AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಶಿಕ್ಷಣ ಇಲಾಖೆಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ; ರಾಜ್ಯದ ಒಬ್ಬರು ಆಯ್ಕೆ

2024 ರ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿಗೆ 16 ಶಿಕ್ಷಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅದರಂತೆ ಕರ್ನಾಟಕದ ಬೆಂಗಳೂರು ವಿಶ್ವ ವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೇಶವ್ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಒಲಿದಿದ್ದು, ಸೆಪ್ಟೆಂಬರ್​​ 5ರಂದು ಶಿಕ್ಷಣ ಇಲಾಖೆಯಿಂದ  ಪ್ರಶಸ್ತಿ ಪ್ರದಾನ ಮಾಲಾಗುತ್ತದೆ.

ಕೇಂದ್ರ ಶಿಕ್ಷಣ ಇಲಾಖೆಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ; ರಾಜ್ಯದ ಒಬ್ಬರು ಆಯ್ಕೆ
ಡಾ. ಎಸ್​ಆರ್​​ ಕೇಶವ್​​ಗೆ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ
Vinay Kashappanavar
| Edited By: |

Updated on:Sep 01, 2024 | 9:47 PM

Share

ಬೆಂಗಳೂರು, ಸೆ.01: ಕೇಂದ್ರ ಶಿಕ್ಷಣ ಇಲಾಖೆ ನೀಡುವ 2024 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ 16 ಶಿಕ್ಷಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಅದರಂತೆ ಕರ್ನಾಟಕದ ಬೆಂಗಳೂರು ವಿಶ್ವ ವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೇಶವ್ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಒಲಿದಿದೆ. ರಾಜ್ಯ ವಿಶ್ವವಿದ್ಯಾಲಯಗಳು ಮತ್ತು ಕೇಂದ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಿಂದ ಸಾಧನೆ ಮಾಡಿದ ಶಿಕ್ಷಕರಿಗೆ ಸೆಪ್ಟೆಂಬರ್​​ 5ರಂದು ಶಿಕ್ಷಣ ಇಲಾಖೆಯಿಂದ  ಪ್ರಶಸ್ತಿ ಪ್ರದಾನ ಮಾಲಾಗುತ್ತದೆ.

ಪ್ರಶಸ್ತಿ ಪುರಸ್ಕೃತರ ಪಟ್ಟಿ

Press ReleaseI_Press information Bureau SRK

ಇದನ್ನೂ ಓದಿ:ಕರ್ನಾಟಕದ ಇಬ್ಬರು ಶಿಕ್ಷಕರಿಗೆ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಗರಿ

ಇನ್ನು ಕಳೆದ ಆ.28 ರಂದು ಕರ್ನಾಟಕದ ಇಬ್ಬರು ಉಪನ್ಯಾಸಕರಾದ ಮೈಸೂರು ಜಿಲ್ಲೆಯ ಹುಣಸೂರು ಮಹಿಳಾ ಪಿಯು ಕಾಲೇಜಿನ ಉಪನ್ಯಾಸಕರಾಗಿರುವ ಹೆಚ್ಎನ್ ಗಿರೀಶ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಉಪನ್ಯಾಸಕ ನಾರಾಯಣಸ್ವಾಮಿ ಆರ್​ ಎಂಬುವವರಿಗೆ ರಾಷ್ಟ್ರಿಯ ಪ್ರಶಸ್ತಿ ಲಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 pm, Sun, 1 September 24