AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ: ಯಾವೆಲ್ಲ ಚಟುವಟಿಕೆಗಳಿಗೆ ನಿರ್ಬಂಧ? ಇಲ್ಲಿದೆ ವಿವರ

Lok Sabha Election 2024: ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚುನಾವಣಾಧಿಕಾರಿಗಳ ಕಚೇರಿಯ 100 ಮೀ.ಸುತ್ತಾ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಮಾ.28 ರಿಂದ ಏ.8ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಬೆಂಗಳೂರಿನ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ: ಯಾವೆಲ್ಲ ಚಟುವಟಿಕೆಗಳಿಗೆ ನಿರ್ಬಂಧ? ಇಲ್ಲಿದೆ ವಿವರ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Mar 28, 2024 | 12:00 PM

Share

ಬೆಂಗಳೂರು, ಮಾರ್ಚ್​.28: ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ (Lok Sabha Election) ಚುನಾವಣೆಯ ನಾಮಪತ್ರ (Nomination File) ಸಲ್ಲಿಕೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆ ಇಂದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಭ್ಯರ್ಥಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ತೊಂದರೆ ಆಗುವ ಸಾಧ್ಯತೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಚುನಾವಣಾಧಿಕಾರಿಗಳ ಕಚೇರಿಯ 100 ಮೀ.ಸುತ್ತಾ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಮಾ.28 ರಿಂದ ಏ.8ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಇದನ್ನೂ ಓದಿ: Lok Sabha Election: ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆಯುವ ದಿನಾಂಕ ಇಲ್ಲಿದೆ

ನಿಷೇಧಾಜ್ಞೆ ನಿಬಂಧನೆಗಳು

  • ಕಾನೂನು ಸುವ್ಯವಸ್ಥೆ ಭಂಗವುಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು
  • ಮೆರವಣಿಗೆ, ಸಭೆಗಳನ್ನು ನಡೆಸುವುದು ಮತ್ತು ಧ್ವನಿವರ್ದಕಗಳು ಬಳಸುವಂತಿಲ್ಲ
  •  ಶಸ್ತ್ರಾಸ್ತ್ರಗಳನ್ನು, ದೊಣ್ಣೆಗಳನ್ನು ಕತ್ತಿಗಳನ್ನು, ಈಟೆಗಳು, ಗದೆಗಳು, ಕಲ್ಲು, ಇಟ್ಟಿಗೆ ಚಾಕು ಇನ್ನೂ ಮುಂತಾದ ಮಾರಾಕಾಸ್ತ್ರಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಯಾವುದೇ ವಸ್ತುಗಳನ್ನು ತರುವಂತಿಲ್ಲ.
  • ಯಾವುದೇ ಸ್ಫೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿಗಳನ್ನು ಎಸೆಯುವ ಸಾಧನಗಳು ಅಥವಾ ಉಪಕರಣೆಗಳನ್ನು ತರುವಂತಿಲ್ಲ,  ಶೇಖರಿಸಬಾರದು
  • ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನ ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು, ಸಂಕೇತಗಳನ್ನು, ಭಿತ್ತಿಪತ್ರ ಅಥವಾ ಇತರೆ ಯಾವುದೇ ವಸ್ತುಗಳನ್ನು ಅಥವಾ ಪದಾರ್ಥಗಳನ್ನು ಪ್ರದರ್ಶಿಸುವುದಕ್ಕೆ ನಿಷೇಧ ಹೇರಲಾಗಿದೆ.ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:57 am, Thu, 28 March 24

ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ