ಕೆರೆಯಂತಾದ ಅಂಜನಾಪುರ ಮುಖ್ಯರಸ್ತೆಯಲ್ಲಿ ತೆಪ್ಪ ಬಿಟ್ಟು ಪ್ರತಿಭಟನೆ! ಕೆಸರು ಗದ್ದೆಯಲ್ಲಿ ನಾಟಿ ಮಾಡುತ್ತಿರುವ ಸ್ಥಳೀಯರು

| Updated By: sandhya thejappa

Updated on: Sep 04, 2021 | 11:23 AM

ಕನಕಪುರ ಬನ್ನೇರುಘಟ್ಟಕ್ಕೆ ಸಂಪರ್ಕ ಕಲ್ಪಿಸುವ ಅಂಜನಾಪುರ ರಸ್ತೆಯಲ್ಲಿ ಗುಂಡಿ ಬಿದ್ದಿವೆ. ಇದರಿಂದ ಸಂಚಾರ ಮಾಡುವವರಿಗೆ ತುಂಬಾ ತೊಂದರೆಯಾಗುತ್ತಿದೆ.

ಕೆರೆಯಂತಾದ ಅಂಜನಾಪುರ ಮುಖ್ಯರಸ್ತೆಯಲ್ಲಿ ತೆಪ್ಪ ಬಿಟ್ಟು ಪ್ರತಿಭಟನೆ! ಕೆಸರು ಗದ್ದೆಯಲ್ಲಿ ನಾಟಿ ಮಾಡುತ್ತಿರುವ ಸ್ಥಳೀಯರು
ತೆಪ್ಪ ಬಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ, ಕೆಸರು ಗದ್ದೆಯಲ್ಲಿ ನಾಟಿ ಮಾಡುತ್ತಿದ್ದಾರೆ.
Follow us on

ಬೆಂಗಳೂರು: ನಗರದ ಅಂಜನಾಪುರ ಮುಖ್ಯರಸ್ತೆಯಲ್ಲಿ ಗುಂಡಿ ಬಿದ್ದು ಕೆರೆಯಂತಾಗಿದೆ. ಹೀಗಾಗಿ ಗುಂಡಿ ಬಿದ್ದು ನೀರು ತುಂಬಿರುವ ರಸ್ತೆಯಲ್ಲಿ ಸ್ಥಳೀಯರು ತೆಪ್ಪ ಬಿಟ್ಟು ಅದರಲ್ಲಿ ಕೂತು ಪ್ರತಿಭಟನೆ ನಡೆಸುತ್ತಿದ್ದಾರೆ. ಸುಮಾರು 12 ವರ್ಷಗಳಿಂದ ರಸ್ತೆ ದುರಸ್ತಿಯೇ ಆಗಿಲ್ಲ. ರಸ್ತೆ ಅಪಾಯದ ಅಂಚಿನಲ್ಲಿದೆ. ಗುಂಡಿಗಳಿಂದ ಓಡಾಡುವವರಿಗೆ ತೀರ ತೊಂದರೆಯಾಗುತ್ತಿದೆ. ಪ್ರತಿನಿತ್ಯ ಅಪಘಾತವಾಗುತ್ತಿದೆ. ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್ಗಳಿಗೆ ಓಡಾಡಲು ಕಷ್ಟವಾಗುತ್ತಿದೆ. ಹೀಗಾಗಿ ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕನಕಪುರ ಬನ್ನೇರುಘಟ್ಟಕ್ಕೆ ಸಂಪರ್ಕ ಕಲ್ಪಿಸುವ ಅಂಜನಾಪುರ ರಸ್ತೆಯಲ್ಲಿ ಗುಂಡಿ ಬಿದ್ದಿವೆ. ಇದರಿಂದ ಸಂಚಾರ ಮಾಡುವವರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ಕಾಮಗಾರಿ ಕೆಲಸಗಳನ್ನು ಪೂರ್ಣಗೊಳಿಸಬೇಕೆಂದು ಆಗ್ರಹಿಸಿ ಚೇಂಚ್ ಮೇಕರ್ಸ್ ಆಫ್ ಕನಕಪುರ ರೋಡ್ ತಂಡ ಧರಣಿ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ನೂರಾರು ಜನರು ಭಾಗಿಯಾಗಿದ್ದು, ಕೆಸರು ಗದ್ದೆಯಂತಾಗಿರುವ ರಸ್ತೆಯಲ್ಲಿ ನಾಟಿ ಮಾಡುತ್ತಿದ್ದಾರೆ.

ರೈತರ ಧರಣಿ
ಚಾಮರಾಜನಗರ: ಕೆರೆಗೆ ನೀರು ತುಂಬಿಸುವ ಕಾರ್ಯ ಸ್ಥಗಿತಗೊಳಿಸಿದ ಹಿನ್ನೆಲೆ ರೈತರು ಮತ್ತು ಅಚ್ಚುಕಟ್ಟುದಾರರು ನಂಜನಗೂಡು ತಾಲೂಕಿನ ಸುತ್ತೂರು ಬಳಿಯ ಪಂಪ್ಹೌಸ್ ಮುಂದೆ ಧರಣಿ ನಡೆಸುತ್ತಿದ್ದಾರೆ. ಸೆಪ್ಟೆಂಬರ್ 1ರಂದು ಉಮ್ಮತ್ತೂರು ಕೆರೆಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನೀರು ಬಿಟ್ಟಿದ್ದರು. ಎರಡು ದಿನಗಳ ಬಳಿಕ ಅಧಿಕಾರಿಗಳು ಪುನಃ ರಾತ್ರೋರಾತ್ರಿ ನೀರು ನಿಲ್ಲಿಸಿದ್ದಾರೆ. ಅಧಿಕಾರಿಗಳ ಈ ನಡೆಗೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ

ವೇಶ್ಯೆಯರು, ಲೈಂಗಿಕ ಕಾರ್ಯಕರ್ತೆಯರನ್ನು ಹುಡುಕುತ್ತಿರುವ ತಾಲಿಬಾನ್​ ಉಗ್ರರು; ಜೀವ ತೆಗೆಯಲು ಸಿದ್ಧತೆ

ರೋಹಿಣಿ ಸಿಂಧೂರಿ ಆರೋಪಕ್ಕೆ ಮರುಜೀವ; ಸಾ.ರಾ ಮಹೇಶ್ ಒಡೆತನದ ಜಾಗಗಳ ಮರು ಸರ್ವೇ ಮಾಡಲು ಆದೇಶ

(locals have protested demanding the completion of the main road in Anjanapur Bengaluru)