Discount Offer: ಟ್ರಾಫಿಕ್ ಫೈನ್ ಕಟ್ಟುವವರಿಗೆ ಶೇಕಡಾ 50ರಷ್ಟು ರಿಯಾಯಿತಿ, ಅಂತಿಮ ದಿನಾಂಕ ಇಲ್ಲಿದೆ

ಲೋಕ ಅದಾಲತ್ ಹಿನ್ನಲೆಯಲ್ಲಿ ಟ್ರಾಫಿಕ್ ಫೈನ್ ಕಟ್ಟುವವರಿಗೆ ಭರ್ಜರಿ ರಿಯಾಯಿತಿ ನೀಡಲಾಗುತ್ತಿದೆ. ಫೈನ್ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲು ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ.

Discount Offer: ಟ್ರಾಫಿಕ್ ಫೈನ್ ಕಟ್ಟುವವರಿಗೆ ಶೇಕಡಾ 50ರಷ್ಟು ರಿಯಾಯಿತಿ, ಅಂತಿಮ ದಿನಾಂಕ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Rakesh Nayak Manchi

Updated on:Feb 02, 2023 | 8:37 PM

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಮಾಡಿ ದಂಡ ಕಟ್ಟಲು (Traffic Fine) ಬಾಕಿ ಇರುವವರು ಮತ್ತು ಪ್ರಕರಣ ಕೋರ್ಟ್​ನಲ್ಲಿ ಇದ್ದರೆ ಅಂತಹವರಿಗೆ ಸಾರಿಗೆ ಇಲಾಖೆ ಭರ್ಜರಿ ರಿಯಾಯಿತಿ ನೀಡುತ್ತಿದೆ. ಫೆಬ್ರವರಿ 11ರಂದು ಲೋಕ ಅದಾಲತ್ (Lok Adalat) ನಡೆಯಲಿರುವ ಹಿನ್ನಲೆ ದಂಡ ಪಾವತಿಯಲ್ಲಿ ರಿಯಾಯಿತಿ ನೀಡುವಂತೆ ಕಾನೂನು ಸೇವೆಗಳ ಪ್ರಾಧಿಕಾರದ (Legal Services Authority) ಅಧ್ಯಕ್ಷ ಬಿ.ವೀರಪ್ಪ ಅವರು ಮನವಿ ಮಾಡಿದ್ದರು. ಅದರಂತೆ ಶೇಕಡಾ 50ರಷ್ಟು ರಿಯಾಯಿತಿ ನೀಡಿ ಸಾರಿಗೆ ಇಲಾಖೆ (Transport Department) ಅಧೀನ ಕಾರ್ಯದರ್ಶಿಯಿಂದ ಆದೇಶ ಹೊರಡಿಸಲಾಗಿದೆ. ಫೆ.11 ರ ಒಳಗಾಗಿ ಫೈನ್ ಕಟ್ಟುವವರು ಕಟ್ಟಬಹುದಾಗಿದೆ. ಫೆಬ್ರವರಿ 11ರನಂತರ ಸಂಪೂರ್ಣ ದಂಡದ ಮೊತ್ತ ಪಾವತಿಸಬೇಕು.

ಅಜಾಗರೂಕತೆಯಿಂದ ಬಸ್ ಚಾಲನೆ, ಚಾಲಕನಿಗೆ ನೋಟಿಸ್

ಬೆಂಗಳೂರು: ಅಜಾಗರೂಕತೆಯಿಂದ ಬಸ್ ಚಾಲನೆ ಮಾಡಿದ ಆರೋಪ ಸಂಬಂಧ ಬಿಎಂಟಿಸಿ ಬಸ್ ಚಾಲಕನೋರ್ವನಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬಿಎಂಟಿಸಿ ಡಿಪೋ-33ರ ವ್ಯವಸ್ಥಾಪಕರಿಂದ ಚಾಲಕ ವಿವೇಕಾನಂದಸ್ವಾಮಿಗೆ ನೋಟಿಸ್​ ಜಾರಿ ಮಾಡಲಾಗಿದೆ. ಡಿಪೋ ಮ್ಯಾನೇಜರ್​ಗಳಿಂದ ಚಾಲಕರಿಗೆ ಇಲ್ಲ ಸಲ್ಲದ ವಿಚಾರಕ್ಕೆ ನೋಟೀಸ್ ಜಾರಿ ಮಾಡುವ ಆರೋಪವೂ ಇದೆ. ಕೇವಲ ಕಾರ್ ಅನ್ನು ಓವರ್ ಟೇಕ್ ಮಾಡಿದ್ದಕ್ಕೆ ಇದೀಗ ನೋಟೀಸ್ ಜಾರಿ ಮಾಡಲಾಗಿದ್ದು, ಸೂಕ್ತ ಕಾರಣ ನೀಡುವಂತೆ ಮೂರು ದಿನಗಳ ಗಡುವು ನೀಡಲಾಗಿದೆ. ಒಂದು ವೇಳೆ ಸೂಕ್ತ ಉತ್ತರ ನೀಡದಿದ್ದಲ್ಲಿ ಶಿಸ್ತು ಕ್ರಮ ತೆಗೆದುಕೊಳ್ಳುವಂತೆಯೂ ಸೂಚಿಸಲಾಗಿದೆ. ಅಜಾಗರುಕತೆಯಿಂದ ಬಸ್ ಚಾಲನೆ ಮಾಡಿದ್ದಾರೆ ಎಂಬ ಪ್ರಯಾಣಿಕನೊಬ್ಬನ ದೂರು ಆಧರಿಸಿ ಈ ನೋಟಿಸ್ ಜಾರಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Thu, 2 February 23