AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Election: ಬನ್ನಿ, ನಿಮ್ಮ ನಾಯಕನ ಆಯ್ಕೆ ಮಾಡಿ: ಮತದಾನದ ಬಳಿಕ ಸುಧಾಮೂರ್ತಿ ಸಂದೇಶ

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಲೇಖಕಿ ಲೇಖಕಿ ಸುಧಾ ಮೂರ್ತಿ ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದು, ಕರ್ತವ್ಯ ಚಲಾಯಿಸುವಂತೆ ಯುವ ಜನತೆಗೆ ಕರೆ ನೀಡಿದ್ದಾರೆ.

Lok Sabha Election: ಬನ್ನಿ, ನಿಮ್ಮ ನಾಯಕನ ಆಯ್ಕೆ ಮಾಡಿ: ಮತದಾನದ ಬಳಿಕ ಸುಧಾಮೂರ್ತಿ ಸಂದೇಶ
ಸುಧಾಮೂರ್ತಿ
Ganapathi Sharma
|

Updated on: Apr 26, 2024 | 10:11 AM

Share

ಬೆಂಗಳೂರು, ಏಪ್ರಿಲ್ 26: ಲೋಕಸಭೆ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನ (Voting) ಇಂದು ನಡೆಯುತ್ತಿದ್ದು, ಕರ್ನಾಟಕದಲ್ಲಿ (Karnataka) 14 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಅವರ ಪತ್ನಿ, ಲೇಖಕಿ ಸುಧಾ ಮೂರ್ತಿ ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ವಿಶೇಷವಾಗಿ ಯುವಕರು ಬಂದು ಮತ ಚಲಾಯಿಸುವಂತೆ ಒತ್ತಾಯಿಸುತ್ತೇನೆ ಎಂದರು.

ಮನೆಯಲ್ಲಿ ಕುಳಿತುಕೊಳ್ಳಬೇಡಿ, ಹೊರಗೆ ಬಂದು ಮತ ಚಲಾಯಿಸಿ ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ. ನಿಮ್ಮ ನಾಯಕನನ್ನು ಆಯ್ಕೆ ಮಾಡಿ. ಗ್ರಾಮೀಣ ಪ್ರದೇಶದವರಿಗೆ ಹೋಲಿಸಿದರೆ ನಗರ ಪ್ರದೇಶದ ಜನರು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಯುವಕರು ಹೊರಗೆ ಬಂದು ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಎಂದು ಅವರು ಹೇಳಿದರು.

ಸುಧಾಮೂರ್ತಿ ಸಂದೇಶ

ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಕರ್ನಾಟಕದಲ್ಲಿ ಮೊದಲ ಹಂತದ 14 ಕ್ಷೇತ್ರಗಳಲ್ಲಿ 226 ಪುರುಷರು ಮತ್ತು 21 ಮಹಿಳೆಯರನ್ನು ಒಳಗೊಂಡಂತೆ ಒಟ್ಟು 247 ಅಭ್ಯರ್ಥಿಗಳು ಗೆಲುವಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಈ ಅಭ್ಯರ್ಥಿಗಳು ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳಿಂದ ಸ್ಪರ್ಧಿಸುತ್ತಿದ್ದು, 30,602 ಮತಗಟ್ಟೆಗಳಲ್ಲಿ 2.88 ಕೋಟಿ ಮತದಾರರು ನೋಂದಾಯಿಸಿಕೊಂಡಿದ್ದಾರೆ.

ಮತದಾನದ ಲೈವ್ ಅಪ್​ಡೇಟ್​ಗೆ ಓದಿ: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ

ಹಿಂದಿನ ಚುನಾವಣೆಗಿಂತ ಭಿನ್ನವಾಗಿ, ಈ ಲೋಕಸಭಾ ಚುನಾವಣೆಯು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮತ್ತು ಬಿಜೆಪಿ ಜೆಡಿಎಸ್ ಮೈತ್ರಿಕೂಟದ ನಡುವಿನ ನೇರ ಪೈಪೋಟಿಗೆ ಸಾಕ್ಷಿಯಾಗುತ್ತಿದೆ.

ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ
ನ್ಯಾಯ ಕೊಡಿಸುವ ಭರವಸೆ ಸುರ್ಜೇವಾಲಾ ನೀಡಿದ್ದಾರೆ: ಮಾಳವಿಕ