ಲೋಕಸಭಾ ಚುನಾವಣೆ: ಮತದಾನ ಮಾಡಲು ಊರುಗಳಿಗೆ ಹೊರಟವರಿಗೆ ಬಸ್ ಇಲ್ಲದೆ ಪರದಾಟ

ಲೋಕಸಭಾ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದಿಂದ ಈಗಾಗಲೇ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದರಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ನಾಳೆ (ಏಪ್ರಿಲ್​ 26) ಮತದಾನ ನಡೆಯಲಿದ್ದು, ಹಾಗಾಗಿ ಚುನಾವಣಾ ಕಾರ್ಯಕ್ಕೆ ಕೆಎಸ್​​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್ (Bus) ಬಳಕೆಯಾಗಿದೆ. ಇದರಿಂದ ಮತದಾನ ಮಾಡಲು ಊರಿಗೆ ತೆರಳುವ ಪ್ರಯಾಣಿಕರು ಬಸ್​ ಸಿಗದೇ ಪರದಾಡುತ್ತಿದ್ದಾರೆ.

ಲೋಕಸಭಾ ಚುನಾವಣೆ: ಮತದಾನ ಮಾಡಲು ಊರುಗಳಿಗೆ ಹೊರಟವರಿಗೆ ಬಸ್ ಇಲ್ಲದೆ ಪರದಾಟ
ಲೋಕಸಭಾ ಚುನಾವಣೆ ಹಿನ್ನಲೆ ಬಸ್​ಗಾಗಿ ಪ್ರಯಾಣಿಕರ ಪರದಾಟ
Follow us
Kiran Surya
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 25, 2024 | 5:56 PM

ಬೆಂಗಳೂರು, ಏ.25: ಲೋಕಸಭಾ ಚುನಾವಣೆಯ(Lok Sabha Election) ಕಾವು ಜೋರಾಗಿದ್ದು, ರಾಜ್ಯದಲ್ಲಿ ನಾಳೆ(ಏ.26)ಮೊದಲ ಹಂತದಲ್ಲಿ ಹದಿನಾಲ್ಕು ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಈ ಹಿನ್ನಲೆ ಎಲೆಕ್ಷನ್ ಡ್ಯೂಟಿಗಾಗಿ ಕೆಎಸ್ಆರ್​ಟಿಸಿ ಯಿಂದ 2100 ಬಸ್​ಗಳನ್ನು ನೀಡಲಾಗಿದೆ. ಹೀಗಾಗಿ ಬಸ್​ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಇತ್ತ ಮತದಾರರು ತಮ್ಮೂರಿನತ್ತ ಪ್ರಯಾಣ ಬೆಳಸಿದ್ದು, ಮೆಜೆಸ್ಟಿಕ್(Majestic) ಕೆಎಸ್ಆರ್​ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ.

ಬಸ್​ಗಳಿಲ್ಲದೆ ಪ್ರಯಾಣಿಕರ ಪರದಾಟ

ಚಿತ್ರದುರ್ಗ, ತುಮಕೂರು , ಹಾಸನ ಕಡೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದ್ದು, ಬಸ್​ಗಾಗಿ ಮೆಜೆಸ್ಟಿಕ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ಇನ್ನು 2,100 ಕೆಎಸ್​​ಆರ್​ಟಿಸಿ ಮತ್ತು 1,700 ಬಿಎಂಟಿಸಿ ಬಸ್​ಗಳನ್ನು ಆಯೋಗ ಬಳಕೆ​​ ಮಾಡಿಕೊಂಡ ಹಿನ್ನಲೆ ಸರ್ಕಾರಿ ಬಸ್​ಗಳಿಗೆ ಕಿ.ಮೀ.ಗೆ 57 ರೂ. ದರ ನಿಗದಿ ಮಾಡಲಾಗಿದೆ. ಹೀಗಾಗಿ ಎರಡು ದಿನ ಸರ್ಕಾರಿ ಬಸ್​ಗಳ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ ಇದೆ.

ಇದನ್ನೂ ಓದಿ:ಲೋಕಸಭಾ ಚುನಾವಣೆ 2024: ಮೈಸೂರಿನ ಪುಟ್ಟ ಮಗುವಿನ ತೊದಲ ನುಡಿಯಲ್ಲಿ ಮತದಾನ ಜಾಗೃತಿ; ಇಲ್ಲಿದೆ ವಿಡಿಯೋ

ಇನ್ನು ಚುನಾವಣಾ ಕಾರ್ಯಕ್ಕೆ ಖಾಸಗಿ ವಾಹನಗಳನ್ನು ಕೂಡ ಬಳಸಿಕೊಳ್ಳಲಾಗಿದೆ. ಅದರಂತೆ ಪ್ರತಿ ವಾಹನಕ್ಕೂ ಪ್ರತ್ಯೇಕ ದರ ಫಿಕ್ಸ್​​ ಮಾಡಲಾಗಿದ್ದು, ಮುಂಗಡ ಹಣ ಕೂಡ ಪಾವತಿ ಮಾಡಲಾಗಿದೆ. ಈ ಹಿನ್ನಲೆ ಮತದಾನ ಮಾಡಲು ತೆರಳುವ ಪ್ರಯಾಣಿಕರು ಬಸ್​ಗಾಗಿ ಪರದಾಡುವಂತಾಗಿದೆ.​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Thu, 25 April 24

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು