AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ

Bengaluru News: ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೊಳಗಾಗಿದ್ದ ಎಲ್‌ಎಲ್‌ಬಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯುವತಿ ಮತ್ತು ಆರೋಪಿಗಳ ಕುಟುಂಬಸ್ಥರು ಪರಿಚಿತರು ಎನ್ನಲಾಗಿದ್ದು, , ಜೀವನ್​ಭೀಮಾನಗರ ಠಾಣೆಯಲ್ಲಿ ಈ ಬಗ್ಗೆ ಕೇಸ್​ ದಾಖಲಾಗಿದೆ. ಮತ್ತೊಂದೆಡೆ ಮಗಳ ಸಾವಿನ ನಡುವೆಯೂ ಕುಟುಂಬಸ್ಥರು ಆಕೆಯ ನೇತ್ರದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ: ದುರಂತ ಅಂತ್ಯ ಕಂಡ LLB ವಿದ್ಯಾರ್ಥಿನಿ
ಮೃತ ಯುವತಿ ಅಮೃತಾImage Credit source: Tv9 Kannada
ರಾಚಪ್ಪಾಜಿ ನಾಯ್ಕ್
| Edited By: |

Updated on:Jul 16, 2026 | 3:27 PM

Share

ಮುಖ್ಯಾಂಶಗಳು

  • ಮದುವೆಗೆ ನಿರಾಕರಿಸಿದ್ದಕ್ಕೆ ಬೆಂಗಳೂರಲ್ಲಿ LLB ವಿದ್ಯಾರ್ಥಿನಿಯ ಕೊಲೆ
  • ಅಣ್ಣನ ಮದುವೆಯಾಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತ
  • ಆರೋಪಿಗಳ ಬಂಧನ, ಯುವತಿಯ ನೇತ್ರದಾನಕ್ಕೆ ಕುಟುಂಬಸ್ಥರ ನಿರ್ಧಾರ

ಬೆಂಗಳೂರು, ಜುಲೈ 16: ಅಣ್ಣನ ಜೊತೆ ಮದುವೆ ಆಗಲು ನಿರಾಕರಿಸಿದ್ದಕ್ಕೆ ತಮ್ಮನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಅಮೃತಾ ಮೃತ ದುರ್ದೈವಿಯಾಗಿದ್ದು, ಈಕೆಗೆ ಜು.13ರಂದು ಬೆಂಗಳೂರಿನ HAL ರಸ್ತೆಯ ಕೋಡಿಹಳ್ಳಿಯಲ್ಲಿ ಸೂರ್ಯ ಎಂಬಾತ ಚಾಕು ಇರಿದಿದ್ದ. ಈ ವೇಳೆ ಗಂಭೀರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅಮೃತಾ ನಿನ್ನೆ ಪ್ರಾಣಬಿಟ್ಟಿದ್ದಾರೆ.

ಮದುವೆ, ಮಗು ಇರುವ ವಿಚಾರ ಮುಚ್ಚಿಟ್ಟು ಪ್ರೀತಿ

ಅಮೃತಾ ಮತ್ತು ಆರೋಪಿ ಸೂರ್ಯ ಸಹೋದರ ಧನುಷ್​ ಪರಸ್ಪರ ಪ್ರೀತಿಸುತ್ತಿದ್ದರು. ಇವರೆಲ್ಲ ಒಂದೇ ಏರಿಯಾದವರಾಗಿದ್ದು, ಓಂ ಶಕ್ತಿ ಮಾಲೆ ಹಾಕುವ ವೇಳೆ ಎರಡು ಕುಟುಂಬಗಳ ನಡುವೆ ಪರಿಚಯವಾಗಿತ್ತು. ಅದೇ ಪರಿಚಯದಿಂದ ಧನುಷ್ ಮತ್ತು ಅಮೃತಾ ಆತ್ಮೀಯರಾಗಿದ್ರು. ಬಳಿಕ ಪರಸ್ಪರ ಪ್ರೀತಿಸಲು ಆರಂಭಿಸಿದ್ದರು. ಧನುಷ್​​ಗೆ ಅದಾಗಲೇ​ ಮದುವೆಯಾಗಿ 1 ಮಗುವಿದ್ದು, ಪತ್ನಿಯಿಂದ ಆತ ವಿಚ್ಚೇದನ ಪಡೆದಿದ್ದ. ಆದರೆ ಈ ವಿಚಾರವನ್ನು ಅಮೃತಾಳಿಂದ ಮುಚ್ಚಿಟ್ಟಿದ್ದ ಎನ್ನಲಾಗಿದೆ. ನಂತರ ವಿಷಯ ಗೊತ್ತಾದ ಬಳಿಕ ಧನುಷ್​​ನಿಂದ ಅಮೃತಾ ದೂರವಾಗಿದ್ದರು. ಇದೇ ವಿಚಾರಕ್ಕೆ ಜು.13ರಂದು ಯುವತಿ ಮನೆ ಬಳಿ ಧನುಷ್​​ ಸಹೋದರ ಸೂರ್ಯ ಗಲಾಟೆ ಮಾಡಿದ್ದು, ಚಾಕು ಇರಿದಿದ್ದ. ಪ್ರಕರಣ ಸಂಬಂಧ ಆರೋಪಿಗಳಾದ ಸೂರ್ಯ ಮತ್ತು ಧನುಷ್​ನನ್ನು ಪೊಲೀಸರು ಬಂಧಿಸಿದ್ದು, ಜೀವನ್​ಭೀಮಾನಗರ ಠಾಣೆಯಲ್ಲಿ ಈ ಬಗ್ಗೆ ಕೇಸ್​ ದಾಖಲಾಗಿದೆ.

ಇದನ್ನೂ ಓದಿ: ಹಣಕ್ಕಾಗಿ‌ 20 ವರ್ಷದ ಮಗಳನ್ನೇ ಪಶ್ಚಿಮ ಆಫ್ರಿಕಾದಲ್ಲಿ ಮಾರಾಟ ಮಾಡಿದ ಪೋಷಕರು!

ವಕೀಲೆಯಾಗಬೇಕೆಂದು ಕನಸು ಕಂಡಿದ್ದ ಅಮೃತಾ

22 ವರ್ಷದ ಅಮೃತಾ ಎಲ್‌ಎಲ್‌ಬಿ ವಿದ್ಯಾರ್ಥಿನಿಯಾಗಿದ್ದು, ಮುಂದು ವಕೀಲೆಯಾಗುವ ಕನಸು ಕಂಡಿದ್ದಳು. ಆದರೀಗ ದಾರುಣ ಅಂತ್ಯ ಕಂಡಿದ್ದಾಳೆ. ಹೀಗಾಗಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಆಗಬೇಕು ಎಂದು ಯುವತಿಯ ಕುಟುಂಬಸ್ಥರು, ಸಹಪಾಠಿಗಳು ಆಗ್ರಹಿಸಿದ್ದಾರೆ.

ಯುವತಿಯ ನೇತ್ರದಾನಕ್ಕೆ ಕುಟುಂಬಸ್ಥರ ನಿರ್ಧಾರ

ಇನ್ನು ಯುವತಿ ಅಮೃತಾರ ನೇತ್ರದಾನಕ್ಕೆ ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಗಳ ಸಾವಿನ ಶೋಕದ ನಡುವೆಯೂ ಮಾನವೀಯತೆ ಮೆರೆದ ಅಮೃತಾ ಕುಟುಂಬದ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಮೃತಾ ಕೊನೆಯುಸಿರೆಳೆದ ತಕ್ಷಣವೇ, ಕುಟುಂಬದವರು ಅವರ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ವೈದ್ಯರು ಈ ಬಗ್ಗೆ ಕುಟುಂಬದವರೊಂದಿಗೆ ಮಾತನಾಡಿದಾಗ, ಅವರು ತಕ್ಷಣವೇ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:25 pm, Thu, 16 July 26

Follow Us
ರಾಚಪ್ಪಾಜಿ ನಾಯ್ಕ್
ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್