
ಬೆಂಗಳೂರು, ಮಾರ್ಚ್.28: ಕರ್ನಾಟಕದಲ್ಲಿ ಮೊದಲ ಹಂತದಲ್ಲಿ ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ (Lok Sabha Election) ಚುನಾವಣೆಯ ನಾಮಪತ್ರ (Nomination File) ಸಲ್ಲಿಕೆ ಇಂದಿನಿಂದ ಆರಂಭವಾಗಿದೆ. ಈ ಹಿನ್ನೆಲೆ ಇಂದು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಮಿಸುವ ಅಭ್ಯರ್ಥಿಗಳ ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಕೂಡ ಆಗಮಿಸಲಿದ್ದು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಾಮಪತ್ರ ಸಲ್ಲಿಕೆ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಬೆಂಗಳೂರು ನಗರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಭ್ಯರ್ಥಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸಾಧ್ಯತೆ ಇದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ತೊಂದರೆ ಆಗುವ ಸಾಧ್ಯತೆ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ಚುನಾವಣಾಧಿಕಾರಿಗಳ ಕಚೇರಿಯ 100 ಮೀ.ಸುತ್ತಾ ನಿಷೇದಾಜ್ಞೆ ಜಾರಿ ಮಾಡಲಾಗಿದೆ. ಮಾ.28 ರಿಂದ ಏ.8ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.
ಇದನ್ನೂ ಓದಿ: Lok Sabha Election: ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ಹಿಂಪಡೆಯುವ ದಿನಾಂಕ ಇಲ್ಲಿದೆ
Published On - 11:57 am, Thu, 28 March 24