AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

Lok Sabha Election IT Raid: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಬರೊಬ್ಬರಿ 16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, 6 ಕೋಟಿ 45 ಲಕ್ಷ ಮೌಲ್ಯದ ವಜ್ರ ವಶಪಡಿಸಿಕೊಳ್ಳಲಾಗಿದೆ. 1.33 ಕೋಟಿ ನಗದು ಪತ್ತೆಯಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ
ಆದಾಯ ತೆರಿಗೆ ಇಲಾಖೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Apr 24, 2024 | 10:35 AM

Share

ಬೆಂಗಳೂರು, ಏಪ್ರಿಲ್​ 24: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ (Income Tax Department) ಮತ್ತು ಚುನಾವಣಾ ಆಯೋಗ (Election Commission) ಹಣ, ಚಿನ್ನ, ಬೆಳ್ಳಿ ಮತ್ತು ವಸ್ತುಗಳ ಅಕ್ರಮ ವಹಿವಾಟಿನ ಮೇಲೆ ಹದ್ದಿನ ಕಣ್ಣು ಇಟ್ಟಿವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ 16 ಕಡೆ ಶೋಧ ನಡೆಸಿದ್ದು, ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಹಣ ಪತ್ತೆಯಾಗಿದೆ.

ಶಂಕರಪುರದಲ್ಲಿ 3 ಕೋಟಿಗೂ ಅಧಿಕ ಮೌಲ್ಯದ 4 ಕೆಜಿ 400 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ. ಶಾರದದೇವಿ ರಸ್ತೆಯಲ್ಲಿ 3 ಕೋಟಿ 39 ಲಕ್ಷ ಮೌಲ್ಯದ 4 ಕೆಜಿ 800 ಗ್ರಾಂ, ಮರ್ಕೈಂಟಲ್ ಬ್ಯಾಂಕ್ ಬಳಿ 2 ಕೋಟಿ 13 ಲಕ್ಷ ಮೌಲ್ಯದ 3 ಕೆಜಿ 400 ಗ್ರಾಂ, ಜಯನಗರ 3ನೇ ಬ್ಲಾಕ್​ನಲ್ಲಿ 5 ಕೋಟಿ 33 ಲಕ್ಷ ಮೌಲ್ಯದ 7 ಕೆಜಿ 598 ಗ್ರಾಂ, ಸಾರಸ್ವತ್ ಬ್ಯಾಂಕ್, ಚಾಮರಾಜಪೇಟೆಯಲ್ಲಿ 84 ಮೌಲ್ಯದ 1 ಕೆಜಿ 200 ಗ್ರಾಂ ಚಿನ್ನದ ಗಟ್ಟಿ ಪತ್ತೆಯಾಗಿದೆ.

ಬಸವನಗುಡಿ ಅಂಚೆ ಕಚೇರಿ ಬಳಿ 3 ಲಕ್ಷ 34 ಸಾವಿರ ಮೌಲ್ಯದ 6.38 ಕ್ಯಾರೆಟ್ ವಜ್ರ, ಮಾತಾ ಶಾರದಾ ದೇವಿ ರಸ್ತೆಯಲ್ಲಿ 3 ಲಕ್ಷದ 14 ಸಾವಿರ ಮೌಲ್ಯದ 5.99 ಕ್ಯಾರೆಟ್ ವಜ್ರ, ಜಯನಗರದಲ್ಲಿ 6 ಕೋಟಿ 40 ಲಕ್ಷ ಮೌಲ್ಯದ 202.83 ಕ್ಯಾರೆಟ್ ವಜ್ರ ಪತ್ತೆಯಾಗಿದೆ.

ಇದನ್ನೂ ಓದಿ: ಮತಗಟ್ಟೆಗೆ ಮೊಬೈಲ್ ಫೋನ್ ತೆಗೆದುಕೊಂಡು ಹೋಗುತ್ತೀರಾ? ಹಾಗಾದರೆ ಗಮನಿಸಿ

ಒಟ್ಟು 16.10 ಕೋಟಿ ಮೌಲ್ಯದ 22 ಕೆಜಿ 923 ಗ್ರಾಂ ಚಿನ್ನ, 6 ಕೋಟಿ 45 ಲಕ್ಷ ಮೌಲ್ಯದ ವಜ್ರ  ವಶಪಡಿಸಿಕೊಳ್ಳಲಾಗಿದೆ. 1.33 ಕೋಟಿ ನಗದು ಪತ್ತೆಯಾಗಿದೆ.

ಬಳ್ಳಾರಿಯಲ್ಲಿ 23 ಲಕ್ಷ ಹಣ ಜಪ್ತಿ

ಬಳ್ಳಾರಿ: ಬ್ರೂಸ್ ಪೇಟೆ ಪೊಲೀಸರು, ಎಫ್.ಎಸ್.ಟಿ ಹಾಗೂ ವಿವಿಎಸ್‌ಟಿ ತಂಡದ ಜಂಟಿ ಕಾರ್ಯಚರಣೆಯಲ್ಲಿ ದಾಖಲೆ ಇಲ್ಲದೆ ಸಂಗ್ರಹಿಸಿದ್ದ 23 ಲಕ್ಷ ನಗದು, 450 ಗ್ರಾಂ ಚಿನ್ನ, 13 ಕೆಜಿ ಬೆಳ್ಳಿ ಪತ್ತೆಯಾಗಿದೆ. ಕಂಬಳಿ ಬಜಾರ್​ನ ಚುನ್ನಿಲಾಲ್ ರಾಕೇಶ್ ಕುಮಾರ್ ಷಾ ಜ್ಯೂವೆಲರ್ಸ್​​ನ ಮಾಲೀಕ ಕಮಲೇಶ್ ಜೈನ್ ಎಂಬುವರ ಮನೆಯಲ್ಲಿ ಇಷ್ಟೊಂದು ಪ್ರಮಾಣದ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದೆ. ಜಪ್ತಿ ಮಾಡಲಾದ ಹಣ, ಚಿನ್ನ ಮತ್ತು ಬೆಳ್ಳಿಯನ್ನು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 am, Wed, 24 April 24

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್