟರ್​ ಐಎಂಎಲ್ ಮದ್ಯ, 2.85 ಕೋಟಿ ಲೀಟರ್​ ಬಿಯರ್ ವಶಕ್ಕೆ (Liquor Seize) ಪಡೆಯಲಾಗಿದೆ. ಒಟ್ಟು 700 ಪ್ರಕರಣ ದಾಖಲಿಸಿರುವ ಅಬಕಾರಿ ಇಲಾಖೆ ಅಧಿಕಾರಿಗಳು, ಅಕ್ರಮ ಮದ್ಯ ಸಾಗಣೆಗೆ ಬಳಸಿದ್ದ 30 ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ನಗದು, ಮದ್ಯ, ಮಾದಕ ದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆ ವಸ್ತುಗಳನ್ನು ವಶಪಡಿಸಿಕೊಂಡಿರುವ ವಿಚಕ್ಷಣಾ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸರು 2,514 ಎಫ್​ಐಆರ್ ದಾಖಲಿಸಿದ್ದಾರೆ. ಚುನಾವಣೆ ಘೋಷಣೆಯಾದ ಬಳಿಕ ಈವರೆಗೆ 69,847 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದ್ದು, 20 ಶಸ್ತ್ರಾಸ್ತ್ರಗಳ ಪರವಾನಗಿ ರದ್ದು ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

ಸಿಆರ್​ಪಿಸಿ ಕಾಯ್ದೆಯಡಿ 5,583 ಪ್ರಕರಣಗಳನ್ನು ದಾಖಲಿಸಲಾಗಿದೆ. ಅವುಗಳಲ್ಲಿ 10,297 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಗಿದೆ. 15,944 ಜಾಮೀನು ರಹಿತ ವಾರಂಟ್​​ಗಳನ್ನು ಜಾರಿಗೊಳಿಸಲಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.

ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ