ಬೆಂಗಳೂರು, ಏಪ್ರಿಲ್ 26: ಲೋಕಸಭೆ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನ (Voting) ಇಂದು ನಡೆಯುತ್ತಿದ್ದು, ಕರ್ನಾಟಕದಲ್ಲಿ (Karnataka) 14 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಹಾಗೂ ಅವರ ಪತ್ನಿ, ಲೇಖಕಿ ಸುಧಾ ಮೂರ್ತಿ ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ವಿಶೇಷವಾಗಿ ಯುವಕರು ಬಂದು ಮತ ಚಲಾಯಿಸುವಂತೆ ಒತ್ತಾಯಿಸುತ್ತೇನೆ ಎಂದರು.
ಮನೆಯಲ್ಲಿ ಕುಳಿತುಕೊಳ್ಳಬೇಡಿ, ಹೊರಗೆ ಬಂದು ಮತ ಚಲಾಯಿಸಿ ಎಂದು ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ. ನಿಮ್ಮ ನಾಯಕನನ್ನು ಆಯ್ಕೆ ಮಾಡಿ. ಗ್ರಾಮೀಣ ಪ್ರದೇಶದವರಿಗೆ ಹೋಲಿಸಿದರೆ ನಗರ ಪ್ರದೇಶದ ಜನರು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಯುವಕರು ಹೊರಗೆ ಬಂದು ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಎಂದು ಅವರು ಹೇಳಿದರು.
#WATCH | Author and philanthropist Sudha Murty casts her votes in Lok Sabha elections in Bengaluru
“I want to tell everyone- don’t sit at home, come out and vote, choose your leader. I always feel that urban people vote less as compared to those in rural areas. I request… pic.twitter.com/bl7NGqx0Gu
— ANI (@ANI) April 26, 2024
ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಬೆಳಗ್ಗೆ 7 ಗಂಟೆಗೆ ಆರಂಭಗೊಂಡಿದ್ದು, 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಪ್ರಕ್ರಿಯೆ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಕರ್ನಾಟಕದಲ್ಲಿ ಮೊದಲ ಹಂತದ 14 ಕ್ಷೇತ್ರಗಳಲ್ಲಿ 226 ಪುರುಷರು ಮತ್ತು 21 ಮಹಿಳೆಯರನ್ನು ಒಳಗೊಂಡಂತೆ ಒಟ್ಟು 247 ಅಭ್ಯರ್ಥಿಗಳು ಗೆಲುವಿಗಾಗಿ ಪೈಪೋಟಿ ನಡೆಸುತ್ತಿದ್ದಾರೆ. ಈ ಅಭ್ಯರ್ಥಿಗಳು ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳಿಂದ ಸ್ಪರ್ಧಿಸುತ್ತಿದ್ದು, 30,602 ಮತಗಟ್ಟೆಗಳಲ್ಲಿ 2.88 ಕೋಟಿ ಮತದಾರರು ನೋಂದಾಯಿಸಿಕೊಂಡಿದ್ದಾರೆ.
ಮತದಾನದ ಲೈವ್ ಅಪ್ಡೇಟ್ಗೆ ಓದಿ: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ
ಹಿಂದಿನ ಚುನಾವಣೆಗಿಂತ ಭಿನ್ನವಾಗಿ, ಈ ಲೋಕಸಭಾ ಚುನಾವಣೆಯು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಮತ್ತು ಬಿಜೆಪಿ ಜೆಡಿಎಸ್ ಮೈತ್ರಿಕೂಟದ ನಡುವಿನ ನೇರ ಪೈಪೋಟಿಗೆ ಸಾಕ್ಷಿಯಾಗುತ್ತಿದೆ.
ಚುನಾವಣೆ ಸಂಬಂಧಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ