Bengaluru Metro: ಲೋಕಸಭಾ ಚುನಾವಣೆ 2024- ಏಪ್ರಿಲ್ 26 ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣಾ(Lok Sabha election) ಹಿನ್ನೆಲೆಯಲ್ಲಿ ಮತದಾರರಿಗೆ ಸಂಚರಿಸಲು ಯಾವುದೇ ತೊಂದರೆ ಆಗದಂತೆ ಏಪ್ರಿಲ್ 26 ರಂದು ಮೆಟ್ರೋ ಸೇವೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಬಿಎಂಆರ್​ಸಿಎಲ್(BMRCL) ತಿಳಿಸಿದೆ.

Bengaluru Metro: ಲೋಕಸಭಾ ಚುನಾವಣೆ 2024- ಏಪ್ರಿಲ್ 26 ರಂದು ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸೇವೆ ವಿಸ್ತರಣೆ
ಮೇಟ್ರೋ ಅವಧಿ ವಿಸ್ತರಣೆ
Edited By:

Updated on: Apr 24, 2024 | 4:30 PM

ಬೆಂಗಳೂರು, ಏ.24: ಲೋಕಸಭಾ ಚುನಾವಣಾ(Lok Sabha election) ಹಿನ್ನೆಲೆಯಲ್ಲಿ ಏಪ್ರಿಲ್ 26 ರಂದು ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು ಬಿಎಂಆರ್​ಸಿಎಲ್(BMRCL) ತಿಳಿಸಿದೆ. ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳಿಂದ ಕೊನೆಯ ರೈಲು ಸೇವೆಯನ್ನು ರಾತ್ರಿ 11.55 ರವರೆಗೆ ವಿಸ್ತರಿಸಲಾಗಿದೆ.

ಮೆಜೆಸ್ಟಿಕ್‌ನಿಂದ ಕೊನೆಯ ರೈಲು

ಇತ್ತ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಏ.26 ರ ಮಧ್ಯರಾತ್ರಿ 12.35 ಕ್ಕೆ ಮೆಜೆಸ್ಟಿಕ್ ಮೆಟ್ರೋ ಸ್ಟೇಷನ್​ನಿಂದ ನಾಲ್ಕು ದಿಕ್ಕುಗಳಿಗೆ ಕೊನೆಯ ರೈಲು ಹೊರಡಲಿದೆ.


ಇದನ್ನೂ ಓದಿ:ಬೆಂಗಳೂರು: ಮೆಟ್ರೋ ಹಳಿ ಮೇಲೆ ಯುವಕನ ಓಡಾಟ; 27 ನಿಮಿಷ ಮೆಟ್ರೋ ಸೇವೆ ಸ್ಥಗಿತ

ಈ ಮೊದಲಿನಿಂದಲೂ ಮೆಟ್ರೋ, ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹಬ್ಬಗಳು, ಕ್ರಿಕೆಟ್​ ಹಾಗೂ ಇನ್ನಿತರ ವಿಶೇಷ ಸಂದರ್ಭಗಳಲ್ಲಿ ಮೆಟ್ರೋ ಸಂಚಾರ ಅವಧಿಯನ್ನು ವಿಸ್ತರಣೆಯನ್ನು ಮಾಡುತ್ತಲೇ ಬಂದಿದೆ. ಅದರಂತೆ ಏ.26 ರಂದು ಲೋಕಸಭಾ ಚುನಾವಣೆ ಮತದಾನ ಇರುವ ಹಿನ್ನಲೆ ಮಧ್ಯರಾತ್ರಿ ವರೆಗೆ ಸಂಚಾರ ಅವಧಿಯನ್ನು ವಿಸ್ತರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:59 pm, Wed, 24 April 24