ಲೋಕಸಭೆ ಚುನಾವಣೆ: ಬೆಂಗಳೂರಿನಲ್ಲಿ ಮತಗಟ್ಟೆಗಳ ಸಂಖ್ಯೆ ಹೆಚ್ಚಿಸಲು ಮುಂದಾದ BBMP

Lok Sabha Election: 2024ರ ಲೋಕಸಭೆ ಚುನಾವಣೆಗೆ ಬೆಂಗಳೂರಿನಲ್ಲಿ 450 ಮತಗಟ್ಟೆಗಳ ಹೆಚ್ಚಳ ಮಾಡಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣಾ ವಿಭಾಗ ಮುಂದಾಗಿದೆ. ಆ ಮೂಲಕ ಲೋಕಸಭೆ ಚುನಾವಣೆಗೆ ಅಂತಿಮ ಹಂತದ ಸಿದ್ಧತೆಗೆ ಬಿಬಿಎಂಪಿ ಮುಂದಾಗಿದೆ. 2019ರ ಲೋಕಸಭೆ ಚುನಾವಣೆಯ ಮತದಾನ ಪ್ರಮಾಣ ಆಧರಿಸಿ ಕಡಿಮೆ ಮತದಾನವಾಗಿರುವ ವಾರ್ಡ್​ಗಳಲ್ಲಿ ಮತಗಟ್ಟೆಗಳ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ.

ಲೋಕಸಭೆ ಚುನಾವಣೆ: ಬೆಂಗಳೂರಿನಲ್ಲಿ ಮತಗಟ್ಟೆಗಳ ಸಂಖ್ಯೆ ಹೆಚ್ಚಿಸಲು ಮುಂದಾದ BBMP
ಬಿಬಿಎಂಪಿ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on:Nov 23, 2023 | 5:42 PM

ಬೆಂಗಳೂರು, ನವೆಂಬರ್​​ 23: ಪ್ರತಿ ಬಾರಿ ಬೆಂಗಳೂರಲ್ಲಿ ಮತದಾನ ಪ್ರಮಾಣ ಕಡಿಮೆ ಆಗುತ್ತಿರುವ ಹಿನ್ನೆಲೆ ಲೋಕಸಭೆ ಚುನಾವಣೆಗೆ ಅಂತಿಮ ಹಂತದ ಸಿದ್ಧತೆಗೆ ಬಿಬಿಎಂಪಿ (BBMP) ಮುಂದಾಗಿದೆ. ಆ ಮೂಲಕ ನಗರದ ಮತಗಟ್ಟೆಗಳ ಸಂಖ್ಯೆ ಹೆಚ್ಚಿಸಲು ಚುನಾವಣಾ ವಿಭಾಗ ಮುಂದಾಗಿದೆ. 2024ರ ಲೋಕಸಭೆ ಚುನಾವಣೆಗೆ ನಗರದಲ್ಲಿ 450 ಮತಗಟ್ಟೆಗಳ ಹೆಚ್ಚಳ ಮಾಡಲಾಗುತ್ತಿದೆ. 2019ರ ಲೋಕಸಭಾ ಚುನಾವಣೆಯ ಮತದಾನ ಪ್ರಮಾಣ ಆಧರಿಸಿ ಕಡಿಮೆ ಮತದಾನವಾಗಿರುವ ವಾರ್ಡ್​ಗಳಲ್ಲಿ ಮತಗಟ್ಟೆಗಳ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ.

ಲೋಕಸಭೆ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಜನವರಿ 5ರಂದು ಪ್ರಕಟವಾಗಲಿದೆ. ಮತದಾರರ ಪಟ್ಟಿಗೆ ಹೊಸ ಹೆಸರು ಸೇರ್ಪಡೆ, ಹೆಸರು ಬದಲಾವಣೆ ಹಾಗೂ ವೋಟರ್ ಐಡಿಗಳು ಅಂಚೆ ಮೂಲಕ ವಿತರಣೆ ಮಾಡಲಾಗುವುದು. 15 ದಿನದೊಳಗೆ ಅಂಚೆ ಮೂಲಕ ಹೊಸ ಗುರುತಿನ ಚೀಟಿಗಳ ರವಾನೆ ಮಾಡಲಾಗುತ್ತಿದೆ. ಹೊಸದಾಗಿ ನೋಂಣಿಗೆ voters.eci.gov.inನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ.

ಮತಗಟ್ಟೆಗಳು 

  • ಬೆಂಗಳೂರು ಕೇಂದ್ರ: 44,000,
  • ಬೆಂಗಳೂರು ದಕ್ಷಿಣ: 42,350
  • ಬೆಂಗಳೂರು ಉತ್ತರ: 52,000
  • ಬೆಂಗಳೂರು ಗ್ರಾಮಾಂತರ ಜಿಲ್ಲೆ: 97,000

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬರೋಬ್ಬರಿ 198 ವಾರ್ಡ್‌ಗಳು ಇವೆ. ಆದರೆ ಕಳೆದ ಬಿಜೆಪಿ ಸರ್ಕಾರ ಇದನ್ನ 243 ವಾರ್ಡ್‌ಗೆ ಹೆಚ್ಚಿಸಿತ್ತು. ಕೋರ್ಟ್‌ನಲ್ಲಿ ತಕರಾರು ಅದು ಇದು ಅಂತಾ ಚುನಾವಣೆ ನಡೆದೇ ಇಲ್ಲ. ಇದರ ನಡುವೆ ಇತ್ತೀಚೆಗೆ 243 ವಾರ್ಡ್‌ಗಳಿಂದ 225 ಕ್ಕೆ ವಾರ್ಡ್‌ಗಳ ಸಂಖ್ಯೆ ಇಳಿಸಿದ್ದ ಹೊಸ ಸರ್ಕಾರ, ಸಾರ್ವಜನಿಕರ ಅಕ್ಷೇಪಣೆ ಹಾಗೂ ಸಲಹೆ ಕೇಳಿತ್ತು.

ಇದನ್ನೂ ಓದಿ: ಪತ್ನಿಗೆ ಲೋಕಸಭೆ ಟಿಕೆಟ್​ ನೀಡುವಂತೆ ಸಿಎಂಗೆ ಬೇಡಿಕೆಯಿಟ್ಟ ಶಾಸಕ ವಿಜಯಾನಂದ ಕಾಶಪ್ಪನವರ್

ಈ ಸಂಬಂಧ 3 ಸಾವಿರದಷ್ಟು ಆಕ್ಷೇಪಣೆಗಳು ಬಂದಿದ್ದವು. ಎಲ್ಲವನ್ನೂ ಪರಿಶೀಲನೆ ಮಾಡಿದ ಬಳಿಕ 225 ವಾರ್ಡ್‌ಗಳನ್ನ ಅಧಿಕೃತಗೊಳಿಸಿ ಇವತ್ತು ಆದೇಶ ಹೊರಡಿಸಲಾಗಿತ್ತು. 2011ರ ಜನಗಣತಿಯ ಆಧಾರದ ಮೇಲೆ ಈ ವಿಂಗಡಣೆ ಮಾಡಲಾಗಿತ್ತು. 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಬಿಎಂಪಿ ಚುನಾವಣೆ ನಡೆಸಲು ತಯಾರಿ ನಡೆಸಿರುವ ಸರ್ಕಾರ 225 ವಾರ್ಡ್‌ಗಳನ್ನ ಅಧಿಕೃತಗೊಳಿಸಿ ಅಧಿಸೂಚನೆ ಹೊರಡಿಸಿತ್ತು.

ಇದನ್ನೂ ಓದಿ: ತುಮಕೂರು ಲೋಕಸಭೆ ಕ್ಷೇತ್ರದ ಟಿಕೆಟ್​ಗೆ ಬೇಡಿಕೆ ಇಟ್ಟಿದ್ದೇನೆ: ಸಚಿವ ಕೆಎನ್​ ರಾಜಣ್ಣ

2011ರ ಜನಗಣತಿ ಆಧಾರದ ಮೇಲೆ ವಾರ್ಡ್​ಗಳನ್ನ ಪುನರ್ ವಿಂಗಡಣೆ ಮಾಡಿ ಅಂತಿಮಗೊಳಿಸಲಾಗಿದೆ. ಇತ್ತೀಚೆಗೆ ವಾರ್ಡ್​ಗಳ ಹೆಸರನ್ನು ಸಹ ಬದಲಾವಣೆ ಮಾಡಲಾಗಿತ್ತು. ಹೊಸ ಪಟ್ಟಿಯಲ್ಲಿ ಬಿಬಿಎಂಪಿ ಐತಿಹಾಸಿಕ ವಾರ್ಡ್​ಗಳೇ ಮಾಯವಾಗಿವೆ. ಕೆಲ ಫೇಮಸ್ ಹೆಸರಿನ ವಾರ್ಡ್ ಹೆಸರುಗಳೇ ಅದಲು ಬದಲಾಗಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:41 pm, Thu, 23 November 23

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ